Homeಮುಖಪುಟಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

ಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

- Advertisement -
- Advertisement -

ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದು, ಇತ್ತೀಚೆಗೆ ಪಕ್ಷ ಸೇರಿದ ಕನ್ಹಯ್ಯಾ ಕುಮಾರ್ ಜೊತೆಗೆ ದೇಶದ ವಿವಿಧ ಭಾಗಗಳಲ್ಲಿ ಆಡಳಿತ ವಿರೋಧಿ ಚಳವಳಿಯನ್ನು ಕಟ್ಟಲು ತಳಮಟ್ಟದಲ್ಲಿ ಯುವಕರೊಂದಿಗೆ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.

“2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸ್ಪರ್ಧಿಸುತ್ತೇನೆ. ನಾವು ರಾಜ್ಯದ ಜನರನ್ನು ತಲುಪುತ್ತೇವೆ ಮತ್ತು ಅವರೊಂದಿಗೆ ತೊಡಗಿಸಿಕೊಳ್ಳುತ್ತೇವೆ. ಗುಜರಾತ್‌ನಲ್ಲಿ ಒಂದು ಸಾಮೂಹಿಕ ಚಳುವಳಿಯನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಈ ಚಳುವಳಿಯು ಬಿಜೆಪಿ ಆಡಳಿತದಲ್ಲಿ ದೇಶವನ್ನು ಹಾಳಾಗದಂತೆ ರಕ್ಷಿಸಲು ಸಹಾಯ ಮಾಡುತ್ತದೆ. ನಾವು ನೀರು, ಆರೋಗ್ಯ, ನೈರ್ಮಲ್ಯ, ಶಿಕ್ಷಣ ಮತ್ತು ಮಾನವ ಹಕ್ಕುಗಳ ವಿಷಯಗಳ ಕುರಿತು ಮಾತನಾಡುತ್ತೇವೆ” ಎಂದು ಮೇವಾನಿ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದ ಕೋವಿಡ್ ದುರಾಡಳಿತವು ರಾಜ್ಯದ ಆರೋಗ್ಯ ಮೂಲಸೌಕರ್ಯಗಳ ಇರುವ ಕಳಪೆ ಪರಿಸ್ಥಿತಿಯನ್ನು ಬಹಿರಂಗಪಡಿಸಿದೆ. ನೋಟು ರದ್ದತಿ, ಲಾಕ್‌ಡೌನ್ ಮತ್ತು ಜಿಎಸ್‌ಟಿಯಿಂದಾಗಿ ರಾಜ್ಯದ ಸಣ್ಣ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಷ್ಟೇ ಅಲ್ಲದೆ, ಗುಜರಾತ್‌ನಲ್ಲಿ ಭಾರೀ ಒಳಜಗಳ ಮತ್ತು ದುರಾಡಳಿತದ ನಡುವೆ ಬಿಜೆಪಿ ಹೆಣಗಾಡುತ್ತಿದೆ. ಪ್ರಧಾನಿಯವರ ತವರು ರಾಜ್ಯದಲ್ಲಿಯೇ ಬಿಜೆಪಿ  ಭಾರೀ ಗೊಂದಲದಲ್ಲಿದೆ. ಇದರಿಂದ ಬಿಜೆಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

1998 ರಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದರೆ, ಅಂತಿಮವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನಿಂದ ತೊಡೆದು ಹಾಕುವಲ್ಲಿ ಯಶಸ್ವಿಯಾಗುತ್ತದೆ. 2017ರ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆ ಅದ್ಭುತವಾಗಿದೆ. ನಾವು ಬಿಜೆಪಿಗಿಂತ ಕೇವಲ 19 ಸ್ಥಾನ ಕಡಿಮೆ ಗೆದ್ದಿದ್ದೇವೆ. ನಾವು ಈಗ ಸರಿದೂಗಿಸಬೇಕಾದ ಅಂತರವು ಒಂದು ಸಣ್ಣ ಸಂಖ್ಯೆಯಾಗಿದೆ. ಇದು ನಮಗೆ ಆತ್ಮವಿಶ್ವಾಸವನ್ನು ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2017 ರ ರಾಜ್ಯ -ವಿಧಾನಸಭಾ ಚುನಾವಣೆಯಲ್ಲಿ, ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದೆ. ಇದು ಸದನದಲ್ಲಿ ಸರಳ ಬಹುಮತಕ್ಕೆ ಬೇಕಾಗಿರುವುದಕ್ಕಿಂತ ಕೇವಲ ಏಳು ಸ್ಥಾನಗಳಷ್ಟೆ ಗೆದ್ದಿದೆ. ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು 80 ಸ್ಥಾನಗಳನ್ನು ಗೆದ್ದಿವೆ. 2012ಕ್ಕೆ ಹೋಲಿಸಿದರೆ ಬಿಜೆಪಿ ಶೇಕಡಾ 49.1 ರಷ್ಟು ಮತಗಳನ್ನು ಪಡೆದುಕೊಂಡಿದೆ, ಆದರೆ 16 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಜಿಗಿತ ಸಾಧಿಸಿದೆ

ಇದನ್ನೂ ಓದಿ: ಉತ್ತರ ಪ್ರದೇಶ: ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು, ವೈದ್ಯ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...