Homeಮುಖಪುಟಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ ದರ್ಶನ್!

ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ ದರ್ಶನ್!

ಈಗ ಥಿಯೇಟರ್‌ನಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವಿದೆ. ಅದು ಶೇ. 25 ಆದರೂ ಸರಿಯೇ ಥಿಯೇಟರ್​​ನಲ್ಲೇ ನಾವು ಸಿನಿಮಾ ಬಿಡುಗಡೆ ಮಾಡುತ್ತೇವೆ.

- Advertisement -
- Advertisement -

“ಅಂಬಾನಿ 5ಜಿ ಆರಂಭಿಸುತ್ತಿದ್ದಾರೆ, ಬಹುಶಃ ಇದು ಬಹುದೊಡ್ಡ ಹಗರಣ” ಎಂದು ಕನ್ನಡ ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದು, ಈ ಕಾರಣದಿಂದಲೇ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇಂದು ತಮ್ಮ ಫೇಸ್​​ಬುಕ್ ಪೇಜ್​ನಲ್ಲಿ ಲೈವ್ ಬಂದು ಅಭಿಮಾನಿಗಳೊಂದಿಗೆ ಮಾತನಾಡುತ್ತಿದ್ದ ಅವರು, “ಈಗಾಗಲೇ ಮಾರುಕಟ್ಟೆ, ಕಲ್ಯಾಣ ಮಂಟಪ, ಶಾಲೆ ಹಾಗೂ ಕಾಲೇಜುಗಳು ಆರಂಭವಾಗಿದೆ. ಆದರೆ ಚಿತ್ರಮಂದಿರಗಳನ್ನು ತೆರೆಯುತ್ತಿಲ್ಲ. ನಮಗೆ ನೀವು ಸಿನಿಮಾ ಮಂದಿರದಲ್ಲಿ ಬಂದು ನೋಡಿದರೆ ಮಾತ್ರ ತೃಪ್ತಿ. ಆದರೆ ಈಗ ಸಿನಿಮಾ ಥಿಯೇಟರ್ ತೆರಯುತ್ತಿಲ್ಲ. ಇದಕ್ಕೆ 5ಜಿ ಕಾರಣ. ಬಹುಶಃ ಇದು ಬಹುದೊಡ್ಡ ಹಗರಣ ಎನಿಸುತ್ತಿದೆ” ಎಂದು ದರ್ಶನ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ ಮಹಾರಾಜ್

ದರ್ಶನ್ ಮಾತನಾಡಿರುವ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

“ಅಂಬಾನಿ 5ಜಿ ಆರಂಭ ಮಾಡುತ್ತಿದ್ದಾರೆ. ಆದ್ದರಿಂದಲೇ ದೊಡ್ಡ ದೊಡ್ಡವರನ್ನು ಕೂರಿಸಿ ಥಿಯೇಟರ್ ಒಪನ್ ಮಾಡಲು ಅವಕಾಶ ನೀಡುತ್ತಿಲ್ಲ. ಇದು ಬಹುದೊಡ್ಡ ಹಗರಣ ಎನಿಸುತ್ತಿದೆ. ಏಕೆಂದರೆ ಮೊಬೈಲ್​​​ನಲ್ಲಿ ಸಿನಿಮಾ ನೋಡಿದರೇ ಮಾತ್ರ ಅವರಿಗೆ ವರ್ಕ್​​ಔಟ್ ಆಗುತ್ತದೆ. ಅದಕ್ಕಾಗಿ ಈ ರೀತಿ ಮಾಡ್ತಿದ್ದಾರೆ ಅನಿಸುತ್ತಿದೆ. ಯಾವುದೇ ಕಾರಣಕ್ಕೂ ಒಟಿಟಿಗೆ ನಾವು ಕೊಡೋದಿಲ್ಲ. ಈಗ ಥಿಯೇಟರ್‌ನಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವಿದೆ. ಅದು ಶೇ. 25 ಆದರೂ ಸರಿಯೇ ಥಿಯೇಟರ್​​ನಲ್ಲೇ ನಾವು ಸಿನಿಮಾ ಬಿಡುಗಡೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ಒಬ್ಬ ರೈತ ಕಷ್ಟಪಟ್ಟು ಬೆಳೆ ಬೆಳೆಯುವಂತೆ ನಾವು ಕಷ್ಟಪಟ್ಟು ಸಿನಿಮಾ ಮಾಡುತ್ತೇವೆ. ಇದಕ್ಕೆ ಫಲ ಸಿಗುವುದು ನೀವು ಥಿಯೇಟರ್‌ಗೆ ಬಂದು ಸಿನಿಮಾ ನೋಡಿದಾಗ ಮಾತ್ರ. ಆದರೆ ಮೊಬೈಲ್‌ನಲ್ಲೋ, ಟಿವಿಯಲ್ಲೋ ಅಥವಾ ಮತ್ತೆಲ್ಲೋ ನೋಡಿದರೆ ನಮ್ಮ ಶ್ರಮಕ್ಕೆ ಬೆಲೆ ಸಿಗುವುದಿಲ್ಲ. ಒಂದು ಸಿನಿಮಾ ನಿರ್ಮಾಣವಾಗಲು ನಿರ್ಮಾಪಕರು ಹಣ ಸುರಿದಿರುತ್ತಾರೆ. ನಾವು ನಮ್ಮ ಜೀವವನ್ನೇ ಪಣಕ್ಕಿಟ್ಟು ಚಿತ್ರ ಮಾಡಿರುತ್ತೇವೆ. ಹಾಗಾಗಿ ಸಿನಿಮಾವನ್ನು ಥಿಯೇಟರ್‌ನಲ್ಲಿಯೇ ನೋಡಿ. ಮಾರ್ಚ್​​ 11ಕ್ಕೆ ರಾಬರ್ಟ್​​ ಸಿನಿಮಾ ಬಿಡುಗಡೆ ಆಗುವ ಎಲ್ಲಾ ಸಾಧ್ಯತೆ ಇದೆ. ತೆಲುಗಿನಲ್ಲೂ ಡಬ್ಬಿಂಗ್ ಕಾರ್ಯ ಮುಗಿದಿದೆ” ಎಂದು ಹೇಳಿದರು.


ಇದನ್ನೂ ಓದಿ: ಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...