Homeಮುಖಪುಟ'ಸಾವರ್ಕರ್‌ಗೆ ಮಾನಹಾನಿ ಮಾಡಿದ್ದಾರೆ ಎಂಬ ದೂರು ಮೇಲ್ನೋಟಕ್ಕೆ ಸತ್ಯ..'; ರಾಹುಲ್ ವಿರುದ್ಧ ತನಿಖಾ ವರದಿ ಸಲ್ಲಿಸಿದ...

‘ಸಾವರ್ಕರ್‌ಗೆ ಮಾನಹಾನಿ ಮಾಡಿದ್ದಾರೆ ಎಂಬ ದೂರು ಮೇಲ್ನೋಟಕ್ಕೆ ಸತ್ಯ..’; ರಾಹುಲ್ ವಿರುದ್ಧ ತನಿಖಾ ವರದಿ ಸಲ್ಲಿಸಿದ ಪುಣೆ ಪೊಲೀಸರು

- Advertisement -
- Advertisement -

‘2023ರಲ್ಲಿ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ಮಾಡಿದ ಭಾಷಣದಲ್ಲಿ, ಹಿಂದುತ್ವ ಸಿದ್ಧಾಂತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಡಿ ಸಾವರ್ಕರ್ ಅವರ ಮೊಮ್ಮಗ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ ದೂರಿನಲ್ಲಿ ಪ್ರಾಥಮಿಕ ಸತ್ಯವಿದೆ’ ಎಂದು ಪುಣೆ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ.

ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಅಕ್ಷಿ ಜೈನ್ ಅವರ ನ್ಯಾಯಾಲಯದಲ್ಲಿ ವರದಿಯನ್ನು ಸಲ್ಲಿಸಲಾಗಿದೆ ಎಂದು ದೂರುದಾರರಾದ ಸತ್ಯಕಿ ಅಶೋಕ್ ಸಾವರ್ಕರ್ ಅವರನ್ನು ಪ್ರತಿನಿಧಿಸುವ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ಹೇಳಿದರು. “ಕೋರ್ಟ್ ರಾಹುಲ್ ಗಾಂಧಿಗೆ ಹಾಜರಾಗುವಂತೆ ನೋಟಿಸ್ ನೀಡಬಹುದು” ಎಂದು ಕೋಲ್ಹಟ್ಕರ್ ಹೇಳಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಅವರ ವಕೀಲರು ನಗರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಹೇಳಿದ್ದಾರೆ.

ಸತ್ಯಕಿ ಸಲ್ಲಿಸಿರುವ ಪುರಾವೆಗಳನ್ನು ಪರಿಶೀಲಿಸಿ, ಮೇ 27ರೊಳಗೆ ವರದಿ ಸಲ್ಲಿಸುವಂತೆ ವಿಶ್ರಂಬಾಗ್ ಪೊಲೀಸರಿಗೆ ನ್ಯಾಯಾಲಯ ಸೂಚಿಸಿತ್ತು.

ಮಾರ್ಚ್ 2023 ರಲ್ಲಿ ಲಂಡನ್‌ನಲ್ಲಿ ಮಾಡಿದ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಿವಂಗತ ವಿ ಡಿ ಸಾವರ್ಕರ್ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸತ್ಯಕಿ ಸಾವರ್ಕರ್ ಅವರು ಕಳೆದ ಏಪ್ರಿಲ್‌ನಲ್ಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು ಎಂದು ವಿಶ್ರಂಬಾಗ್ ಪೊಲೀಸರು ತಿಳಿಸಿದ್ದಾರೆ  ಎಂದು ಕೊಲ್ಹಟ್ಕರ್ ಹೇಳಿದರು.

ದೂರಿನ ಪ್ರಕಾರ, ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿ ವಿ ಡಿ ಸಾವರ್ಕರ್ ಅವರು ಮತ್ತು ಅವರ ಐದರಿಂದ ಆರು ಸ್ನೇಹಿತರು ಒಮ್ಮೆ ಮುಸ್ಲಿಂ ವ್ಯಕ್ತಿಯನ್ನು ಹೊಡೆದರು ಮತ್ತು ಅವರು (ಸಾವರ್ಕರ್) ಸಂತೋಷಪಟ್ಟರು ಎಂದು ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಸತ್ಯಕಿ ಸಾವರ್ಕರ್ ಅವರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದು, ವಿಡಿ ಸಾವರ್ಕರ್ ಅವರು ಎಲ್ಲಿಯೂ ಅಂತಹ ಯಾವುದೇ ವಿಷಯವನ್ನು ಬರೆದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದು, ರಾಹುಲ್ ಗಾಂಧಿಯವರ ಆರೋಪ ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದೆ ಎಂದು ದೂರಿದ್ದಾರೆ.

“ವಿಶ್ರಂಬಾಗ್ ಪೊಲೀಸರು ಇಂದು ನ್ಯಾಯಾಲಯದ ಮುಂದೆ ವರದಿಯನ್ನು ಸಲ್ಲಿಸಿದರು ಮತ್ತು ತಮ್ಮ ತನಿಖೆಯಲ್ಲಿ, ವಿ ಡಿ ಸಾವರ್ಕರ್ ಅವರ ಯಾವುದೇ ಪುಸ್ತಕದಲ್ಲಿ ಇಂತಹ ಘಟನೆಯ ಬಗ್ಗೆ ಬರೆದಿಲ್ಲ ಎಂದು ತಿಳಿದುಬಂದಿದೆ. ಆದರೆ, ಗಾಂಧಿಯವರು ತಮ್ಮ ಭಾಷಣದಲ್ಲಿ ಆ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಮಾರ್ಚ್ 2023 ರಲ್ಲಿ ಲಂಡನ್‌ನಲ್ಲಿ ಮತ್ತು ಸಾವರ್ಕರ್‌ರನ್ನು ಮಾನನಷ್ಟಗೊಳಿಸಿದರು” ಎಂದು ಕೊಲ್ಹಟ್ಕರ್ ಹೇಳಿದರು.

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ವಿಡಿ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ದೂರಿನಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹಾಯಕ ಪೊಲೀಸ್ ನಿರೀಕ್ಷಕ ತುಕಾರಾಂ ನಿಂಬಾಳ್ಕರ್ ಅವರನ್ನು ಸಂಪರ್ಕಿಸಿದಾಗ ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವುದನ್ನು ಖಚಿತಪಡಿಸಿದರು.

ಇದನ್ನೂ ಓದಿ; ಪಾಯಲ್ ಕಪಾಡಿಯಾ ಬಗ್ಗೆ ಭಾರತ ಹೆಮ್ಮೆ ಪಡುತ್ತಿದ್ದಾರೆ ಅವರ ಮೇಲಿನ ಕೇಸ್ ಹಿಂಪಡೆಯಿರಿ: ಶಶಿ ತರೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...