Homeಕರ್ನಾಟಕಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಉಪನ್ಯಾಸಕರಿಂದ ಬೆದರಿಕೆ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ಪೋಷಕರನ್ನು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕೌನ್ಸೆಲಿಂಗ್ ನಡೆಸಿ ಧೈರ್ಯ ತುಂಬಿದ್ದಾರೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜೊತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್‌ನಲ್ಲಿ ಚಾಟ್ ಮಾಡುತ್ತಿದ್ದ. ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದರು. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ವರದಿ ಹೇಳಿದೆ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ, “ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ” ಎಂದು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, “ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ” ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗುತ್ತಿದೆ.

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -