Homeಮುಖಪುಟಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಜ.1ರಂದೇ ಹೊಸ ಮನೆಗಳ ಹಂಚಿಕೆ, ಇನ್ನುಮುಂದೆ ಸರ್ಕಾರಿ ಜಮೀನು ಒತ್ತುವರಿಯಾದರೆ ಅಧಿಕಾರಿಗಳ ವಿರುದ್ದ ಕ್ರಮ

- Advertisement -
- Advertisement -

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೂ ಮುನ್ನ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ, ಸರ್ಕಾರದ ಜಾಗವನ್ನು ತೆರವುಗೊಳಿಸುವಂತೆ ಹೇಳಲಾಗಿತ್ತು. ಆದರೂ, ಅವರು ಖಾಲಿ ಮಾಡಿರಲಿಲ್ಲ. ಹಾಗಾಗಿ, ಅಧಿಕಾರಿಗಳು ನಿಯಮದಂತೆ ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ವಸತಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅಧಿಕಾರಿಗಳ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ಜನರು 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಮನೆ ಕಳೆದುಕೊಂಡವರಲ್ಲಿ ಅರ್ಹರನ್ನು ಗುರುತಿಸಿ ಮುಂದಿನ ಎರಡು ದಿನಗಳಲ್ಲಿ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್, ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ.

ಬೈಯ್ಯಪ್ಪನಹಳ್ಳಿಯ ಜಾಗವು ಕೋಗಿಲು ಪ್ರದೇಶದಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು 11.20 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎಯಿಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಸಾಮಾನ್ಯ ವರ್ಗದವರಿಗೆ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಸಾಮಾನ್ಯ ವರ್ಗದವರು 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡಬೇಕು, ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಪರಿಶೀಲನೆಯ ನಂತರ ಸಾಲ ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ, ನಾಡಿದ್ದು ಎರಡು ದಿನ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಜನರಿಗೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ಝಮೀರ್‌ ಅಹ್ಮದ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದವರಿಗೂ ಮಾನವೀಯತೆ ದೃಷ್ಟಿಯಿಂದ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದಿದ್ದಾರೆ.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ: ನಾಲ್ವರ ಸಾವು, 10 ಜನರಿಗೆ ಗಾಯ

ಮುಂಬೈನ ನಾಗರಿಕ ಸಾರಿಗೆ ಸಂಸ್ಥೆಯ ಬೆಸ್ಟ್‌ನ ಬಸ್ ಸೋಮವಾರ ರಾತ್ರಿ ಮುಂಬೈನ ಭಾಂಡಪ್ ಪ್ರದೇಶದಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ,10 ಮಂದಿ ಗಾಯಗೊಂಡಿದ್ದಾರೆ. ಡಿಸೆಂಬರ್ 9,...

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ...

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...