Homeಚಳವಳಿಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಅಂಬೇಡ್ಕರ್‌ ಸಂಬಂಧಿ, ಚಿಂತಕ ಆನಂದ್‌ ತೇಲ್ತುಂಬ್ಡೆ

ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಅಂಬೇಡ್ಕರ್‌ ಸಂಬಂಧಿ, ಚಿಂತಕ ಆನಂದ್‌ ತೇಲ್ತುಂಬ್ಡೆ

ಅವರಿಗೆ ಜಾಮೀನು ನೀಡಬಾರದು ಎಂದು ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್‌ ಶುಕ್ರವಾರ ತಿರಸ್ಕರಿಸಿತ್ತು

- Advertisement -
- Advertisement -

ಎಲ್ಗರ್ ಪರಿಷತ್-ಕೊರೆಗಾಂವ್‌ ಪ್ರಕರಣದಲ್ಲಿ ಸಿಲುಕಿದ್ದ ವಿದ್ವಾಂಸ, ಅಂಬೇಡ್ಕರ್‌ವಾದಿ ಆನಂದ್ ತೇಲ್ತುಂಬ್ಡೆ ಅವರು ಕೊನೆಗೂ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ. ಮುಂಬೈ ಹೈಕೋರ್ಟ್‌ ಅವರಿಗೆ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್‌ ಶುಕ್ರವಾರ ತಿರಸ್ಕರಿಸಿ, ಅವರ ಜಾಮೀನಿಗೆ ಅನುಮತಿ ನೀಡಿತ್ತು.

ಪ್ರಕರಣದಲ್ಲಿ ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿ ಕಳೆದ 73 ವರ್ಷದ ತೇಲ್ತುಂಬ್ಡೆ ಅವರು ಮಧ್ಯಾಹ್ನ 1.15 ರ ಸುಮಾರಿಗೆ ಜೈಲಿನಿಂದ ಹೊರನಡೆದರು ಎಂದು ಅವರು ಅಧಿಕಾರಿಗಳು ಹೇಳಿದ್ದಾರೆ. ಎಪ್ರೀಲ್ 14 2020ರ ಅಂಬೇಡ್ಕರ್‌ ಜಯಂತಿಯಂದು ಶರಣಾಗಿದ್ದ ಅವರು, ನವೆಂಬರ್‌‌ 26ರ ಸಂವಿಧಾನ ದಿನದಂದು ಬಿಡುಗಡೆಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೇಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರದಂದು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅದರಂತೆ ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: NIA ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸಮ್ಮತಿ

ಪ್ರಕರಣದಲ್ಲಿ ಬಂಧಿತರಾದವರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಲಿರುವ 16 ಆರೋಪಿಗಳಲ್ಲಿ ತೇಲ್ತುಂಬ್ಡೆ ಮೂರನೇಯವರಾಗಿದ್ದಾರೆ. ಪ್ರಸ್ತುತ ಕ್ರಾಂತಿಕಾರಿ ಕವಿ ವರವರ ರಾವ್ ಆರೋಗ್ಯದ ಕಾರಣದಿಂದ ಜಾಮೀನಿನ ಮೇಲೆ ಹೊರಗಿದ್ದು, ವಕೀಲೆ ಸುಧಾ ಭಾರದ್ವಾಜ್ ಅವರು ಡೀಫಾಲ್ಟ್‌‌ ಜಾಮೀನಿನ ಮೇಲೆ ಹೊರಗಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಸಭೆ ನಡೆದ ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ಉಂಟಾಗಿತ್ತು. ಎಲ್ಗರ್‌ನಲ್ಲಿ ನಡೆಸಿದ ಪ್ರಚೋದನಾತ್ಮಕ ಭಾಷಣದಿಂದ ಈ ಹಿಂಸಾಚಾರ ಭುಗಿಲೆದ್ದಿದೆ ಎಂದು ಪೊಲೀಸರು ಆರೋಪಿಸಿದ್ದರು.

ಈ ವೇಳೆ ಪೊಲೀಸರು ಮಾವೋವಾದಿ ನಂಟು ಹೊಂದಿರುವ ಕೆಲ ವ್ಯಕ್ತಿಗಳು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪುಣೆ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ಅದಾತಗ್ಯೂ 2017 ರ ಡಿಸೆಂಬರ್ 31 ರಂದು ಪುಣೆ ನಗರದಲ್ಲಿ ನಡೆದ ಎಲ್ಗರ್ ಪರಿಷತ್ ಕಾರ್ಯಕ್ರಮಕ್ಕೆ ತಾನು ಹಾಜರಾಗಿರಲಿಲ್ಲ ಅಥವಾ ಯಾವುದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಿಲ್ಲ ಎಂದು ಎಲ್ತುಂಬ್ಡೆ ನ್ಯಾಯಾಲಯದಲ್ಲಿ ವಾದಿಸಿದ್ದರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...