Homeಕರ್ನಾಟಕ’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ದಿಶಾ ಕೈಗೊಂಡ ಕಾರ್ಯದ ಬಗ್ಗೆ ನಾವು ಹೆಮ್ಮೆಪಡುತ್ತೇವೆ, ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾದ ಬೆಂಬಲ ನೀಡುತ್ತೇವೆ ಎಂದು ಹಳೆಯ ವಿದ್ಯಾರ್ಥಿ ಸಂಘ ಹೇಳಿದೆ

- Advertisement -
- Advertisement -

ರೈತರನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್‌ ಅನ್ನು ತಯಾರಿಸಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿ ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದರು. ದೆಹಲಿ ಪೊಲೀಸರ ಈ ಕ್ರಮವನ್ನು ’ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ’ ಖಂಡಿಸಿದ್ದು, ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಹಳೆಯ ವಿದ್ಯಾರ್ಥಿ ಸಂಘವು ತನ್ನ ಪ್ರಕಟಣೆಯಲ್ಲಿ, “ರೈತ ಹೋರಾಟವನ್ನು ಬೆಂಬಲಿಸುವ ಯುವ ಪ್ರಜೆಯನ್ನು ನಿರ್ದಾಕ್ಷಿಣ್ಯವಾಗಿ ಗುರಿಪಡಿಸುವುದು ಭಯಾನಕ ಮತ್ತು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ದೆಹಲಿ ಪೊಲೀಸರು ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಮಹಿಳೆಯ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

“ದಿಶಾ ರವಿ ಅತ್ಯುತ್ತಮವಾದ ಕಾರ್ಯವನ್ನು ಮಾಡುತ್ತಿದ್ದು, ಹವಾಮಾನ ಬದಲಾವಣೆಯ ಕ್ಷೇತ್ರದಲ್ಲಿ ತನ್ನ ಕ್ರಿಯಾಶೀಲತೆಯ ಮೂಲಕ ಭಾರತದ ಪ್ರಜೆಯಾಗಿ ನಿಜಕ್ಕೂ ಪ್ರಪಂಚದ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇನ್ ಇಂಡಿಯಾದ ಸಹ-ಸಂಸ್ಥಾಪಕರಾಗಿ, ರಾಜಕಾರಣಿಗಳು ಮತ್ತು ಸರ್ಕಾರಗಳು ಜನತ್ತಿನ ವಾತಾವರಣ ಹಾಳಾಗದಂತೆ ತಡೆಯುವ ಕ್ರಮಗಳನ್ನು ಕೈಗೊಳ್ಳಲು ವಿಶ್ವದಾದ್ಯಂತದ ಹವಾಮಾನ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿದ್ದಾರೆ” ಎಂದು ಹೇಳಿದ್ದಾರೆ.

“ನಮಗೆಲ್ಲರಿಗೂ ತಿಳಿದಿರುವಂತೆ, ಹವಾಮಾನ ಬದಲಾವಣೆಯ ಭೀಕರ ಪರಿಣಾಮವನ್ನು ನಿರ್ಲಕ್ಷಿಸಲಾಗುವುದಿಲ್ಲ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಅನಾಹುತ ಕೂಡಾ ಹವಮಾನ ವೈಪರೀತ್ಯದಿಂದಾಗಿಯೇ ಆಗಿದೆ. ಇದನ್ನು ದಿಶಾ ರವಿ ಸಾರ್ವಜನಿಕರ ಗಮನಕ್ಕೆ ತರಲು ಕೆಲಸ ಮಾಡಿದ್ದಾರೆ” ಎಂದು ಸಂಘವು ಹೇಳಿದೆ.

“ದಿಶಾ ರವಿಯ ಇತಿಹಾಸದ ಪ್ರಜ್ಞೆಯು ಗಮನಾರ್ಹವಾಗಿದೆ. ಅವರು ಸ್ವಾತಂತ್ರ್ಯ ಸಂಗ್ರಾಮದಿಂದ ಸ್ಪೂರ್ತಿ ಪಡೆದಿದ್ದಾರೆ. ತನ್ನ ಕೆಲಸದ ಮೂಲಕ ದಿಶಾ ಅನುಕರಣೀಯ ವ್ಯಕ್ತಿಯಾಗಿ ನಿಂತಿದ್ದಾರೆ. ಈ ಸಮಯದಲ್ಲಿ ನಾವು ಅವರ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ಅಲ್ಲದೆ ಹವಾಮಾನ ಬದಲಾವಣೆ ಹೋರಾಟದಲ್ಲಿ ಅವರು ಕೈಗೊಂಡ ಕಾರ್ಯದ ಬಗ್ಗೆ ಹೆಮ್ಮೆ ಪಡುತ್ತೇವೆ” ಎಂದು ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಹೇಳಿದೆ.

ಸಂಘದ ಹೇಳಿಕೆಗೆ ನೂರಾರು ಹಳೆ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಹೇಳಿಕೆಯ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...