Homeಮುಖಪುಟನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿದೆ.

- Advertisement -
- Advertisement -

ಇಷ್ಟು ದಿನ ಕೇವಲ ಉತ್ಪನ್ನವಾಗಿದ್ದ ವಾಟ್ಸಾಪ್‌ ಈಗ ತನ್ನ ಬಳಕೆದಾರರನ್ನೆಲ್ಲಾ ಉತ್ಪನ್ನಗಳಾಗಿ ಮಾಡಿಕೊಳ್ಳಲು ಮುಂದಾಗಿದೆ. ಅದು ತನ್ನ ಗೌಪ್ಯತೆ ನೀತಿ ಮತ್ತು ಸೇವಾ ನಿಯಮಗಳನ್ನು ನವೀಕರಿಸಲು ಮುಂದಾಗಿದೆ. ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಡೇಟಾವನ್ನು ಫೇಸ್‌ಬುಕ್ ಮತ್ತು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲು ಬಳಕೆದಾರರು ಒಪ್ಪಿಗೆ ನೀಡಬೇಕು. ಇಲ್ಲದಿದ್ದರೆ ಅವರ ಖಾತೆಯನ್ನು ಡಿಲೀಟ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ಮಂಗಳವಾರದಿಂದ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ಮಾಹಿತಿ ನೀಡಿದೆ. ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ ‘ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿದೆ.

ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿದೆ.

ಇದುವರೆಗೂ ವಾಟ್ಸಾಪ್‌ನಲ್ಲಿ ಎಂಡ್ ಟು ಎಂಡ್ encryption ಎಂಬ ಸುರಕ್ಷತಾ ಕ್ರಮವಿತ್ತು. ಅಂದರೆ ಒಬ್ಬರು ಮತ್ತೊಬ್ಬರಿಗೆ ಕಳಿಸುವ ಸಂದೇಶ-ಫೋಟೊಗಳು ಅವರಿಬ್ಬರಲ್ಲದೆ ಬೇರೆ ಯಾರಿಗೂ ಸಿಗಲು ಸಾಧ್ಯವಿರಲಿಲ್ಲ. ಆದರೆ ಇನ್ನು ಮುಂದೆ ಅದು ಇರುವುದಿಲ್ಲ ಎನ್ನಲಾಗಿದೆ. ಅಲ್ಲದೆ ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಎಲ್ಲಾ ಡೇಟಾವನ್ನು ಸಂಗ್ರಹಿಸುವುದಾಗಿಯೂ, ಅದನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದಾಗಿಯೂ ತಿಳಿಸಿದೆ.

ವಾಟ್ಸಾಪ್‌ನ ಈ ನಡೆಗೆ ತೀವ್ರ ಟೀಕೆಗಳು ವ್ಯಕ್ತವಾಗಿವೆ. “ಭಾರತದಲ್ಲಿ ಶಕ್ತವಾದ Data privacy ಕಾನೂನು ಇಲ್ಲದ ಕಾರಣದಿಂದ ವಾಟ್ಸಪ್ ಮತ್ತು ಫೇಸ್ ಬುಕ್ ನಮ್ಮೆಲ್ಲರ ವೈಯಕ್ತಿಕ ಮಾಹಿತಿಯನ್ನು ಮಾರಿಕೊಳ್ಳುತ್ತದೆ.
ಸಂಕ್ಷಿಪ್ತವಾಗಿ ಇನ್ನು ಮುಂದೆ ವಾಟ್ಸಪ್ ಅನ್ನೋದು ಪ್ರಾಡಕ್ಟ್ ಅಲ್ಲ ವಾಟ್ಸಪ್ ಉಪಯೋಗಿಸುವ ಪ್ರತಿಯೊಬ್ಬರೂ ಪ್ರಾಡಕ್ಟ್ ಗಳು. ಇದಕ್ಕೆ ಪರಿಹಾರ ಏನು ಅಂದರೆ ಯಾವುದೇ ಕಾರಣಕ್ಕೂ ವಾಟ್ಸಪ್ update ಮಾಡಬೇಡಿ. Signal ಅಥವಾ Telegram app ಗೆ ಎಲ್ಲರೂ ಬದಲಾಯಿಸಿಕೊಳ್ಳಿ” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...