Homeಕರ್ನಾಟಕಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ 'ನಕಲಿ ಮತದಾನ'!

ಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ‘ನಕಲಿ ಮತದಾನ’!

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಟಿಎಂ ಲೇಔಟ್‌ನ ಮತಗಟ್ಟೆಯಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿ ಬಂದಿದೆ.

ಈ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ನಕಲಿ ಮತದಾನ ನಡೆದಿರುವ ಆರೋಪದ ಬಳಿಕ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಿದ್ದು, ಸಂಬಂಧಿತ ನಿಯಮಗಳ ಅಡಿಯಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್‌ನ ನಲವತ್ತು ವರ್ಷದ ಸುಲ್ತಾನಾ ಮತ ಚಲಾಯಿಸಲು ಬೂತ್‌ ಸಂಖ್ಯೆ 195ಕ್ಕೆ ತೆರಳಿದ್ದರು, ಆದರೆ ಅವರ ಮತವನ್ನು ಈಗಾಗಲೇ ಹಾಕಲಾಗಿದೆ ಎಂದು ಮತಗಟ್ಟೆಯ ಸಿಬ್ಬಂದಿಗಳು ಹೇಳಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ನಾನು ಬೂತ್‌ಗೆ ಹೋದಾಗ ಚುನಾವಣಾ ಆಯೋಗದ ಅಧಿಕಾರಿಗಳು, ನಾನು ಈಗಾಗಲೇ ಮತವನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಅನೇಕರಿಗೆ ಈ ರೀತಿ ಹೇಳುತ್ತಿರುವುದನ್ನು ನಾನು ಗಮನಿಸಿದ್ದೇನೆ ಎಂದು ಸುಲ್ತಾನಾ ಹೇಳಿದ್ದಾರೆ.

ಈ ಬಗ್ಗೆ ಚುನಾವಣಾಧಿಕಾರಿಗಳನ್ನು ಪ್ರಶ್ನಿಸಿದಾಗ, ಬುರ್ಖಾ ಧರಿಸಿದ್ದರಿಂದ ನಮಗೆ ಸರಿಯಾಗಿ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮತದಾರರು ಮತ್ತು ಚುನಾವಣಾಧಿಕಾರಿಗಳ ನಡುವಿನ ವಾಗ್ವಾದದ ವಿಡಿಯೋ ವೈರಲ್‌ ಆಗಿದೆ, ಮತದಾರರು ಮತಗಟ್ಟೆಯೊಳಗೆ ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವುದನ್ನು ವಿಡಿಯೋ ತೋರಿಸುತ್ತಿದೆ. ಅದೇ ಮತಗಟ್ಟೆಯ ಇತರ ಇಬ್ಬರು ಮತದಾರರು ಕೂಡ  ತಮ್ಮ ಮತಗಳನ್ನು ಬೇರೆ ಯಾರೋ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಕಲಿ ಮತಗಳ ನಿಖರ ಸಂಖ್ಯೆ ಸರಿಯಾಗಿ ತಿಳಿದು ಬಂದಿಲ್ಲ. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಮೇಯರ್ ಬಿಎನ್ ಮಂಜುನಾಥ್ ರೆಡ್ಡಿ, ಆ ಮತಗಟ್ಟೆಯಲ್ಲಿ 9 ಮತದಾರರು ಇದೇ ಪರಿಸ್ಥಿತಿ ಎದುರಿಸಿದ್ದಾರೆ. ನಾವು ರಿಜಿಸ್ಟರ್‌ನಲ್ಲಿ  ನಕಲಿ ಮತದಾನ ಮಾಡಿದವರ ಸಹಿಯನ್ನು ತೋರಿಸಲು ಅಧಿಕಾರಿಗಳನ್ನು ಕೇಳಿದಾಗ, ಚುನಾವಣಾ ಅಧಿಕಾರಿಗಳು ನಿರಾಕರಿಸಿದರು. ಸಾಕಷ್ಟು ಪ್ರತಿಭಟನೆ ಮತ್ತು ವಾದದ ನಂತರ ಅವರು ಅಂತಿಮವಾಗಿ 5.30ಕ್ಕೆ ಜನರಿಗೆ ಮತ ಚಲಾಯಿಸಲು ಅವಕಾಶ ಮಾಡಿಕೊಟ್ಟರು ಎಂದು ಹೇಳಿದ್ದಾರೆ.

ಚುನಾವಣಾ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಇಂತಹ ಒಂದೇ ಒಂದು ಘಟನೆ ಮಾತ್ರ ನಡೆದಿದೆ. ನಾವು ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದೇವೆಯೇ ಹೊರತು ಸವಾಲಿನ ಮತಕ್ಕಲ್ಲ. ಘಟನೆ ಬೆಳಕಿಗೆ ಬಂದ ನಂತರ ಮತಗಟ್ಟೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತ ಮತದಾರರಿಗೆ ಚಾಲೆಂಜಿಂಗ್‌ ವೋಟ್‌’ ಹಾಕಲು ಅವಕಾಶ ನೀಡಬೇಕಿತ್ತು ಆದರೆ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಲಿಲ್ಲ. ಬದಲಿಗೆ ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದಾರೆ ಎಂದು ಮಂಜುನಾಥ್ ರೆಡ್ಡಿ ಹೇಳಿದ್ದಾರೆ. ಮತದಾರರು ತಮ್ಮ ಬದಲಿಗೆ ಯಾರಾದರೂ ಮೊದಲೇ ಮತದಾನ ಮಾಡಿದ್ದರೆ 49P ಅಡಿಯಲ್ಲಿ ಮತ್ತೆ ಮತ ಚಲಾಯಿಸಬಹುದು. ಈ ಟೆಂಡರ್ ಮತಗಳನ್ನು ಬ್ಯಾಲೆಟ್ ಪೇಪರ್‌ಗಳಲ್ಲಿ ಹಾಕಲಾಗುತ್ತದೆ. ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ.

ಇದನ್ನು ಓದಿ:ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...