Homeರಾಷ್ಟ್ರೀಯಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

- Advertisement -
- Advertisement -

ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ನ ‘ಆಲ್ಟ್ ನ್ಯೂಸ್‌’ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜುಬೇರ್ ವಿರುದ್ಧ ಐಪಿಸಿ ಸೆಕ್ಷನ್ 153 ಮತ್ತು 295A ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಕೋಮು ಸೌಹಾರ್ದತೆಗೆ ಧಕ್ಕೆ ತರುವ ಟ್ವೀಟ್‌ಗಳ ಬಗ್ಗೆ ಟ್ವಿಟರ್ ಹ್ಯಾಂಡಲ್ ಪೊಲೀಸರಿಗೆ ಎಚ್ಚರಿಕೆ ನೀಡಿದ ನಂತರ ದೆಹಲಿ ಪೊಲೀಸ್ ವಿಶೇಷ ಕೋಶವು ಜುಬೇರ್ ಅವರನ್ನು ಬಂಧಿಸಿದೆ. 2020 ರ ಪ್ರಕರಣದ ವಿಚಾರಣೆಗಾಗಿ ಅವರನ್ನು ಇಂದು ಕರೆಸಲಾಯಿತು, ಆದರೆ ಈ ಪ್ರಕರಣವನ್ನು ತಕ್ಷಣವೇ ದಾಖಲಿಸಿದ ನಂತರ ಅವರನ್ನು ಬಂಧಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಬಂಧನಕ್ಕೆ ನೋಟಿಸ್ ನೀಡಲಾಗಿಲ್ಲ ಮತ್ತು ಹಲವು ಬಾರಿ ವಿನಂತಿ ಮಾಡಿದರೂ ಯಾವುದೇ ಎಫ್‌ಐಆರ್ ಪ್ರತಿಯನ್ನು ನೀಡಲಾಗಿಲ್ಲ ಎಂದು ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆಯ ಉದ್ದೇಶಕ್ಕಾಗಿ ಸೈಬರ್ ಕ್ರೈಂ ಘಟಕದ ಅಧಿಕಾರಿಗಳು ಜುಬೈರ್‌ನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿದ್ದಾರೆ. ಸಾಕಷ್ಟು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

ಬಂಧನದ ಕುರಿತು ಪ್ರತಿಕ್ರಿಯಿಸಿದ ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್, “ಪ್ರತಿದಿನವೂ ಬಿಜೆಪಿಯ ಸುಳ್ಳು ಸುದ್ದಿಯ ಕಾರ್ಖಾನೆಯನ್ನು ಬಹಿರಂಗಪಡಿಸುವ ವಿಶ್ವದ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾದ ಮೊಹಮ್ಮದ್ ಜುಬೇರ್ ಅವರ ಬಂಧನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...