Homeಕರ್ನಾಟಕಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು - ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು – ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬಹುಸಂಖ್ಯಾತ ಸಮುದಾಯಗಳ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರ ಉದ್ದೇಶ-ಗುರಿ-ಮೌಲ್ಯಗಳು ಒಂದೇ ಆಗಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ಮನುಸ್ಮೃತಿ

ಮೈಸೂರಿನಲ್ಲಿ ನಡೆದ ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ. ಬಿ.ಆರ್.ಅಂಬೇಡ್ಕರ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಸವಣ್ಣ ಮತ್ತು ಅಂಬೇಡ್ಕರ್ ಅವರ ವಿಚಾರ ಮತ್ತು ಮೌಲ್ಯಗಳು ಒಂದೇ ಆಗಿವೆ. ವಿಚಾರಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿದ್ದರೂ ಮೌಲ್ಯಗಳು ಮತ್ತು ಆಶಯಗಳೆಲ್ಲಾ ಒಂದೇ ಆಗಿವೆ. ಅಂಬೇಡ್ಕರ್ ಅವರು ಓದಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ರಾಜ್ಯದಲ್ಲಿ ನಾವು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ಆರಂಭಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ದರು. ನಾವು ಎಳೆದ ಸಾಮಾಜಿಕ ನ್ಯಾಯದ ರಥವನ್ನು ಮತ್ತಷ್ಟು ಮುಂದಕ್ಕೆ ಎಳೆದುಕೊಂಡು ಹೋಗಿ, ಸಾಧ್ಯವಾಗದಿದ್ದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ. ಅಲ್ಲೇ ಬಿಟ್ಟುಬಿಡಿ ಆದರೆ ಹಿಂದಕ್ಕೆ ತಳ್ಳಬೇಡಿ ಎಂದಿದ್ದರು. ಹೀಗಾಗಿ ಮೌಡ್ಯ, ಕಂದಾಚಾರಗಳಲ್ಲಿ ಮುಳುಗಿ ಅಂಬೇಡ್ಕರ್ , ಬಸವಣ್ಣ ವಿಚಾರಗಳಿಗೆ ದ್ರೋಹ ಎಸಗಬಾರದು” ಎಂದು ಅವರು ತಿಳಿಸಿದ್ದಾರೆ.

“ವ್ಯಾಸ ಮಹಾಭಾರತ ಬರೆದರು. ವಾಲ್ಮೀಕಿ ರಾಮಾಯಣ ಬರೆದರು. ಅವಕಾಶಗಳು ಮುಖ್ಯ. ಜ್ಞಾನ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಕ್ಕಾಗ ಜ್ಞಾನ ಹೊರಗೆ ಬರುತ್ತದೆ. ಆದ್ದರಿಂದ ನಮ್ಮ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಪ್ರೊಫೆಸರ್ ಹುದ್ದೆ ತೊರೆದು ದೀಕ್ಷೆ ಪಡೆದಿರುವ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಪ್ರೊ.ಜ್ಞಾನ ಸ್ವರೂಪಾನಂದ ಸ್ವಾಮೀಜಿ ಅವರು ಸಮಾಜಕ್ಕೆ ನಿಜವಾದ ಗುರುವಾಗಲಿ. ಸಮಾಜವನ್ನು ಮಾನವೀಯತೆಯ ಹಾದಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಹಾರೈಸಿದ್ದಾರೆ.

ನಾನು ಸಿಎಂ ಆಗಲು, ಮಹದೇವಪ್ಪ ಮಂತ್ರಿ ಆಗಲು ಈ ಸಂವಿಧಾನವೇ ಕಾರಣ. ಈಗಲೂ ಮನುಸ್ಮೃತಿ ಪರವಾಗಿರುವ ಮನಸ್ಸುಗಳು ಸಂಚು ನಡೆಸುತ್ತಲೇ ಇವೆ. ಈ ಸಂಚನ್ನು ಸೋಲಿಸೋಣ. ಸಂವಿಧಾನದ ಮೌಲ್ಯಗಳ ಬಗ್ಗೆ ಗೌರವ ಇಲ್ಲದವರ ಕೈಯಲ್ಲಿ, ದುಷ್ಟರ ಕೈಲಿ ಸಂವಿಧಾನ ಉಳಿಯುವುದಿಲ್ಲ. ಆದ್ದರಿಂದ ನಾವು ದುಷ್ಟರ ಹುನ್ನಾರಗಳಿಂದ ಸಂವಿಧಾನ ಉಳಿವಿಗೆ ಬಹಳ ಬದ್ಧತೆಯಿಂದ ಎದ್ದು ನಿಲ್ಲಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

ಇದನ್ನೂಓದಿ:  ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...