Homeಮುಖಪುಟಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಆಂಧ್ರಪ್ರದೇಶದ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗ ಹತ್ತಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಜಗನ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೇ 24 ರಂದು ಕೋನಸೀಮಾ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ದೊಡ್ಡ ಗುಂಪು ಜಮಾಯಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾದ ಬಳಿಕ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಹಿಂಸಾಚಾರದಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಎರಡು ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಸಚಿವರು ಮತ್ತು ಶಾಸಕರ ಮನೆಯ ಸಿಸಿಟಿವಿ ಕ್ಯಾಮೆರಾಗಳು, ಕಿಮ್ಸ್ ಆಸ್ಪತ್ರೆ ಹಾಗೂ ಈ ಗುಂಪು ಸಂಚರಿಸುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

PC: TheNewsMinute

ಹಿಂಸಾಚಾರ ನಡೆದಾಗ ಅಲ್ಲಿದ್ದ ಸಿಬ್ಬಂದಿಯನ್ನು ಹಿಂಸಾಚಾರದಲ್ಲಿ ಭಾಗವಹಿಸಿದವರನ್ನು ಗುರುತಿಸಲು ಕರೆಸಲಾಯಿತು. ಜಿಲ್ಲೆಯ ಪ್ರಬಲ ಜಾತಿಗಳಾದ ಕಾಪುಗಳು, ಸೆಟ್ಟಿ ಬಲಿಜರು ಹಾಗೂ ನಾಗವಂಶದ ಕೆಲವು ಸದಸ್ಯರು ಘಟನೆಯಲ್ಲಿ ಭಾಗವಹಿಸಿದ್ದರು ಎಂದು ಹಿಂದಿನ ತನಿಖಾ ಅಧಿಕಾರಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

PC: TheNewsMinute

ಹಿಂಸಾಚಾರಕ್ಕೂ ಮುನ್ನ 20ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿದ್ದವು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಹಿಂಸಾಚಾರವನ್ನು ಹೇಗೆ ಆಯೋಜಿಸಬೇಕು ಎಂಬುದರ ಕುರಿತು ನಿರ್ದಿಷ್ಟ ಸೂಚನೆಗಳೊಂದಿಗೆ ಪ್ರಚೋದನಕಾರಿ ಸಂದೇಶಗಳನ್ನು ಗುಂಪುಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಜಿಲ್ಲೆಯ ಹೆಸರು ಕೋನಸೀಮಾ ಎಂದಷ್ಟೇ ಇರಬೇಕೆಂದು ಬಯಸುವ “ಸ್ನೇಹಿತರನ್ನು” ಒಂದುಗೂಡಿಸುವ ಉದ್ದೇಶದಿಂದ ಈ ಗುಂಪುಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸೇರಿಸುವ ಸರ್ಕಾರದ ನಿರ್ಧಾರದಿಂದ ಗುಂಪಿನಲ್ಲಿರುವವರು ಅಸಮಾಧಾನಗೊಂಡಿದ್ದಾರೆ. ಹೊಸದಾಗಿ ರೂಪುಗೊಂಡ ಜಿಲ್ಲೆಗೆ ಏಪ್ರಿಲ್ 4 ರಂದು ಕೋನಸೀಮ ಎಂದು ಹೆಸರಿಸಲಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಜೊತೆಗೆ ಸೇರಿಸುವ ನಿರ್ಧಾರವನ್ನು ಮೇ 18ರಂದು ಸರ್ಕಾರ ಘೋಷಿಸಿತು.

ಗ್ರೂಪ್‌ ಅಡ್ಮಿನ್‌ಗಳ ಪತ್ತೆ

“ಹಿಂಸಾಚಾರದಲ್ಲಿ ಭಾಗವಹಿಸಿದ 19 ಜನರನ್ನು ಬಂಧಿಸಲಾಗಿದೆ” ಎಂದು ಏಲೂರು ವ್ಯಾಪ್ತಿಯ ಡಿಐಜಿ ಪಾಲ ರಾಜು ‘ನ್ಯೂಸ್‌ ಮಿನಿಟ್‌’ಗೆ ತಿಳಿಸಿದ್ದಾರೆ.

“ನಾವು ಮೇ 25ರಂದು 46 ಜನರನ್ನು ಬಂಧಿಸಿದ್ದೇವೆ. ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾವು ಅವರ ಫೋನ್‌ಗಳನ್ನು ಪರಿಶೀಲಿಸಿದ್ದು, ವಿವಿಧ ಗ್ರೂಪ್‌ಗಳಲ್ಲಿನ ಹಲವಾರು ಸಂದೇಶಗಳನ್ನು ಡಿಲೀಟ್ ಮಾಡಲಾಗಿದೆ. ಘಟನೆಯ ನಂತರ ಅನೇಕರು ಗ್ರೂಪ್‌ಗಳಿಂದ ಲೆಫ್ಟ್‌ ಆಗಿದ್ದಾರೆ. ಡಿಲೀಟ್ ಮಾಡಲಾದ ಎಲ್ಲಾ ಸಂದೇಶಗಳನ್ನು ಮತ್ತು ಗುಂಪುಗಳಿಂದ ನಿರ್ಗಮಿಸಿದವರ ವಿವರಗಳನ್ನು ನಾವು ತಂತ್ರಜ್ಞಾನಗಳನ್ನು ಬಳಸಿಕೊಂಡು ಪತ್ತೆಹಚ್ಚಿದ್ದೇವೆ. ನಾವು ಗ್ರೂಪ್ ಅಡ್ಮಿನ್‌ಗಳನ್ನು ಗುರುತಿಸಿದ್ದೇವೆ. ಅವರು ಕೂಡ ಶೀಘ್ರದಲ್ಲೇ ಕಾನೂನಿನ ಕ್ರಮಗಳನ್ನು ಎದುರಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿಯ ವಿಷಯವಾಗಿ ಈ ಗುಂಪುಗಳನ್ನು ರಚಿಸಲಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ತನಿಖಾಧಿಕಾರಿ, “ಜಾತಿ ವಿಚಾರವಾಗಿ ಒಗ್ಗೂಡಿರುವ ಕುರಿತು ನಾವಿನ್ನು ವಿಶ್ಲೇಷಣೆ ಮಾಡಿಲ್ಲ. ಈ ವಾಟ್ಸಾಪ್ ಗುಂಪುಗಳು ಮುಖ್ಯವಾಗಿ ಜಿಲ್ಲೆಗೆ ಕೋನಸೀಮಾ ಎಂದು ಹೆಸರಿಸಬೇಕೆಂದು ಬಯಸುವ ಸ್ನೇಹಿತರನ್ನು ಒಳಗೊಂಡಿವೆ. ವಾಟ್ಸಾಪ್ ಗ್ರೂಪ್‌ಗಳ ಹೆಸರು ಗಮನಿಸಿದರೆ ಇದು ಬಹಿರಂಗವಾಗುತ್ತದೆ. ಹೆಚ್ಚಿನವರನ್ನು ಬಂಧಿಸಿದ ಬಳಿಕ, ನಾವು ವಿವಿಧ ಆಯಾಮಗಳನ್ನು ಗುರುತಿಸಲು ಪ್ರಯತ್ನಿಸುತ್ತೇವೆ. ಜಾತಿ ಒಗ್ಗೂಡುವಿಕೆ ಮತ್ತು ರಾಜಕೀಯ ಸಂಬಂಧಗಳನ್ನೂ ವಿಚಾರಣೆ ನಡೆಸುತ್ತೇವೆ” ಎಂದಿದ್ದಾರೆ.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...