Homeಕರ್ನಾಟಕ'ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ...'; ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

‘ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ…’; ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

- Advertisement -
- Advertisement -

‘ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರು ಕೇಳಿದಾಗ, ‘ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ’ ಎಂದರು.

ಮಂಡ್ಯದಲ್ಲಿ ಕೋಮು ಗಲಭೆ ಪ್ರಯೋಗ

‘ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ನಮ್ಮ ಭಾಗದ ಎಲ್ಲಾ ಜಾತಿ ಹಾಗೂ ಧರ್ಮದ ಜನರು ಬಹಳ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದರು. ನಮ್ಮ ಕಡೆ ಊರ ಹಬ್ಬ ಮಾಡುವಾಗ ಯಾವರೀತಿ ಮಾಡುತ್ತಾರೆ ಎಂದು ನೀವು ನೋಡಿದ್ದೀರಲ್ಲಾ? ಈಗ ಅವರು ಹೊಸ ಪ್ರಯೋಗ ಮಾಡುತ್ತಿದ್ದಾರೆ’ ಎಂದು ಮಂಡ್ಯದಲ್ಲಿ ಕೇಸರಿ ಧ್ವಜದ ಬಗ್ಗೆ ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು.

ಕೆರಗೋಡಿನಲ್ಲಿ ಕಾನೂನುಬಾಹಿರವಾಗಿ ಕೇಸರಿ ಧ್ವಜ ಹಾರಿಸಿರುವ ಬಗ್ಗೆ ಕೇಳಿದಾಗ, ‘ಪಂಚಾಯ್ತಿಯವರು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಮಾತ್ರ ಹಾರಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ರಾಷ್ಟ್ರ ಧ್ವಜ ಹಾಗೂ ಕನ್ನಡ ಬಾವುಟಕ್ಕೆ ಗೌರವ ನೀಡಬೇಕು. ಕನ್ನಡದಲ್ಲೇ ನಾಮಫಲಕ ಇರಬೇಕು ಎಂದೂ ನಾವು ಕಾನೂನು ಮಾಡಿದ್ದೇವೆ. ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಹುದಾಗಿತ್ತು. ಆದರೆ, ಅವರು ವಿಧಾನ ಮಂಡಲ ಅಧಿವೇಶನದಲ್ಲೇ ಜಾರಿ ಮಾಡಲು ಹೇಳಿದ್ದಾರೆ. ರಾಷ್ಟ್ರ ಧ್ವಜ, ಸಂವಿಧಾನಕ್ಕೆ ಏನು ಗೌರವ ನೀಡಬೇಕೋ ಆ ಗೌರವ ನೀಡುವುದು ನಮ್ಮ ಬದ್ಧತೆ. ಜನ ಎಲ್ಲವನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿಯವರು ಮನೆ-ಮನೆಗೆ ಹನುಮಧ್ವಜ ಹಂಚುವ ಬಗ್ಗೆ ಕೇಳಿದಾಗ, ‘ಬೇಡ ಎಂದು ಹೇಳಿದವರು ಯಾರು? ಬಿಜೆಪಿಯವರು ಹರ್ ಘರ್ ತಿರಂಗಾ ಎಂದು ಪ್ರಚಾರ ಮಾಡಿದ್ದರು. ಈಗ ಆ ತಿರಂಗಾವನ್ನು ಯಾಕೆ ಮರೆತಿದ್ದಾರೆ? ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ತಿರಂಗಾ ಬದಲಿಗೆ ಕೇಸರಿ ಧ್ವಜವನ್ನೇ ಕಾನೂನು ಮೂಲಕ ತರಲಿ, ಬೇಡ ಎಂದವರು ಯಾರು’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...