Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...