Homeಮುಖಪುಟಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

- Advertisement -
- Advertisement -

ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್‌ಎಲ್‌ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್‌ ಅಲ್ಲ: ಗುಜರಾತ್‌ ಸ್ಪೀಕರ್‌ ವಿವಾದಾತ್ಮಕ ಹೇಳಿಕೆ

“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.

ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್‌ ​​ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...