Homeಕರ್ನಾಟಕಹಿರಿಯ ಲೇಖಕಿ ದು.ಸರಸ್ವತಿ ಅನುವಾದಿಸಿರುವ ‘ನಾವೂ ಇತಿಹಾಸ ಕಟ್ಟಿದೆವು’ ಕೃತಿ ಬಿಡುಗಡೆ ಮಾಡಲಿರುವ ಅಂಬೇಡ್ಕರ್‌ ಮೊಮ್ಮಗಳು...

ಹಿರಿಯ ಲೇಖಕಿ ದು.ಸರಸ್ವತಿ ಅನುವಾದಿಸಿರುವ ‘ನಾವೂ ಇತಿಹಾಸ ಕಟ್ಟಿದೆವು’ ಕೃತಿ ಬಿಡುಗಡೆ ಮಾಡಲಿರುವ ಅಂಬೇಡ್ಕರ್‌ ಮೊಮ್ಮಗಳು ರಮಾಬಾಯಿ ತೇಲ್ತುಂಬ್ಡೆ

- Advertisement -
- Advertisement -

ಕನ್ನಡದ ಹಿರಿಯ ಲೇಖಕಿ ದು.ಸರಸ್ವತಿ ಅವರು ಅನುವಾದಿಸಿರುವ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌‌ ಅವರ ಜೊತೆಗೆ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಹಿಳೆಯರ ಕುರಿತ ಕೃತಿ ‘ನಾವೂ ಇತಿಹಾಸ ಕಟ್ಟಿದೆವು’ ಸೆಪ್ಟೆಂಬರ್‌‌ 4 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕೃತಿಯ ಬಿಡುಗಡೆಯನ್ನು ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ತೇಲ್ತುಂಬ್ಡೆ ಅವರು ನೆರವೇರಿಸಲಿದ್ದಾರೆ.

ಅಂಬೇಡ್ಕರ್‌‌ ಅವರೊಂದಿಗೆ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಹಿಳೆಯರ ಕುರಿತು ಅಧ್ಯಯನ ನಡೆಸಿ ಮರಾಠಿಯಲ್ಲಿ ‘ಆಮ್ಹಿಹಿ ಇತಿಹಾಸ್ ಘಡವಲಾ’ ಎಂಬ ಪುಸ್ತಕವನ್ನು ಮರಾಠಿ ಲೇಖಕಿಯರಾದ ಊರ್ಮಿಳಾ ಪವಾರ್ ಮತ್ತು ಮೀನಾಕ್ಷಿ ಮೂನ್ ಅವರು ಪ್ರಕಟಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕೃತಿಯನ್ನು ಲೇಖಕಿ ವಂದನಾ ಸೋನಾಲ್ಕರ್ ಅವರು ‘We Also Made History’ ಎಂಬ ಹೆಸರಿನಲ್ಲಿ ಇಂಗ್ಲಿಷಿಗೆ ಅನುವಾದಿಸಿದ್ದರು. ಈ ಪುಸ್ತಕವನ್ನು ಲೇಖಕಿ ದು.ಸರಸ್ವತಿ ಅವರು ಕನ್ನಡಕ್ಕೆ ‘ನಾವೂ ಇತಿಹಾಸ ಕಟ್ಟಿದೆವು’ ಅನ್ನುವ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಹೊನ್ನಾವರದ ಕವಲಕ್ಕಿಯ ‘ಕವಿ ಪ್ರಕಾಶನ’ ಕೃತಿಯನ್ನು ಪ್ರಕಟಿಸಿದ್ದು, ಸೆಪ್ಟೆಂಬರ್‌‌ 4ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಬಿಡುಗಡೆಗೊಳ್ಳಲಿದೆ. ಕೃತಿಯನ್ನು ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ತೇಲ್ತುಂಬ್ಡೆ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಮ್ ಪ್ರಶಸ್ತಿ ಪುರಸ್ಕೃತರಾದ ವೆಂಕಮ್ಮ ಅವರು ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ದಲಿತ ಹೋರಾಟಗಾರ ಎನ್.ವೆಂಕಟೇಶ್ ವಹಿಸಲಿದ್ದು, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಸಬೀಹಾ ಭೂಮಿಗೌಡ ಹಾಗೂ ಸಾಹಿತಿ, ಚಿಂತಕರಾದ ಪೀರ್ ಭಾಷಾ ಪುಸ್ತಕದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

ಪ್ರಕಾಶಕಿ ಡಾ.ಎಚ್.ಎಸ್.ಅನುಪಮಾ, ಅನುವಾದಕಿ ಡಾ.ದು.ಸರಸ್ವತಿ, ಡಾ.ಕೆ.ವಿ.ನೇತ್ರಾವತಿ, ಅಶ್ವಿನಿ ಬೋಧ್, ಭರತ್, ಮಲ್ಲಮ್ಮ ಕಂಬಾರ್, ರೂಮಿ ಹರೀಶ್, ಕೆಸ್ತಾರ ಮೌರ್ಯ ಹಾಗೂ ವಿ.ಎಲ್ ನರಸಿಂಹಮೂರ್ತಿ ಪುಸ್ತಕ ಕುರಿತು ಸ್ಪಂಧನೆ ನೀಡಲಿದ್ದಾರೆ. ‘ತಮಟೆ ಕರ್ನಾಟಕ’ ಮತ್ತು ‘ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ – ಬೆಂಗಳೂರು’ ಜಂಟಿ ಆಶ್ರಯದಲ್ಲಿ ಈ ಕಾಯ್ರಕ್ರಮವನ್ನು ಆಯೋಜಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...