Homeಕರ್ನಾಟಕಪರಿಶಿಷ್ಠ ಪಂಗಡಕ್ಕೆ ಅಂಬಿಗ ಸಮುದಾಯ; ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ ನೀಡಲಾಗುವುದು; ಸಿಎಂ ಸಿದ್ದರಾಮಯ್ಯ

ಪರಿಶಿಷ್ಠ ಪಂಗಡಕ್ಕೆ ಅಂಬಿಗ ಸಮುದಾಯ; ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ ನೀಡಲಾಗುವುದು; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಂಬಿಗ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಕುರಿತು ಶೀಘ್ರದಲ್ಲೇ ಕೇಂದ್ರಕ್ಕೆ ಸ್ಪಷ್ಟನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂಬಿಗ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಕುರಿತು ಈಗಾಗಲೇ ಎರಡು ಬಾರಿ ರಾಜ್ಯ ಸರಕಾರವೂ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದೆ. ಕೇಂದ್ರ ಸರಕಾರ ಕೇಳಿರುವ ಮರು ಸ್ಪಷ್ಟೀಕರಣವನ್ನು ಕೂಡಲೇ ಪರಿಶೀಲಿಸಿ ಸಲ್ಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

1996-97ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಅಂಬಿಗ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದ ಶ್ರಮವನ್ನು ಮರೆಯಬಾರದು. ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲು ಕೀಳು ಎಂಬುವುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು. ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ, ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ಹಿಂದುಳಿದ ಸಮಾಜದ ಪರ ಸದಾ ನಾನು ಇರುವುದಾಗಿ ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಭಾರತದಲ್ಲಿ ಮುಸ್ಲಿಮ್‌ ವಿರೋಧಿ ಪ್ರಚಾರಕ್ಕೆ ಸಾಮಾಜಿಕ ಮಾದ್ಯಮವನ್ನು ಹೇಗೆ ಬಳಸಲಾಗಿದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...