Homeಮುಖಪುಟಕೋಮು ದ್ವೇಷ ಹರಡಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ಕಂಗನಾ ರಣಾವತ್‌ಗೆ ನೋಟಿಸ್!

ಕೋಮು ದ್ವೇಷ ಹರಡಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ಕಂಗನಾ ರಣಾವತ್‌ಗೆ ನೋಟಿಸ್!

ಅವರ ವಿರುದ್ಧ ನೋಂದಾಯಿಸಲಾದ ಎಫ್ಐಆರ್‌ಗೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಹಾಜರಾಗುವಂತೆ ಕೇಳಿಕೊಂಡಿದ್ದೇವೆ- ಮುಂಬೈ ಪೊಲೀಸ್

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೆಲ್‌ಗೆ ಮುಂಬೈ ಪೊಲೀಸ್ ಬುಧವಾರ ನೋಟಿಸ್ ನೀಡಿದ್ದು, ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಮತ್ತು ವಿಚಾರಣೆಗೆ ಮುಂದಿನ ವಾರ ಪೊಲೀಸರ ಮುಂದೆ ಹಾಜರಾಗುವಂತೆ ಕೋರಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕಲ್ಯಾಣದ ಕನಸಿನ ‘ಕೂಡಲಸಂಗಮ’ ದೃಶ್ಯರೂಪಕ: ನಿರಂತರದ ವಿಭಿನ್ನ ರಂಗ ಪ್ರಯೋಗ

ಬಾಲಿವುಡ್ ಕಾಸ್ಟಿಂಗ್ ನಿರ್ದೇಶಕ ಮತ್ತು ಫಿಟ್ನೆಸ್ ತರಬೇತುದಾರ ಮುನಾವರ್ ಅಲಿ ಸಯ್ಯದ್ ಅವರು ಸಲ್ಲಿಸಿದ ದೂರಿನ ಬಗ್ಗೆ ತನಿಖೆ ನಡೆಸುವಂತೆ ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿಯ ಟ್ವೀಟ್ ಮತ್ತು ಇತರ ಹೇಳಿಕೆಗಳನ್ನು ಉಲ್ಲೇಖಿಸಿ ಪೊಲೀಸರಿಗೆ ಆದೇಶಿಸಿತ್ತು.

ನ್ಯಾಯಾಲಯದ ನಿರ್ದೇಶನದ ಮೇರೆಗೆ, ಬಾಂದ್ರಾ ಪೊಲೀಸರು ರಣಾವತ್ ಮತ್ತು ಆಕೆಯ ಸಹೋದರಿಯ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಕೃತ್ಯಗಳು) ಮತ್ತು 124 (ದೇಶದ್ರೋಹ), 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ನಾವು ರಣಾವತ್ ಮತ್ತು ಆಕೆಯ ಸಹೋದರಿಗೆ ನೋಟಿಸ್ ನೀಡಿದ್ದೇವೆ. ಅವರ ವಿರುದ್ಧ ನೋಂದಾಯಿಸಲಾದ ಎಫ್ಐಆರ್‌ಗೆ ಸಂಬಂಧಿಸಿದಂತೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಂಡಿದ್ದೇವೆ. ಸೋಮವಾರ ಮತ್ತು ಮಂಗಳವಾರ ಹಾಜರಿರಲು ಅವರನ್ನು ಕೇಳಲಾಗಿದೆ” ಎಂದು ಅವರು ಹೇಳಿದರು.

ಮುನಾವರ್ ಅಲಿ ಸಯ್ಯದ್ ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ, “ಕಳೆದ ಎರಡು ತಿಂಗಳಿನಿಂದ ‘ಸ್ವಜನ ಪಕ್ಷಪಾತದ ಹಬ್’ ಎಂದು ಟ್ವೀಟ್ ಮಾಡುವ ಮೂಲಕ ಮತ್ತು ಟೆಲಿವಿಷನ್ ಸಂದರ್ಶನಗಳ ಮೂಲಕ ಬಾಲಿವುಡ್ ಅನ್ನು ದೂಷಿಸುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಅವರು ತುಂಬಾ ಆಕ್ಷೇಪಾರ್ಹ ಹೇಳಿಕೆ‌ಗಳನ್ನು ಟ್ವೀಟ್ ಮಾಡಿದ್ದಾರೆ. ಇದು ದೂರುದಾರರ ಧಾರ್ಮಿಕ ಭಾವನೆಗಳನ್ನು ಮಾತ್ರವಲ್ಲದೆ ಅನೇಕ ಕಲಾವಿದರ ಭಾವನೆಗಳನ್ನು ಸಹ ನೋಯಿಸುತ್ತದೆ. ಅವರು ಕಲಾವಿದರನ್ನು ಕೋಮುವಾದಿ ವರ್ಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...