Homeಮುಖಪುಟಮಹಾರಾಷ್ಟ್ರ | ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಭುಗಿಲೆದ್ದ ಪ್ರತಿಭಟನೆ

ಮಹಾರಾಷ್ಟ್ರ | ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಭುಗಿಲೆದ್ದ ಪ್ರತಿಭಟನೆ

ರೈಲು ತಡೆದು ಆಕ್ರೋಶ, ಶಾಲೆಯ ಪ್ರಾಂಶುಪಾಲರ ಸಹಿತ ಮೂವರು ಅಮಾನತು

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ನಾಲ್ಕು ವರ್ಷ ವಯಸ್ಸಿನ ಇಬ್ಬರು ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಶಾಲಾ ಸಹಾಯಕ ಆರೋಪಿ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಖಂಡಿಸಿ ಮಕ್ಕಳ ಹೆತ್ತವರು ಮತ್ತು ಸಾರ್ವಜನಿಕರು ಇಂದು (ಆ.20) ಬೆಳಿಗ್ಗೆಯಿಂದ ಬದ್ಲಾಪುರದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಶಾಲಾ ಆಡಳಿತ ಮಂಡಳಿ ಸೋಮವಾರ ಪ್ರಾಂಶುಪಾಲರು, ತರಗತಿ ಶಿಕ್ಷಕಿ, ಮಹಿಳಾ ಅಟೆಂಡರ್ ಮತ್ತು ಪ್ರಕರಣದ ಆರೋಪಿ ಎಂದು ಬಂಧಿಸಲ್ಪಟ್ಟಿರುವ ಗುತ್ತಿಗೆ ನೌಕರನನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಮಗುವಿನ ಪೋಷಕರು ಪೊಲೀಸ್ ಠಾಣೆಗೆ ಹೋದಾಗ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ ಪೊಲೀಸ್ ಠಾಣೆ ಪ್ರಭಾರಿ ಸುಭದಾ ಶಿಟೋಲೆ ಅವರನ್ನು ಥಾಣೆ ಪೊಲೀಸರ ವಿಶೇಷ ಶಾಖೆಗೆ ವರ್ಗಾಯಿಸಲಾಗಿದೆ.

ಘಟನೆಯಿಂದ ಸಿಟ್ಟಿಗೆದ್ದ ಸ್ಥಳೀಯರು ಬದ್ಲಾಪುರ ನಗರ ಬಂದ್‌ಗೆ ಕರೆ ನೀಡಿದ್ದು, ಮಹಿಳಾ ಸಂಘಟನೆಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದೆ. ಡಿಸಿಪಿ ಸುಧಾಕರ ಪಠಾರೆ ಅವರು ನಾಗರಿಕರೊಂದಿಗೆ ಸಭೆ ನಡೆಸಿ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಶಾಲಾ ಆಡಳಿತವು ಕೆಲವು ತುರ್ತು ಕ್ರಮಗಳನ್ನು ಘೋಷಿಸಿದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ತನಿಖಾ ಸಮಿತಿಯನ್ನು ರಚಿಸಿದೆ. ಈ ಹಿಂದೆ ಸಿಸಿಟಿವಿ ಕ್ಯಾಮರಾಗಳು ಇಲ್ಲದ ಸ್ಥಳಗಳಲ್ಲೂ ಕ್ಯಾಮರಾ ಅಳವಡಿಸಲಾಗುತ್ತಿದೆ.

ಮಂಗಳವಾರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗುಂಪಿನ ಭಾಗವಾಗಿರುವ ಮಹಿಳೆಯೊಬ್ಬರು ಮಾತನಾಡಿ, “ಪ್ರಕರಣ ಬೆಳಕಿಗೆ ಬಂದ ನಾಲ್ಕು ದಿನಗಳ ಬಳಿಕ, ನಾಗರಿಕರು ಬಂದ್ ಘೋಷಿಸಿದ ನಂತರ ಶಾಲಾ ಆಡಳಿತವು ಕ್ರಮ ತೆಗೆದುಕೊಂಡಿದೆ. ನಾವು ಶಾಂತಿಯುತ ಬಂದ್ ಮತ್ತು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ನಾಗರಿಕರ ಜೊತೆಗೆ ರಿಕ್ಷಾ ಯೂನಿಯನ್‌, ವರ್ತಕರ ಸಂಘ, ಜ್ಯುವೆಲ್ಲರ್ಸ್‌ ಅಸೋಸಿಯೇಷನ್‌, ಇದೀಗ ಕೆಲ ರಾಜಕೀಯ ಪಕ್ಷಗಳೂ ಬಂದ್‌ನಲ್ಲಿ ಪಾಲ್ಗೊಳ್ಳಲು ಮುಂದಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಶಾಲೆಯ ಇತರ ಮಕ್ಕಳನ್ನೂ ವಿಚಾರಣೆ ನಡೆಸಲಾಗಿದೆ. ಆದರೆ, ಇದುವರೆಗೆ ಲೈಂಗಿಕ ದೌರ್ಜನ್ಯದ ಯಾವುದೇ ಹೊಸ ದೂರುಗಳು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

ಆಗಸ್ಟ್ 17ರಂದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಶಾಲೆಯ ಸಹಾಯಕನಾಗಿದ್ದ ಗುತ್ತಿಗೆ ನೌಕರ ಮಕ್ಕಳನ್ನು ಶೌಚಾಲಯಕ್ಕೆ ಕರೆದೊಯ್ದು, ಅವರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ವಿರುದ್ದ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಘಟನೆ ಮತ್ತು ಆ ಬಳಿಕ ನಿರಂತರ ಸುದ್ದಿಯಾಗುತ್ತಿರು ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೇಶದಾದ್ಯಂತ ಜನರ ಆಕ್ರೋಶಕ್ಕೆ ಕಾರಣವಾಗಿದೆ. ದೇಶದ ವಿವಿದೆಡೆ ಅತ್ಯಾಚಾರ ಕೃತ್ಯಗಳ ವಿರುದ್ದ ದೊಡ್ಡ ಮಟ್ಟದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಕೋಲ್ಕತ್ತಾ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಟಾಸ್ಕ್‌ ಫೋರ್ಸ್ ಕೂಡ ರಚಿಸಿದೆ.

ಇದನ್ನೂ ಓದಿ : ಅಧಿಕಾರಶಾಹಿಯಲ್ಲಿ ಲ್ಯಾಟರಲ್ ಎಂಟ್ರಿ ಎಂದರೇನು..? ಜಾಹೀರಾತು ಹಿಂತೆಗೆದುಕೊಳ್ಳುವಂತೆ ಯುಪಿಎಸ್‌ಸಿಗೆ ಸೂಚಿಸಿದ್ಯಾಕೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...