Homeಕರ್ನಾಟಕನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿದ್ದರಾಮಯ್ಯ

ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ.
ಆದರೆ, ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧ ಪೂರ್ವ ದ್ವಾರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ವಾರ್ಷಿಕ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ, ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ. ಸಂವಿಧಾನದ ಜಾರಿಯನ್ನು ವಿರೋಧಿಸಿದ್ದವರೇ ಈ ಮನುವಾದಿಗಳು. ಸಂವಿಧಾನ ಜಾರಿ ಆದ 75 ವರ್ಷಗಳ ಹಿಂದೆಯೇ ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು” ಎಂದರು.

“ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ” ಎಂದು ಹೇಳಿದರು.

“ಬಜೆಟ್ ಗಾತ್ರ ಹೆಚ್ಚಾದಂತೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಹಣ ಹೆಚ್ಚಾಗಬೇಕು. ಆದರೆ, ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42,018 ಕೋಟಿ ರೂಪಯಿಯನ್ನು ನಾವು ತೆಗೆದಿಟ್ಟಿದ್ದೀವಿ. 8300 ಕೋಟಿ .ಸಿ.ಎಸ್.ಪಿ / ಟಿ.ಎಸ್.ಪಿ ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ” ಎಂದರು.

“ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ.
ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು. ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಹುತ್ವದ ದೇಶ ನಿರ್ಮಾಣಕ್ಕೆ, ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ” ಎಂದು ಸಿದ್ದರಾಮಯ್ಯ ಹೇಳಿದರು.

“ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ. ಇಂದಿನಿಂದ 32 ಜಿಲ್ಲೆಗಳಲ್ಲಿ ಒಟ್ಟು 33 ಡಿಸಿಆರ್‌ಇ ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಸಾಂಕೇತಿಕವಾಗಿ ಒಂದು ಕೇಂದ್ರ ಡಿಸಿಆರ್‌ಇ ಠಾಣೆಯನ್ನು ಉದ್ಘಾಟಿಸಿದ್ದೇನೆ” ಎಂದರು.

“ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು” ಎಂದು ಘೋಷಿಸಿದರು.

ಛತ್ತೀಸ್‌ಗಢ| ಪ್ರಬಲ ಜಾತಿ ಬಾಲಕಿಯೊಂದಿಗೆ ಮಾತನಾಡಿದ್ದಕ್ಕೆ ದಲಿತ ಯುವಕನಿಗೆ ಚಿತ್ರಹಿಂಸೆ; ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...