Homeಕರ್ನಾಟಕ'ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ’ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

‘ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ’ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

- Advertisement -
- Advertisement -

ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡಿದ್ದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿರುವುದು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗ ವರದಿಗೆ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್‌) ರಾಜ್ಯ ಸಂಚಾಲಕ ದುರ್ಗೇಶ್ ಬರಗೂರು ಹೇಳಿದ್ದಾರೆ.

ಭಾನುವಾರ (ಸೆ.14) ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಶಿಕ್ಷಣ ನೀತಿ ಆಯೋಗವು ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ನೀಡಬಾರದೆಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ. ಹೀಗಿರುವಾಗ ಉನ್ನತ ಶಿಕ್ಷಣ ಸಚಿವರ ಹೇಳಿಕೆಯು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ದವಾಗಿದೆ ಎಂದಿದ್ದಾರೆ.

ರಾಜ್ಯದ ಸರ್ಕಾರಿ ವಿಶ್ವ ವಿದ್ಯಾನಿಲಯಗಳು ಅನುದಾನಗಳಿಲ್ಲದೇ, ಅಧ್ಯಾಪಕರ ಕೊರತೆಯಿಂದ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಂದ ತೀವ್ರವಾಗಿ ಬಳಲುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರಸ್ತುತ ವಿಶ್ವ ವಿದ್ಯಾನಿಲಯಗಳನ್ನು ಅಭಿವೃದ್ಧಿಪಡಿಸುವುದರ ಕಡೆ ಗಮನ ನೀಡುವುದು ಬಿಟ್ಟು, ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸಲಾಗುವುದೆಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಪ್ರಸ್ತುತ ಸರ್ಕಾರಿ ಕಾಲೇಜುಗಳಲ್ಲಿರುವ ಶುಲ್ಕಗಳನ್ನು ಭರಿಸಲು ಸಾಧ್ಯವಾಗದೇ, ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ ಎಂದು ದುರ್ಗೇಶ್ ಹೇಳಿದ್ದಾರೆ.

ಸರ್ಕಾರ ನಿಜವಾಗಿಯೂ ನಮ್ಮ ಸಾರ್ವಜನಿಕ ಸಂಸ್ಥೆಗಳನ್ನು ಸುಧಾರಿಸಲು ಬದ್ಧವಾಗಿದ್ದರೆ, ಅದು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡುವ ಬೃಹತ್ ತೆರಿಗೆ ವಿನಾಯಿತಿಗಳನ್ನು ನಿಲ್ಲಿಸಬೇಕು ಮತ್ತು ಶಾಸಕ, ಸಚಿವರ ಸಂಬಳ ಹಾಗೂ ಭತ್ಯೆಗಳನ್ನು ಕಡಿತಗೊಳಿಸಬೇಕು. ಆ ಹಣವನ್ನು ಶಿಕ್ಷಣದ ಸಧೃಡೀಕರಣಕ್ಕೆ ವಿನಿಯೋಗಿಸಬೇಕು. ಎಲ್ಲರಿಗೂ ಉಚಿತ, ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೈದ್ಯಕೀಯ ಶಿಕ್ಷಣದಿಂದ ದಲಿತರನ್ನು ಹೊರಗಿಡುವ ಕುತಂತ್ರ!

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್‌ಆರ್‌ಐ ಕೋಟಾವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ, ದಲಿತ, ಮಧ್ಯಮ ವರ್ಗದ ಬಡ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ದೂರ ತಳ್ಳುವ ಕುತಂತ್ರವಾಗಿದೆ. ಅಷ್ಟೇ ಅಲ್ಲದೇ, ಸೀಟುಗಳನ್ನು ಮಾರಾಟ ಮಾಡಲು ಅವಕಾಶ ನೀಡುವುದು ಪ್ರಜಾಸತ್ತಾತ್ಮಕ ಶಿಕ್ಷಣ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟದ ತಳಹದಿಯ ಮೇಲಿನ ನೇರ ಪ್ರಹಾರವಾಗಿದೆ ಎಂದು ದುರ್ಗೇಶ್ ಬರಗೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ‘ನೀಟ್’ ಪರೀಕ್ಷೆ ಜಾರಿಯಲ್ಲಿದ್ದು, ಇದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕಗಳನ್ನು ಗಳಿಸಿದ್ದರೂ ಪ್ರವೇಶಾತಿ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ‘ನೀಟ್’ ಪರೀಕ್ಷೆ ರದ್ದು ಮಾಡುವುದು ಬಿಟ್ಟು, ಎನ್‌ಆರ್‌ಐ ಕೋಟಾ ಜಾರಿ ಮಾಡುತ್ತಿರುವುದು ಬಡವರ, ಮಧ್ಯಮ ವರ್ಗದವರ ಕನಸುಗಳನ್ನು ನುಚ್ಚುನೂರು ಮಾಡುವಾದಾಗಿದೆ ಮತ್ತು ವಿದ್ಯಾರ್ಥಿ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...