Homeಕರ್ನಾಟಕಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ - ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ...

ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪ್ರಮಾಣ ಮಾಡುವಂತೆ ಕೇಳಿದ್ದ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ ಅವರು, “ನಾನು ಈಗಾಗಲೇ ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಮತ ಕಳ್ಳತನದ ಬಗ್ಗೆ ಸಮಗ್ರ ವರದಿ ನೀಡಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿನ ಮತದಾರರ ಪಟ್ಟಿಯಲ್ಲೂ ಗೊಂದಲಗಳಿವೆ ಎಂದು ಉಲ್ಲೇಖಿಸಿ, ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕದ ಒಂದು ಕೋಟಿ ಹೊಸ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಹಾದೇವಪುರದಲ್ಲಿ ಮತ ಕಳ್ಳತನದ ಪುರಾವೆಗಳನ್ನು ಮುಂದಿಟ್ಟ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ಕರ್ನಾಟಕದ ಬೆಂಗಳೂರು ಮಹಾದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ವಿಶ್ಲೇಷಣೆಯ ವರದಿಯನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದರು. “ಮಹಾದೇವಪುರದಲ್ಲಿರುವ 6.5 ಲಕ್ಷ ಮತಗಳಲ್ಲಿ 1 ಲಕ್ಷದ 2,250 ಮತಗಳು ಕಳ್ಳತನವಾಗಿವೆ ಎಂದು ನಾವು ಖಚಿತವಾಗಿ ಹೇಳುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಿಸಿದರು.

ಈ ಮತ ಕಳ್ಳತನದ ಪ್ರಕ್ರಿಯೆಯು ಐದು ವಿಧಗಳಲ್ಲಿ ನಡೆದಿದೆ ಎಂದು ಅವರು ವಿವರಿಸಿದರು:

ದ್ವಿಪ್ರತಿ ನಮೂದು (Duplicate Entries): ಒಬ್ಬ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಸೇರಿಸಲಾಗಿದೆ ಮತ್ತು ಆತ ಐದು ಮತಗಟ್ಟೆಗಳಲ್ಲಿ ಮತದಾನ ಮಾಡಿರುವುದು ಕಂಡುಬಂದಿದೆ. ಈ ರೀತಿಯ 12,000 ಕಳ್ಳ ಮತಗಳನ್ನು ಗುರುತಿಸಲಾಗಿದೆ.

ನಕಲಿ ವಿಳಾಸಗಳು: ಒಂದೇ ಕೊಠಡಿಯಿರುವ ಮನೆಗಳಲ್ಲಿ 40 ರಿಂದ 80 ಮತದಾರರ ಹೆಸರುಗಳನ್ನು ಸೇರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ಆ ವಿಳಾಸಗಳಲ್ಲಿ ಯಾರೂ ಇರಲಿಲ್ಲ. ಈ ರೀತಿಯ 40,000 ನಕಲಿ ಮತದಾರರನ್ನು ಗುರುತಿಸಲಾಗಿದೆ.

ಫೋಟೋ ಇಲ್ಲದ ಮತದಾರರು: ಕೆಲವು ಮತದಾರರ ಗುರುತಿನ ಚೀಟಿಗಳಲ್ಲಿ ಫೋಟೋ ಇರಲಿಲ್ಲ.

ನಮೂನೆ 6ರಲ್ಲಿ ಅಕ್ರಮಗಳು: ಹೊಸ ಮತದಾರರನ್ನು ಸೇರಿಸಲು ಬಳಸುವ ಫಾರ್ಮ್ 6 ರಲ್ಲಿ ಅವ್ಯವಹಾರಗಳು ನಡೆದಿವೆ. 85-90 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಹೊಸ ಮತದಾರರನ್ನಾಗಿ ಸೇರಿಸಲಾಗಿದೆ. ಈ ರೀತಿ 34,000 ಮತದಾರರ ಹೆಸರುಗಳು ಕಂಡುಬಂದಿವೆ.

ಬಹು ಮತದಾನದ ಹಕ್ಕು: ಒಬ್ಬ ವ್ಯಕ್ತಿಗೆ ಬೆಂಗಳೂರು, ಲಕ್ನೋ ಮತ್ತು ವಾರಣಾಸಿಯಲ್ಲೂ ಮತದಾನದ ಹಕ್ಕನ್ನು ನೀಡಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. “ನಾವು ಈ ಅಕ್ರಮಗಳ ಬಗ್ಗೆ ಪ್ರಶ್ನಿಸಿದಾಗ, ಚುನಾವಣಾ ಆಯೋಗ ದಾಖಲೆಗಳನ್ನು ಬದಲಿಸಿ, ದಾಖಲೆಗಳನ್ನು ಅಳಿಸಿಹಾಕುತ್ತಿದೆ” ಎಂದು ಅವರು ಹೇಳಿದರು. ಬಿಹಾರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್‌ಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜನರು ಪ್ರಶ್ನಿಸಲು ಆರಂಭಿಸಿದರೆ ತಮ್ಮ “ನಾಟಕ” ಕೊನೆಯಾಗುತ್ತದೆ ಎಂಬ ಭಯದಿಂದ ಆಯೋಗವು ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು, “ನಾವು ಚುನಾವಣಾ ಆಯೋಗದಿಂದ ಕಳೆದ 10 ವರ್ಷಗಳ ಡಿಜಿಟಲ್ ಮತದಾನ ಮಾಹಿತಿ ಮತ್ತು ಮತಗಟ್ಟೆಗಳ ವೀಡಿಯೋ ರೆಕಾರ್ಡ್‌ಗಳನ್ನು ಕೇಳುತ್ತಿದ್ದೇವೆ. ಈ ಮಾಹಿತಿ ಸಿಕ್ಕರೆ ದೇಶಾದ್ಯಂತ ನಡೆದಿರುವ ಮತ ಕಳ್ಳತನದ ಬಗ್ಗೆ ನಾವು ಪುರಾವೆಗಳೊಂದಿಗೆ ತೋರಿಸುತ್ತೇವೆ. ಕೇವಲ ಒಂದು ಕ್ಷೇತ್ರದಲ್ಲಿ ಇದನ್ನು ಸಾಬೀತು ಮಾಡಲು ನಮಗೆ ಆರು ತಿಂಗಳು ಬೇಕಾಯಿತು” ಎಂದು ಹೇಳಿದರು.

ಈ ಮತ ಕಳ್ಳತನ ಕೇವಲ ರಾಜ್ಯಮಟ್ಟದಲ್ಲಿ ನಡೆಯುತ್ತಿಲ್ಲ, ಬದಲಾಗಿ ಇದು ದೇಶಾದ್ಯಂತ ವ್ಯಾಪಕವಾಗಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನರೇಂದ್ರ ಮೋದಿ ಕೇವಲ 25 ಸ್ಥಾನಗಳ ಅಂತರದಿಂದ ಪ್ರಧಾನಿಯಾಗಿದ್ದಾರೆ. ಈ ರೀತಿಯ ಮತ ಕಳ್ಳತನ ನಡೆದಿಲ್ಲವೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಯು 35 ಸಾವಿರ ಅಂತರದಿಂದ ಜಯಗಳಿಸಿದ 25 ಸ್ಥಾನಗಳಲ್ಲೂ ಮತ ಕಳ್ಳತನ ನಡೆದಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ರಕ್ಷಣೆಯ ಕರೆ

ಈ ಮತ ಕಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. “ಸಂವಿಧಾನವು ನಮ್ಮ ಪವಿತ್ರ ಗ್ರಂಥ. ಅದು ಈ ದೇಶದ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿ” ಎಂದು ಅವರು ಹೇಳಿದರು. ಚುನಾವಣಾ ಆಯೋಗವು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದು, ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತಿಮವಾಗಿ, ರಾಹುಲ್ ಗಾಂಧಿ ಅವರು ಕರ್ನಾಟಕದ ರಾಜ್ಯ ಸರ್ಕಾರವನ್ನು ಈ ವಿಷಯದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು. “ಮಹಾದೇವಪುರದ ಈ ಕ್ರಿಮಿನಲ್ ಕೃತ್ಯದ ತನಿಖೆ ನಡೆಸಿ, ನೈಜತೆ ಹೊರತರುವಂತೆ” ಮನವಿ ಮಾಡಿದರು. ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದರು.

“ಬಿಜೆಪಿಯ ಸಿದ್ಧಾಂತವು ಸಂವಿಧಾನ ವಿರೋಧಿಯಾಗಿದೆ” ಎಂದು ಹೇಳಿದ ರಾಹುಲ್ ಗಾಂಧಿ, ನಾವು ಸತ್ಯವನ್ನು ಹೊರತರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಆಯೋಗವು ನಮಗೆ ಸರಿಯಾದ ಮಾಹಿತಿ ನೀಡದಿದ್ದರೆ ನಾವು ಮತ್ತಷ್ಟು 20 ಕ್ಷೇತ್ರಗಳ ಮಾಹಿತಿಯನ್ನು ಹೊರತರುತ್ತೇವೆ” ಎಂದು ಅವರು ಎಚ್ಚರಿಸಿದರು. ಈ ಮತ ಕಳ್ಳತನವು ದೇಶದಾದ್ಯಂತ ನಡೆದಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳು ಇದರ ವಿರುದ್ಧ ಒಟ್ಟಾಗಿ ಪ್ರಶ್ನೆ ಮಾಡುತ್ತಿವೆ ಎಂದು ಅವರು ಹೇಳಿದರು.

ಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...