Homeಮುಖಪುಟಭಾರತ್‌ ಜೋಡೋದಲ್ಲಿ ಕೆಜಿಎಫ್‌- 2 ಹಾಡು ಬಳಕೆ ಆರೋಪ; ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ...

ಭಾರತ್‌ ಜೋಡೋದಲ್ಲಿ ಕೆಜಿಎಫ್‌- 2 ಹಾಡು ಬಳಕೆ ಆರೋಪ; ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ‘ಕೆಜಿಎಫ್‌ ಚಾಪ್ಟರ್‌-2’ ಸಿನಿಮಾದ ಸಂಗೀತವನ್ನು ಅನಧಿಕೃತವಾಗಿ ಬಳಸಿದ್ದಾರೆ ಎಂಬ ಆರೋಪದ ಮೇಲೆ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೆಜಿಎಫ್- 2ರ ಸಂಗೀತವನ್ನು ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ಎಂ.ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುವಾಗ ಪ್ಲೇ ಮಾಡಲಾಗಿರುವ ಕೆಜಿಎಫ್‌-2ರ ಹಿಂದಿ ಅವತರಣಿಕೆಯ ‘ಸುಲ್ತಾನ್’ ಹಾಡಿನ ಕುರಿತು ದೂರು ಸಲ್ಲಿಕೆಯಾಗಿದೆ. ರಾಹುಲ್ ಅವರ ಪಾದಯಾತ್ರೆ ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸುವುದನ್ನು ತೋರಿಸುವ ವೀಡಿಯೊದಲ್ಲಿ ಹಾಡು ಬಳಸಲಾಗಿದೆ ಎಂದು ಆಕ್ಷೇಪ ಎತ್ತಲಾಗಿದೆ.

ಜೈರಾಮ್ ರಮೇಶ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಭಾರತ್‌ ಜೋಡೋ ಯಾತ್ರೆಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಜಿಎಫ್ 2ರ ಚಿತ್ರದ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೂರುದಾರರ ಒಡೆತನದ ಜನಪ್ರಿಯ ಧ್ವನಿಮುದ್ರಿಕೆಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಮಾಡಲಾಗಿದೆ. ಬಳಸಲಾದ ಧ್ವನಿಮುದ್ರಿಕೆಗಳು ಕೆಜಿಎಫ್ ಚಾಪ್ಟರ್‌‌ 2 (ಹಿಂದಿ ಆವೃತ್ತಿ)‍ ಸಿನಿಮಾಕ್ಕೆ ಸೇರಿವೆ ಎಂದು ಆಕ್ಷೇಪಿಸಲಾಗಿದೆ.

“ವೀಡಿಯೊಗಳನ್ನು ನೋಡಿದಾಗ ಆರೋಪಿಗಳು ಮೋಸದಿಂದ, ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಅನಧಿಕೃತವಾಗಿ ಮತ್ತು ಕಾನೂನುಬಾಹಿರವಾಗಿ ದೂರುದಾರನ ಮಾಲೀಕತ್ವದ ಧ್ವನಿಮುದ್ರಿಕೆಯನ್ನು ಬಳಸಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತ್‌ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಜನವರಿ 30, 2023ರಂದು ಜಮ್ಮುವನ್ನು ತಲುಪುವ ಗುರಿಯನ್ನು ಹೊಂದಿದೆ. ಈ ಯಾತ್ರೆಯು ಇದುವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹಾದುಹೋಗಿದೆ.

ಇದನ್ನೂ ಓದಿರಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಕೃತಿಚೌರ್ಯದ ಆರೋಪಗಳು ಇತ್ತೀಚೆಗೆ ಸದ್ದು ಮಾಡುತ್ತಿವೆ. ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಇತ್ತೀಚೆಗೆ ಪ್ರಕರಣ ದಾಖಲಿಸಿತ್ತು. ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿತ್ತು.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ದೂರಲಾಗಿದೆ.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ನೀಡಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...