Homeಮುಖಪುಟಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ಶಾರ್ಜಾದಲ್ಲಿ ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಬಂಧ ಕೇರಳದ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಿಪಂಚಿಕಾ ಅವರ ಗಂಡ ನಿತೀಶ್ ಅವರನ್ನು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಗುರುತಿಸಲಾಗಿದ್ದು, ಎರಡನೇ ಆರೋಪಿಯಾಗಿ ಅತ್ತಿಗೆ ನೀತು ಮತ್ತು ಮೂರನೇ ಆರೋಪಿಯಾಗಿ ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ.

ಕಳೆದ ಮಂಗಳವಾರ ಶಾರ್ಜಾದ ಅಲ್ ನಹ್ದಾದಲ್ಲಿ 33 ವರ್ಷದ ವಿಪಂಚಿಕಾ ಮತ್ತು ಅವರ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಳೆದ ಏಳು ವರ್ಷಗಳಿಂದ ಶಾರ್ಜಾದ ಖಾಸಗಿ ಸಂಸ್ಥೆಯಲ್ಲಿ ಗುಮಾಸ್ತೆ ಕೆಲಸ ಮಾಡುತ್ತಿದ್ದ ವಿಪಂಚಿಕಾ, ನವೆಂಬರ್ 2020 ರಲ್ಲಿ ನಿತೀಶ್ ಅವರನ್ನು ವಿವಾಹವಾಗಿದ್ದರು.

ಸಾವಿಗೂ ಮುನ್ನ ವಿಪಂಚಿಕಾ ಬರೆದಿದ್ದಾರೆ ಎನ್ನಲಾದ ಆತ್ಮಹತ್ಯೆ ಪತ್ರ ಅವರ ಫೇಸ್‌ಬುಕ್ ಪುಟದಲ್ಲಿ ಕಾಣಿಸಿಕೊಂಡಿತ್ತು. ಆದರೆ, ನಂತರ ಅದನ್ನು ಅಳಿಸಲಾಗಿದೆ ಎಂಬ ವರದಿಗಳಿವೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿಪಂಚಿಕಾ, “ತನ್ನ ಪತಿ, ಮಾವ ಮತ್ತು ಅತ್ತಿಗೆಯಿಂದ ತಾನು ಎದುರಿಸಿದ ತೀವ್ರ ಚಿತ್ರಹಿಂಸೆಯನ್ನು ಹೇಳಿಕೊಂಡಿದ್ದರು. ವರದಕ್ಷಿಣೆ ಕಿರುಕುಳ, ದಾಖಲೆಗಳನ್ನು ಬಚ್ಚಿಟ್ಟುಕೊಂಡು ಗಂಡ ತನ್ನಿಂದ ಪ್ರತ್ಯೇಕವಾಗಲು ಪ್ರಯತ್ನಿಸಿದ್ದು ಸೇರಿದಂತೆ ಎಲ್ಲವನ್ನೂ ಆಕೆ ವಿವರಿಸಿದ್ದರು ಎಂದು ವರದಿಗಳು ಹೇಳಿವೆ.

“ಅವರೆಲ್ಲರಿಗೂ ನನ್ನ ಹಣ ಬೇಕು” ಎಂದು ತನ್ನ ಪೋಸ್ಟ್‌ನಲ್ಲಿ ವಿಪಂಚಿಕಾ ಹೇಳಿದ್ದರು. ಅತ್ತೆ-ಮಾವ ತನ್ನ ಗಂಡನೊಂದಿಗೆ ಸಾಮಾನ್ಯ ಸಂಬಂಧ ಹೊಂದುವುದನ್ನು ತಡೆಯುತ್ತಿದ್ದರು. “ಅವನಿಗೆ ನಿನಗಿಂತ ಒಳ್ಳೇ ಹುಡುಗಿ ಸಿಗುತ್ತಿದ್ದಳು” ಎಂದು ಅವಮಾನಿಸುತ್ತಿದ್ದರು” ಎಂದು ವಿಪಂಚಿಕಾ ಆರೋಪಿಸಿದ್ದರು.

ವಿಪಂಚಿಕಾಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಆಕೆಯ ಕೂದಲನ್ನು ಕತ್ತರಿಸಿ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಮನನೊಂದು ಆಕೆ ಸಾವಿಗೆ ಶರಣಾಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಪೊಲೀಸರು ಪ್ರಕರಣ ದಾಖಲಿಸಿರುವುದು ನಮಗೆ ಭರವಸೆ ಮೂಡಿಸಿದೆ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ವಿಪಂಚಿಕಾ ಅವರ ಕುಟುಂಬ ತಿಳಿಸಿದೆ. ತಮ್ಮ ಮಗಳು ಮತ್ತು ಮೊಮ್ಮಗಳ ಶವಗಳನ್ನು ತಕ್ಷಣ ಭಾರತಕ್ಕೆ ತರಬೇಕು ಮತ್ತು ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ವಿಪಂಚಿಕಾ ಅವರ ತಾಯಿ ಶೈಲಜಾ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಕಚೇರಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಭಾರತೀಯ ರಾಯಭಾರ ಕಚೇರಿ ಮತ್ತು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

“ನನ್ನ ಮಗಳ ಆತ್ಮಹತ್ಯೆ ಹಿಂದಿನ ಕಾರಣ ನನಗೆ ಗೊತ್ತಾಗಬೇಕು. ಇದಕ್ಕೆ ಕಾರಣರಾದ ಎಲ್ಲರನ್ನೂ ಕಾನೂನಿನ ಮುಂದೆ ತರಬೇಕು. ಪಾರದರ್ಶಕ ತನಿಖೆ ನಡೆಯಬೇಕು. ನನಗೆ ನ್ಯಾಯ ಬೇಕು” ಎಂದು ಶೈಲಜಾ ಹೇಳಿದ್ದಾರೆ.

ವಿಪಂಚಿಕಾ ತನ್ನ ಪತಿ ಮತ್ತು ಅವರ ಕುಟುಂಬದಿಂದ ತೀವ್ರ ಕಿರುಕುಳ ಅನುಭವಿಸಿದ್ದಾಳೆ. ನನ್ನ ಮಗಳು ಆಕೆಯ ಗಂಡನನ್ನು ಪ್ರೀತಿಸಿದ್ದೇ ತಪ್ಪು ಮತ್ತು ಮಗಳ ಮೌನವೇ ಈ ದುರಂತಕ್ಕೆ ಕಾರಣ ಎಂದು ಶೈಲಜಾ ಹೇಳಿದ್ದು, ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಲು ಯಾವುದೇ ಹಂತಕ್ಕೂ ಹೋಗುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...