Homeಮುಖಪುಟಪ್ರೀತಿ ಒಪ್ಪದ ಸಹಪಾಠಿಯನ್ನು ಕೊಂದು, ತನಗೂ ಚಾಕುವಿನಿಂದ ಇರಿದುಕೊಂಡ ವಿದ್ಯಾರ್ಥಿ

ಪ್ರೀತಿ ಒಪ್ಪದ ಸಹಪಾಠಿಯನ್ನು ಕೊಂದು, ತನಗೂ ಚಾಕುವಿನಿಂದ ಇರಿದುಕೊಂಡ ವಿದ್ಯಾರ್ಥಿ

- Advertisement -
- Advertisement -

ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿ ಒಪ್ಪದ ಸಹಪಾಠಿ ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದಿದ್ದಲ್ಲದೆ, ತನಗೂ ಚಾಕುವಿನಿಂದ ಇರಿದುಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಬೆಂಗಳೂರಿನ ರಾಜಾನುಕುಂಟೆಯಲ್ಲಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಈ ಘಟನೆ ಜರುಗಿದ್ದು, ವಿದ್ಯಾರ್ಥಿನಿ  ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ತೀವ್ರ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನೆಯ ವಿವರ

ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಟೆಕ್ ಓದುತ್ತಿದ್ದ ಲಯಸ್ಮಿತಾ ಎಂಬ ವಿದ್ಯಾರ್ಥಿನಿಗೆ ನೃಪತುಂಗ ಕಾಲೇಜಿನಲ್ಲಿ ಓದುತ್ತಿದ್ದ ಪವನ್ ಕಲ್ಯಾಣ್ ಎಂಬ ವಿದ್ಯಾರ್ಥಿ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಅಲ್ಲದೇ ಆಕೆ ಕೂಡ ಪ್ರೀತಿಸಬೇಕೆಂದು ಒತ್ತಾಯಿಸಿದ್ದಾನೆ. ಆದರೆ ಆ ವಿದ್ಯಾರ್ಥಿನಿಯು ಈತನ ಪ್ರೀತಿಗೆ ಒಪ್ಪಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕಾಲೇಜಿಗೆ ನುಗ್ಗಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಆನಂತರ ತನ್ನ ಕತ್ತು ಕೊಯ್ದುಕೊಂಡಿದ್ದಾನೆ. ಇದನ್ನು ಗಮನಿಸಿದ ಇತರರು ಗಾಯಗೊಂಡ ಪವನ್ ಕಲ್ಯಾಣ್‌ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಇಬ್ಬರೂ ಸಹ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕಾಚಿಪುರ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ರಾಜಾನುಕುಂಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...