Homeಮುಖಪುಟ'ಪುಷ್ಪ-2' ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ...

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

- Advertisement -
- Advertisement -

ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಗೊತ್ತಾಯಿತು” ಎಂದಿದ್ದಾರೆ.

“ಯಾವುದೇ ಪೊಲೀಸ್ ಬಂದು ನನಗೆ ಮಾಹಿತಿ ನೀಡಿಲ್ಲ. ಥಿಯೇಟರ್ ಆಡಳಿತದವರು ಬಂದು ಹೊರಗಡೆ ಭಾರೀ ಜನ ಸೇರಿದ್ದಾರೆ. ಹಾಗಾಗಿ, ತಾವು ದಯವಿಟ್ಟು ಇಲ್ಲಿಂದ ಹೋಗಿ ಎಂದರು. ನಾನು ತಕ್ಷಣ ಹೊರಟು ಬಂದೆ. ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಮಾಹಿತಿ ಗೊತ್ತಾಯಿತು” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

“ನಾನು ಥಿಯೇಟರ್‌ಗೆ ಭೇಟಿ ಕೊಡುವುದಕ್ಕೆ ಅನುಮತಿ ಇಲ್ಲ ಎಂದಿದ್ದರೆ ಪೊಲೀಸರು ತಿಳಿಸಬೇಕಿತ್ತು. ಕಾನೂನು ಪಾಲಿಸುವವನಾಗಿ ನಾನು ವಾಪಸ್ ಹೋಗುತ್ತಿದ್ದೆ” ಎಂದು ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಅನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್ ಹಠಾತ್ ಭೇಟಿ ಕೊಟ್ಟಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ದಿಲ್‌ಸುಖ್ ನಗರ ನಿವಾಸಿ 35 ವರ್ಷದ ರೇವತಿ ಸಾವನ್ನಪ್ಪಿದ್ದಾರೆ. ಅವರ 8 ವರ್ಷದ ಮಗ ಶ್ರೀತೇಜಾ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕಡ್‌ಪಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುವಾಗ ಸಿಎಂ ರೇವಂತ್ ರೆಡ್ಡಿ,”ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಂಧ್ಯಾ ಥಿಯೇಟರ್‌ಗೆ ಹೋಗಿ ಹೊರಗಡೆ ಭಾರೀ ಜನ ಸೇರಿ ಗದ್ದಲ ಉಂಟಾಗಿದೆ. ಇಲ್ಲಿಂದ ಹೊರಟು ಹೋಗಿ ಎಂದು ಅಲ್ಲು ಅರ್ಜುನ್‌ಗೆ ಮನವಿ ಮಾಡಿದ್ದರು. ಆದರೆ, ಅವರು ಸಿನಿಮಾ ಮುಗಿಯುವವರೆಗೆ ಹೋಗಲ್ಲ ಎಂದಿದ್ದಾರೆ. ಕೊನೆಗೆ ಡಿಸಿಪಿ ಹೋಗಿ ಬಂಧಿಸಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟ ಬಳಿಕವಷ್ಟೇ ಥಿಯೇಟರ್ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಕೂಡ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಅಲ್ಲು ಅರ್ಜುನ್ ವಿರುದ್ದ ಕಿಡಿಕಾರಿದ್ದಾರೆ. “ಚಿತ್ರ ಈಗ ಹಿಟ್ ಆಗಬಹುದು” ಎಂದಿದ್ದಾರೆ.

ಕಾಲ್ತುಳಿತ ಸಂಭವಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ “ಚಿತ್ರ ಹಿಟ್ ಆಗಲಿದೆ” ಎಂದು ಹೇಳಿದ್ದಾಗಿ ಅಕ್ಬರುದ್ದೀನ್ ಓವೈಸಿ ಆರೋಪಿಸಿದ್ದಾರೆ.

” ಜನರು ಸಾಯುವಾಗ ನಾನು ಆ ರೀತಿಯ ಹೇಳಿಕೆಗಳನ್ನು ಕನಸಿನಲ್ಲೂ ಹೇಳುವವನಲ್ಲ. ನನ್ನ ವಿರುದ್ದ ಈ ರೀತಿಯ ಆರೋಪಗಳು ನನ್ನ ತೇಜೋವದೆ ಮಾಡುವ ಉದ್ದೇಶ ಹೊಂದಿದೆ. ಕಳೆದ 20 ವರ್ಷಗಳಲ್ಲಿ ಕಷ್ಟಪಟ್ಟು ಮೇಲೆ ಬಂದ ನಾನು ಈ ಹೆಸರು, ಗೌರವವನ್ನು ಗಳಿಸಿಕೊಂಡಿದ್ದೇನೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಮುಂದುರಿದು “ನಾನು ಯಾರನ್ನೂ ದೂಷಿಸುವುದಿಲ್ಲ. ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳ ಕುರಿತು ಸ್ಪಷ್ಟನೆ ನೀಡಿದ್ದೇನೆ” ಅಷ್ಟೆ ಎಂದಿದ್ದಾರೆ.

“ಮಹಿಳೆ ಸಾವನ್ನಪ್ಪಿದ ವಿಷಯ ತಿಳಿದು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ನನ್ನ ಸಿಬ್ಬಂದಿಯನ್ನು ಕಳಿಸಿದ್ದೆ. ನನ್ನ ಮೇಲೆ ಆ ಕುಟುಂಬ ದೂರು ದಾಖಲಿಸಿದ್ದರಿಂದ ನಾನು ಹೋಗುವುದು ಕಾನೂನಾತ್ಮಕವಾಗಿ ತಪ್ಪಾಗುತ್ತದೆ ಎಂದು ಹೋಗಿರಲಿಲ್ಲ. ಗಾಯಗೊಂಡಿರುವ ಬಾಲಕನ ಬಗ್ಗೆ ನಾವು ಕಾಳಜಿವಹಿಸುತ್ತೇವೆ. ಮುಂದೆ ಅವರ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...