Homeಮುಖಪುಟ‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

- Advertisement -
- Advertisement -

ಯೋಗಗುರು ಬಾಬಾ ರಾಮ್‌ದೇವ್‌ ಅಲೋಪತಿ ಔಷಧ ಸಂಬಂಧಿಸಿದಂತೆ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಭಾನುವಾರ ರಾತ್ರಿ ಹಿಂಪಡೆದಿದ್ದಾರೆ. ‘ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಅಲೋಪಥಿಕ್ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸತ್ತಿದ್ದಾರೆ’ ಎಂದು ಅವರು ಹೇಳಿರುವ ವಿಡಿಯೊವೊಂದು ವೈರಲ್‌ ಆಗಿದ್ದು, ದೇಶದಾದ್ಯತಂತ ಭಾರಿ ಆಕ್ರೋಶ ಉಂಟುಮಾಡಿತ್ತು.

ಈ ಹೇಳಿಕೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಸ್ಥೆ ಕಟುವಾಗಿ ಟೀಕಿಸಿತ್ತು ಮತ್ತು ರಾಮದೇವ್ ಅವರಿಗೆ ನೋಟಿಸ್‌ ನೀಡಿತ್ತು. ಸಾಂಕ್ರಾಮಿಕ ಕಾಯ್ದೆ ಅಡಿ ಅವರ ಮೇಲೆ ಪ್ರಕರಣ ದಾಖಲಿಸಲು ಐಎಂಎ ಸರ್ಕಾರಕ್ಕೆ ಮನವಿ ಕೂಡಾ ಮಾಡಿತ್ತು. ಅಲ್ಲದೆ ದೆಹಲಿ ವೈದ್ಯಕೀಯ ಸಂಘವು ದೆಹಲಿಯ ದರಿಯಾಗಂಜ್‌ ಪೊಲೀಸ್‌ ಠಾಣೆಯಲ್ಲಿ ರಾಮ್‌ದೇವ್‌ ಅವರ ವಿರುದ್ದ ಪ್ರಕರಣವನ್ನೂ ದಾಖಲಿಸಿತ್ತು.

ದೇಶದಾದ್ಯಂತ ರಾಮ್‌ದೇವ್‌ ವಿರುದ್ದ ಆಕ್ರೋಶ ಹೆಚ್ಚುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಹೇಳಿಕೆಯನ್ನು ಹಿಂಪಡೆಯುವಂತೆ ಭಾನುವಾರ ಪತ್ರ ಬರೆದಿದ್ದರು. ಅವರು ಪತ್ರದಲ್ಲಿ, “ಅಲೋಪತಿ ಔಷಧಿಗಳ ಬಗ್ಗೆ ನಿಮ್ಮ ಹೇಳಿಕೆಯಿಂದ ದೇಶದ ಜನರು ತುಂಬಾ ನೊಂದಿದ್ದಾರೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ದೇಶದ ಜನರಿಗೆ ದೇವರಿದ್ದಂತೆ. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನೀವು ಕೊರೊನಾ ಯೋಧರನ್ನಷ್ಟೇ ಅವಮಾನಿಸಿದ್ದಲ್ಲ, ದೇಶದ ಜನರ ಭಾವನೆಗಳನ್ನು ನೋಯಿಸಿದ್ದೀರಿ. ನಿಮ್ಮ ಸ್ಪಷ್ಟೀಕರಣ ಮಾತ್ರ ಸಾಕಾಗುವುದಿಲ್ಲ, ಈ ಬಗ್ಗೆ ನೀವು ಗಂಭೀರವಾಗಿ ಯೋಚಿಸಿ ನಿಮ್ಮ ಹೇಳಿಕೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಹರ್ಷವರ್ಧನ್‌ ಪತ್ರದಲ್ಲಿ ಹೇಳಿದ್ದರು.

ಈ ಪತ್ರಕ್ಕೆ ಭಾನುವಾರ ರಾತ್ರಿ ಪ್ರತಿಕ್ರಿಯೆ ನೀಡಿರುವ ರಾಮ್‌ದೇವ್‌, “ಗೌರವಾನ್ವಿತ ಹರ್ಷವರ್ಧನ್‌ ಅವರೆ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ, ವೈದ್ಯಕೀಯ ಪದ್ಧತಿಗಳ ಹೋರಾಟದ ಈ ಸಂಪೂರ್ಣ ವಿವಾದಕ್ಕೆ ವಿಷಾದಿಸುತ್ತಾ ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಪತ್ರವೊಂದನ್ನು ಕಳುಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಮ್‌ದೇವ್‌ ಅವರ ವಿವಾದಾತ್ಮಕ ವಿಡಿಯೊ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಅವರು, “ಅಲೋಪತಿ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆಯು ಚಿಕಿತ್ಸೆ ಸಿಗದೆ ಅಥವಾ ಆಮ್ಲಜನಕದ ಕೊರೆತೆಯಿಂದ ಸಾವಿಗೀಡಾಗಿರುವ ಜನರಿಗಿಂತ ಹೆಚ್ಚು. ಅಲೋಪತಿಯು ಅವಿವೇಕಿ ಮತ್ತು ದಿವಾಳಿಯಾದ ವಿಜ್ಞಾನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ – ಬಂಧನಕ್ಕೆ ಒತ್ತಾಯ

ಅವರ ಸಂಸ್ಥೆಯಾದ ಪತಂಜಲಿಯು, “ಈ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ಹೇಳಿಕೆಯನ್ನು ಬೇರೆ ಸಂದರ್ಭದಿಂದ ಬೇರ್ಪಡಿಸಗಿದೆ. ರಾಮದೇವ್ ಅವರಿಗೆ ಆಧುನಿಕ ವಿಜ್ಞಾನದ ವೈದ್ಯರ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯವಿಲ್ಲ. ಈ ಘಟನೆಯು ಖಾಸಗಿ ಕಾರ್ಯಕಮವಾಗಿತ್ತು. ರಾಮದೇವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸದಸ್ಯರು ಫಾರ್ವರ್ಡ್ ಮಾಡಿದ ವಾಟ್ಸಾಪ್ ಸಂದೇಶವನ್ನು ಓದುತ್ತಿದ್ದರು. ಅವರ ವಿರುದ್ಧದ ಆರೋಪ ಸುಳ್ಳು” ಎಂದು ಹೇಳಿತ್ತು.

ಆಡಳಿತಾರೂಢ ಬಿಜೆಪಿ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಮದೇವ್ ಕೊರೊನಾ ಒಂದನೆ ಅಲೆಯ ಸಮಯದಲ್ಲೂ ವಿವಾದವನ್ನು ಎದುರಿಸಿದ್ದರು. ಅವರು ಆರೋಗ್ಯ ಸಚಿವ ಹರ್ಷ್ವರ್ಧನ್ ಮತ್ತು ಸಚಿವ ನಿತಿನ್ ಗಡ್ಕರಿಯ ಸಮ್ಮುಖದಲ್ಲಿ ‘ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕೃತ ಔಷಧಿಗಳು’ ಎಂದು ಪತಂಜಲಿಯ ಔಷಧಿಗಳನ್ನು ಬಿಡುಗಡೆ ಮಾಡಿದ್ದರು.

ಅಲ್ಲದೆ, ಸ್ವತಃ ವೈದ್ಯರೂ ಆಗಿರುವ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌‌ ಅವರ ಸಮ್ಮುಖದಲ್ಲೇ ವೈದ್ಯರನ್ನು “ಕೊಲೆಗಾರರು” ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯು, “ಕೋವಿಡ್ ಚಿಕಿತ್ಸೆಗೆ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು ಸ್ಪಷ್ಟೀಕರಣವನ್ನು ನೀಡಿತ್ತು.

ಇದನ್ನೂ ಓದಿ: ‘ಅಲೋಪತಿ ನಿಂದನೆಯಲ್ಲಿ ಸ್ಪಷ್ಟೀಕರಣವಷ್ಟೇ ಸಾಲದು’: ರಾಮದೇವ್‌ಗೆ ಆರೋಗ್ಯ ಸಚಿವ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...