Homeಕರ್ನಾಟಕಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಹೆಣ್ಣು ಮಕ್ಕಳು ಚಿನ್ನದ ಹಿಂದೆ ಓಡುವ ಬದಲು ಕಬ್ಬಿಣ ಅಂಶದ ಆಹಾರಗಳನ್ನು ಸೇವಿಸಿ. ನೀವೇ ನಿಮ್ಮ ಆಭರಣವಾಗಿ ಎನ್ನುವ ಸಂದೇಶವುಳ್ಳ ವಿಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು.

- Advertisement -
- Advertisement -

ಕರ್ನಾಟಕದಲ್ಲಿ ಶೇಕಡಾ 49.4% ರಷ್ಟು ಯುವತಿಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ- 5 (NFHS) ವರದಿಯಲ್ಲಿ ತಿಳಿದುಬಂದಿದೆ. 2015-16ರಲ್ಲಿ ಬಿಡುಗಡೆಯಾಗಿದ್ದ ಅಂಕಿ ಅಂಶದಲ್ಲಿಯೂ 45.3% ಯುವತಿಯರು ರಕ್ತಹೀನತೆಯಿಂದ ಬಳಲುತ್ತಿದ್ದರು.

ಮಹಿಳೆಯರ ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಕ್ಕಳ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆಯನ್ನು ಕರ್ನಾಟಕ ಹೊಂದಿರುವುದನ್ನು ವರದಿ ತೋರಿಸಿದೆ. ಆದರೆ, ಗರ್ಭಿಣಿಯಾಗಿದ್ದಾಗ ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಮಾತ್ರೆಗಳನ್ನು ಸೇವಿಸುತ್ತಿರುವ ಮಹಿಳೆಯರ ಸಂಖ್ಯೆ ಈಗ ಕಡಿಮೆಯಾಗಿದೆ. ಐದು ವರ್ಷಗಳ ಹಿಂದಿನ ವರದಿಯಾಲ್ಲಿ 32.6% ಇದದ್ದು, ಈಗ 26.7%ಗೆ ಇಳಿದಿದೆ ಎಂದು NFHS ವರದಿ ತಿಳಿಸಿದೆ.

ರಾಜ್ಯದಲ್ಲಿ ಪುರುಷರು ಮತ್ತು ಮಹಿಳೆಯರಲ್ಲಿ ಬೊಜ್ಜಿನ ಮಟ್ಟ ಹೆಚ್ಚುತ್ತಿದೆ ಎಂದು ವರದಿಯಲ್ಲಿ ಸೂಚಿಸಲಾಗಿದೆ. ಹುಟ್ಟಿದ ಒಂದು ಗಂಟೆಯೊಳಗೆ ಹಸುಗೂಸಿಗೆ ಹಾಲುಣಿಸುವ ತಾಯಂದಿರ ಸಂಖ್ಯೆಯಲ್ಲೂ ಇಳಿಕೆ ಕಂಡು ಬಂದಿದೆ. ಐದು ವರ್ಷಗಳ ಹಿಂದೆ 56% ಇದ್ದ ಪ್ರಮಾಣ ಈಗ 49% ಕ್ಕೆ ಕುಸಿದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕರ್ನಾಟಕದಲ್ಲಿ 15 ರಿಂದ 24 ವರ್ಷ ವಯಸ್ಸಿನ ಮಹಿಳೆಯರಲ್ಲಿ ಮುಟ್ಟಿನ ಆರೋಗ್ಯಕರ ಉತ್ಪನ್ನಗಳ ಬಳಕೆ  84.2% ಕ್ಕೆ ಏರಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಾಜೆಕ್ಟ್ ಸ್ತ್ರೀಧನ್ ಎಂಬ ಪೇಜ್ ಹೆಣ್ಣು ಮಕ್ಕಳ ಆರೋಗ್ಯದ ಕುರಿತು ಹಲವು ವಿಡಿಯೋಗಳನ್ನು ಪೋಸ್ಟ್ ಮಾಡುತ್ತದೆ. ಅದರಲ್ಲಿ ರಕ್ತಹೀನತೆ ಕುರಿತು ಮಾಡಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಚಿನ್ನದ ಹಿಂದೆ ಓಡುವ ಬದಲು ಕಬ್ಬಿಣ ಅಂಶದ ಆಹಾರಗಳನ್ನು ಸೇವಿಸಿ. ನೀವೇ ನಿಮ್ಮ ಆಭರಣವಾಗಿ ಎನ್ನುವ ಸಂದೇಶವುಳ್ಳ ಈ ವಿಡಿಯೋದಲ್ಲಿ ಹಲವು ಬಗೆಯ ಕಬ್ಬಿಣ ಅಂಶ ಹೊಂದಿರುವ ಆಹಾರ ಪದಾರ್ಥಗಳನ್ನು ತೋರಿಸಲಾಗಿದೆ. ಜೊತೆಗೆ ರಕದತಹೀನತೆಯಿಮದ ಬಳಲುತ್ತಿರುವ ಭಾರತೀಯ ಮಹಿಳೆಯರ ಅಂಕಿ ಅಂಶಗಳನ್ನು ನೀಡಲಾಗಿದೆ.

ದೇಶ ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನಸಂಖ್ಯೆ, ಆರೋಗ್ಯ ಮತ್ತು ಪೋಷಣೆಯ ಬಗ್ಗೆ ವಿವರವಾದ ಮಾಹಿತಿಯನ್ನು ಒಳಗೊಂಡಿರುವ ಐದನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯನ್ನು (NFHS) ಆರೋಗ್ಯ ಸಚಿವ ಹರ್ಷ್ ವರ್ಧನ್ ಶನಿವಾರ ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಮೊದಲ ಹಂತದಲ್ಲಿ ಕರ್ನಾಟಕ ಸೇರಿ 17 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ, ವರದಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 2019ರ ಜು.10 ರಿಂದ ಡಿ.11ರವರೆಗೆ ನೀಲ್ಸನ್ ಇಂಡಿಯಾ ಪ್ರೈ.ಲಿ. ಏಜನ್ಸಿ ಸಹಯೋಗದಲ್ಲಿ ಸಮೀಕ್ಷೆ ನಡೆಸಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ತಡೆ ಹಿಡಿಯಲಾಗಿದ್ದ, ಉಳಿದ 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಎರಡನೇ ಹಂತದ ಸಮೀಕ್ಷೆಯನ್ನು ನವೆಂಬರ್‌ನಿಂದ ಪುನರಾರಂಭ ಮಾಡಲಾಗಿದೆ.  2021 ರ ಮೇ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...