Homeಕರ್ನಾಟಕಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್; ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ” ಎಂದರು

“ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ; ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ‘ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ’ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು” ಎಂದರು.

“ಕೇವಲ ದಲಿತರಿಗಷ್ಟೇ ಅಲ್ಲ, ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು” ಎಂದರು.

“ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ. ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ; ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು” ಎಂದು ತಿಳಿಸಿದರು.

“ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ ರೀತಿಯಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

ಇದನ್ನೂ ಓದಿ; ದ್ವೇಷಪೂರಿತ ಭಾಷಣ: ಬಿಜೆಪಿ ಉಚ್ಛಾಟಿತ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...