Homeದಲಿತ್ ಫೈಲ್ಸ್ದಲಿತ ಕುಟುಂಬದ ಮೇಲೆ ಹಲ್ಲೆ ಆರೋಪ: ಸಿಒ, ಎಸ್‌ಎಚ್‌ಒ ಸೇರಿ 15 ಪೊಲೀಸರ ವಿರುದ್ಧ ಎಫ್‌ಐಆರ್...

ದಲಿತ ಕುಟುಂಬದ ಮೇಲೆ ಹಲ್ಲೆ ಆರೋಪ: ಸಿಒ, ಎಸ್‌ಎಚ್‌ಒ ಸೇರಿ 15 ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶ

- Advertisement -
- Advertisement -

ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿ, ಮಹಿಳೆಯೊಬ್ಬರನ್ನು ಪೊಲೀಸ್ ಕಸ್ಟಡಿಯಲ್ಲಿ ಹಿಂಸಿಸಿ, ಆಕೆಯ ಮಗನನ್ನು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಸರ್ಕಲ್ ಆಫೀಸರ್ (ಸಿಒ), ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸೇರಿದಂತೆ 15 ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉತ್ತರ ಪ್ರದೇಶದ ಅಮ್ರೋಹಾದ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯ ಆದೇಶಿಸಿದೆ.

ಸೆಪ್ಟೆಂಬರ್ 20ರಂದು ಮಂಗ್ರೌಲಿ ಗ್ರಾಮದಲ್ಲಿ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎನ್ನಲಾಗಿದೆ. ದೂರುದಾರರು ಸಲ್ಲಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನ್ಯಾಯಾಲಯ, ದೂರುದಾರರ ಆರೋಪಗಳಿಗೆ ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಹಸನ್‌ಪುರ ಪೊಲೀಸ್ ಠಾಣೆಗೆ ಸಂಬಂಧವಿಲ್ಲದ ಹಿರಿಯ ಅಧಿಕಾರಿಯೊಬ್ಬರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ನಿರ್ದೇಶಿಸಿದೆ.

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ನಸೀಮಾ ಖಾನಂ ಅವರು ಈ ಆದೇಶ ಹೊರಡಿಸಿದ್ದಾರೆ. ಹಸನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೌಲಿ ಗ್ರಾಮದ ನಿವಾಸಿ ರೀನಾ ದೇವಿ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ದೇಶನ ನೀಡಿದೆ.

ಸೆಪ್ಟೆಂಬರ್ 20ರಂದು ಸಂಜೆ ಸುಮಾರು 4 ಗಂಟೆಗೆ ತನ್ನ ಪತಿ ರಣವೀರ್ ಸಿಂಗ್ ಮತ್ತು ಮೈದುನ ಧರಂಪಾಲ್ ನಡುವಿನ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಲ್ ಆಫೀಸರ್ ಪಂಕಜ್ ಕುಮಾರ್ ತ್ಯಾಗಿ, ಅಂದಿನ ಠಾಣಾಧಿಕಾರಿ ರಾಜೇಶ್ ಕುಮಾರ್ ತಿವಾರಿ, ಸಬ್‌ಇನ್‌ಸ್ಪೆಕ್ಟರ್ ಸಂಜಯ್ ತೋಮರ್ ಸೇರಿದಂತೆ ಸುಮಾರು 15 ಪೊಲೀಸರು ತಮ್ಮ ಮನೆಗೆ ಬಂದಿದ್ದರು ಎಂದು ರೀನಾ ದೇವಿ ಆರೋಪಿಸಿದ್ದಾರೆ.

ನ್ಯಾಯಾಲಯದ ಆದೇಶದ ಪ್ರಕಾರ, ಪೊಲೀಸರು ಮನೆಯ ಸಿಸಿಟಿವಿ ಕ್ಯಾಮೆರಾಗಳಿಗೆ ಸಂಪರ್ಕ ಹೊಂದಿದ್ದ ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ಅನ್ನು ತೆಗೆದುಕೊಂಡು ಹೋಗಿದ್ದರು. ಅಲ್ಲದೆ, ದಾರಿ ನಿರ್ಮಿಸುವ ಉದ್ದೇಶದಿಂದ ಗೋಡೆಯೊಂದನ್ನು ಕೆಡವುವಂತೆ ಧರಂಪಾಲ್‌ಗೆ ಸೂಚಿಸಿದ್ದರು ಎಂದು ರೀನಾ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ತಾನು ಆಕ್ಷೇಪ ವ್ಯಕ್ತಪಡಿಸಿದಾಗ ಪೊಲೀಸರು ಜಾತಿ ನಿಂದನಾತ್ಮಕ ಪದಗಳನ್ನು ಬಳಸಿ ನಿಂದಿಸಿದರು. ಹಲ್ಲೆ ನಡೆಸಿ, ಬೆರಳುಗಳನ್ನು ತಿರುಚಿ, ಕೂದಲು ಹಿಡಿದು ಎಳೆದಾಡಿದರು ಎಂದು ಅವರು ಆರೋಪಿಸಿದ್ದಾರೆ. ಮಧ್ಯಪ್ರವೇಶಿಸಿದ ತನ್ನ ಮಗ ಹರ್ಷ್ ಕುಮಾರ್ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಎಂಟು ವರ್ಷದ ಕಿರಿಯ ಮಗ ರಚಿತ್‌ನನ್ನೂ ಪೊಲೀಸರು ಥಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಳಿಕ ಪೊಲೀಸರು ಬಲವಂತವಾಗಿ ತನ್ನನ್ನು ಹಸನ್‌ಪುರ ಪೊಲೀಸ್ ಠಾಣೆಗೆ ಕರೆದೊಯ್ದು, ಅಲ್ಲಿ ಚರ್ಮದ ಬೆಲ್ಟ್‌ ಮತ್ತು ಬೆತ್ತಗಳಿಂದ ಹಲ್ಲೆ ನಡೆಸಿದರು. ತನ್ನ ಮಗನನ್ನು ನಕಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ರೀನಾ ಆರೋಪಿಸಿದ್ದಾರೆ. ಅಲ್ಲದೆ, ಮನೆಯಿಂದ 1.19 ಲಕ್ಷ ರೂಪಾಯಿ ನಗದು ಹಾಗೂ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದೂ ದೂರಿದ್ದಾರೆ.

ದೂರುದಾರರು ಸಾಕ್ಷ್ಯವಾಗಿ ಸಲ್ಲಿಸಿದ್ದ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಿದ ನ್ಯಾಯಾಲಯ, ಅವು ದೂರಿನಲ್ಲಿನ ಆರೋಪಗಳಿಗೆ ಪೂರಕವಾಗಿವೆ ಎಂದು ಗಮನಿಸಿದೆ. ಆರೋಪಿತ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದೆ. ಇದರೊಂದಿಗೆ, ಸಿಸಿಟಿವಿ ದೃಶ್ಯಾವಳಿಗಳು, ಡಿವಿಆರ್ ಮತ್ತು ಮೊಬೈಲ್ ಫೋನ್‌ಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು ಎಂದೂ ನಿರ್ದೇಶಿಸಿದೆ.

ತನಿಖೆಯಲ್ಲಿ ಯಾವುದೇ ಹಿತಾಸಕ್ತಿ ಸಂಘರ್ಷ ಉಂಟಾಗದಂತೆ ಹಸನ್‌ಪುರ ಪೊಲೀಸ್ ಠಾಣೆಗೆ ಸಂಬಂಧವಿಲ್ಲದ ಹಿರಿಯ ಅಧಿಕಾರಿಯೊಬ್ಬರಿಗೆ ತನಿಖೆಯ ಜವಾಬ್ದಾರಿ ವಹಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಮ್ರೋಹಾ ಪೊಲೀಸ್ ವರಿಷ್ಠಾಧಿಕಾರಿ ಲಖನ್ ಸಿಂಗ್ ಯಾದವ್, ಪ್ರಕರಣದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಆರೋಪಗಳ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನ್ಯಾಯಾಲಯದ ಆದೇಶ ಸ್ವೀಕರಿಸಿದ ಬಳಿಕ ನಿಗದಿತ ಪ್ರಕ್ರಿಯೆಯಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್ಐಆರ್’ ಬಳಿಕ ‘ಎಸ್ಎಸ್ಆರ್’ ಮೂಲಕ ಮುಖ ಉಳಿಸಿಕೊಳ್ಳಲು ಚುನಾವಣಾ ಆಯೋಗದ ಕಸರತ್ತು: SIR ವಿರೋಧಿ ಜನಪರ ಸಂಘಟನೆಗಳಿಂದ ತೀವ್ರ ಹೋರಾಟದ ಎಚ್ಚರಿಕೆ

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ತರ್ಕಹೀನ, ದೋಷಪೂರಿತ ಎಂದು ಆರೋಪ; SIR ಪಟ್ಟಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ; ನವೆಂಬರ್ 26ರಿಂದ ದೇಶದ 100 ನಗರಗಳಲ್ಲಿ ಪ್ರಜಾತಂತ್ರ ಮರುಸ್ಥಾಪನಾ ಅಭಿಯಾನಕ್ಕೆ ಸಿದ್ಧತೆ ಬೆಂಗಳೂರು: ಮತದಾರರ...

ಒಡಿಶಾದ ಬುಡಕಟ್ಟು ಪ್ರದೇಶದಲ್ಲಿ ಗಣಿ ಭೂಸ್ವಾಧೀನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಬುಡಕಟ್ಟು ಸಮುದಾಯಗಳ ಪೂರ್ವಾನುಮತಿ ಕಡ್ಡಾಯ ಎಂದು ತೀರ್ಪು

ಒಡಿಶಾದ ಸುಂದರಗಢ ಜಿಲ್ಲೆಯ ಅನುಸೂಚಿತ ಗ್ರಾಮ ಪ್ರದೇಶಗಳಲ್ಲಿ ಡಾಲ್ಮಿಯಾ ಸಿಮೆಂಟ್ ಸ್ಥಾವರಕ್ಕಾಗಿ ಕೈಗೊಂಡಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬುಡಕಟ್ಟು ಪ್ರದೇಶಗಳಲ್ಲಿ ಭೂಸ್ವಾಧೀನಕ್ಕೆ ಮುಂದುವರಿಯುವ ಮೊದಲು ಸ್ಥಳೀಯ ಗ್ರಾಮ ಪಂಚಾಯತ್‌ ಅಥವಾ...

ಪ್ಯಾಲೆಸ್ತೀನ್ ನಾಯಕ ಯಾಸರ್ ಅರಾಫಾತ್ ಸಲಹೆಗಾರರಾಗಿದ್ದ ಅಹ್ಮದ್ ತಿಬಿ ಇಸ್ರೇಲ್ ಸಂಸತ್ತಿನ ಉಪಸಭಾಪತಿಯಾಗಿ ಆಯ್ಕೆ

ಇಸ್ರೇಲ್‌ ಸಂಸತ್ತಾದ ನೆಸೆಟ್‌ಗೆ (Knesset) ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಆಡಳಿತರೂಢ ಒಕ್ಕೂಟಕ್ಕೆ ಸೋಲಾಗಿರುವುದು ಹಲವು ಗಮನಾರ್ಹ ಬದಲಾವಣೆಗಳಿಗೆ ಕಾರಣವಾಗಿದೆ. ಅವುಗಳಲ್ಲಿ ಒಂದು ಅಹ್ಮದ್ ತಿಬಿ ಅವರು ಉಪಸಭಾಪತಿಯಾಗಿ...

“ಚುನಾವಣೆ ಬಹಿಷ್ಕರಿಸಿದರೆ ಪ್ರಜಾಪ್ರಭುತ್ವ ಅಂತ್ಯ”: ರಾಹುಲ್ ಗಾಂಧಿ ಎಚ್ಚರಿಕೆ; ಆಯೋಗದೊಳಗಿಂದಲೇ ಮಾಹಿತಿ ಸಿಗುತ್ತಿದೆ ಎಂದ ವಿಪಕ್ಷ ನಾಯಕ

ಅಮೆರಿಕ: ಭಾರತೀಯ ಪ್ರಜಾಪ್ರಭುತ್ವಕ್ಕೆ ಗಂಭೀರ ಅಪಾಯ ಎದುರಾಗಿದೆ ಎಂಬ ಮಾಹಿತಿ ಚುನಾವಣಾ ಆಯೋಗದ ಒಳಗಿನಿಂದಲೇ ವಿರೋಧ ಪಕ್ಷಗಳಿಗೆ ಲಭ್ಯವಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...

ಸೈನಿಕರು ಸಂಕಲ್ಪ ಮಾಡಿದರೆ ಪಂಜಾಬ್ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯ: ಪಂಜಾಬ್‌ನಲ್ಲಿ ಹೊಸ ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್!

ಜಲಂಧರ್: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (AAP) ಸರ್ಕಾರವನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸಂತ ಗುರು ರವಿದಾಸ್...

ಮಹಿಳಾ ಪತ್ರಕರ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ : ದೆಹಲಿ ಪೊಲೀಸರಿಂದ ದೂರುಗಳ ವಿಚಾರಣೆ ಮುಕ್ತಾಯ

ಅಕ್ಟೋಬರ್‌ನಲ್ಲಿ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೂವರು ಮಹಿಳಾ ಪತ್ರಕರ್ತರು...

ತಿರುಪರಂಕುಂದ್ರಂ ವಿವಾದ | ಹೈಕೋರ್ಟ್ ಆದೇಶಕ್ಕೆ ತಡೆ ನೀಡದಿದ್ದರೆ ಸಾವಿರಾರು ಸರ್ವೆ ಕಂಬಗಳು ಧಾರ್ಮಿಕ ಸ್ವರೂಪ ಪಡೆಯಲಿವೆ : ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಸರ್ಕಾರ ವಾದ

ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾದ ಸಮೀಪದ ಕಲ್ಲಿನ ಸ್ತಂಭದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಬುಧವಾರ (ನ.18)...

ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ಜಾಮೀನು : ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು-ವರದಿ

ಅತ್ಯಾಚಾರ, ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಿರ್ಧಾರದಿಂದ 'ಭಯಭೀತರಾದ' ಮತ್ತು 'ಆಘಾತಕ್ಕೊಳಗಾದ' ಬಿಲ್ಕಿಸ್ ಬಾನು ಹಾಗೂ ಅವರ ಕುಟುಂಬಸ್ಥರು ಈ ತಿಂಗಳ...

ಪತ್ರಕರ್ತರು ಬೇರೆ, ರೀಲ್-ಮೇಕರ್‌ಗಳು ಬೇರೆ: ರೀಲ್-ಮೇಕರ್‌ಗಳಿಗೆ ಮಾಧ್ಯಮ ರಕ್ಷಣೆ ಅನ್ವಯಿಸುವುದಿಲ್ಲ: ದೆಹಲಿ ಪೊಲೀಸರಿಂದ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಪತ್ರಕರ್ತರಿಗೆ ನೀಡಲಾದ ರಕ್ಷಣಾ ಆದೇಶಗಳು ಸಾಮಾಜಿಕ ಜಾಲತಾಣಗಳ ರೀಲ್-ಮೇಕರ್‌ಗಳು ಹಾಗೂ ಕಂಟೆಂಟ್ ಕ್ರಿಯೇಟರ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ...

ಮತ್ತೆ ಉಲ್ಬಣಗೊಂಡ ಸಂಘರ್ಷ : ಕುವೈತ್‌ನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ವೈಮಾನಿಕ ದಾಳಿ

ಹೊರ್ಮುಝ್ ಜಲಸಂಧಿಯಲ್ಲಿರುವ ಕೇಶ್ಮ್ ದ್ವೀಪದ (Qeshm Island) ಮೇಲೆ ಅಮೆರಿಕ ದಾಳಿ ನಡೆಸಿದ ನಂತರ, ಕುವೈತ್‌ನಲ್ಲಿರುವ ಅಮೆರಿಕದ ಡ್ರೋನ್ ಮತ್ತು ಕ್ಷಿಪಣಿ ನೆಲೆಗಳನ್ನು ರಾತ್ರೋರಾತ್ರಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಇದು...