Homeಮುಖಪುಟಆಲ್ಟ್‌ ನ್ಯೂಸ್‌ ಸಂಸ್ಥಾಪಕ ಜುಬೇರ್‌ ಅವರಿಗೆ ಮಧ್ಯಂತರ ಜಾಮೀನು

ಆಲ್ಟ್‌ ನ್ಯೂಸ್‌ ಸಂಸ್ಥಾಪಕ ಜುಬೇರ್‌ ಅವರಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಹಲವಾರು ದ್ವೇಷ ಭಾಷಣ ಪ್ರಕರಣದ ಆರೋಪಿ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಬೆಂಬಲಿಗರು ದಾಖಲಿಸಿದ್ದ ಪ್ರಕರಣದಲ್ಲಿ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಶುಕ್ರವಾರ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ನ್ಯಾಯಪೀಠವು ಈ ಆದೇಶ ನೀಡಿದೆ.

ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಜುಬೈರ್ ಸಲ್ಲಿಸಿದ ಮನವಿಗೆ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಆದಿತ್ಯನಾಥ್ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. 2025ರ ಜನವರಿ 6ರವರೆಗೆ ಜುಬೈರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪೀಠವು ಹೇಳಿದೆ. ಆಲ್ಟ್‌ ನ್ಯೂಸ್‌

ನರಸಿಂಗಾನಂದ್ ಮಾಡಿರುವ ದ್ವೇಷ ಭಾಷಣದ ವಿಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಜುಬೇರ್ ಉತ್ತೇಜಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಅಕ್ಟೋಬರ್ 7 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಗಾನಂದ್ ಅವರು ಸೆಪ್ಟೆಂಬರ್ 29 ರಂದು ಧರ್ಮೋಪದೇಶದ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ದೇಶದ ಹಲವಾರು ನಗರಗಳಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.

ಅಕ್ಟೋಬರ್ 3 ರಂದು, ಜುಬೈರ್ ಅವರು ಎಕ್ಸ್‌ನಲ್ಲಿ ಅವರ ಭಾಷಣದ ವೀಡಿಯೊವನ್ನು ಹಂಚಿಕೊಂಡು, ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ನರಸಿಂಗಾನಂದ್ ಅವರು ಈ ಹಿಂದೆ ಕೂಡಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದನ್ನು ಉಲ್ಲೇಖಿಸಿದ್ದ ಜುಬೇರ್ ವಿರುದ್ಧ ನರಸಿಂಗಾನಂದ ಬೆಂಬಲಿಗರು ಎಫ್‌ಐಆರ್‌ ದಾಖಲಿಸಿದ್ದರು.

ಜುಬೇರ್ ವಿರುದ್ಧ ಎಫ್‌ಐಆರ್ ದಾಖಲಾದ ನಂತರ, ಅವರು ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕಳೆದ ಬುಧವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ರ ಅಡಿಯಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಅಪರಾಧಕ್ಕಾಗಿ ಜುಬೇರ್ ವಿರುದ್ಧದ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು. ಬಳಿಕ ಶುಕ್ರವಾರ (ಡಿಸೆಂಬರ್ 20) ಹೆಚ್ಚಿನ ವಿಚಾರಣೆಗೆ ಪಟ್ಟಿ ಮಾಡಿತ್ತು.

ಶುಕ್ರವಾರ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ನಳಿನ್ ಶ್ರೀವಾಸ್ತವ ಅವರ ನ್ಯಾಯಪೀಠವು, ಆಲ್ಟ್‌ ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...