Homeಕರ್ನಾಟಕಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

- Advertisement -
- Advertisement -

ಯಾವುದೆ ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್‌ನಲ್ಲೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ ಕಾರಣ ಈ ಘಟನೆ ನಡೆದಿದೆ ಎಂದು TNIE ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಹೋದರರಾದ ಚಂದ್ರಣ್ಣ ಮತ್ತು ಗೋಪಾಲಪ್ಪ ಅವರು ಶವವನ್ನು ಸವಾರ ಮತ್ತು ಹಿಂಬದಿ ಸವಾರನ ನಡುವೆ ತಮ್ಮ ತಂದೆಯ ಮೃತದೇಹವನ್ನು ಇಟ್ಟಯ ಆಸ್ಪತ್ರೆಯಿಂದ ಸುಮಾರು 3-4 ಕಿಮೀ ದೂರದಲ್ಲಿರುವ ದಳವಾಯಿಹಳ್ಳಿ ಗ್ರಾಮಕ್ಕೆ ಸವಾರಿ ಮಾಡಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿ ಭಾರತೀಯರಲ್ಲ’ ಎಂಬ ಹೇಳಿಕೆ; ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಹಿಂದೂ ಸೇನಾ ಮುಖ್ಯಸ್ಥ

ಅಸ್ವಸ್ಥರಾಗಿದ್ದ ತಮ್ಮ ತಂದೆ ಗುಡುಗುಳ್ಳ ಹೊನ್ನೂರಪ್ಪ (80) ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.

ಇದರ ನಂತರ ಸಹೋದರರಿಬ್ಬರು ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಆಂಬ್ಯುಲೆನ್ಸ್ ಸೇವೆಯನ್ನು ಆಸ್ಪತ್ರೆಯ ಅಧಿಕಾರಿಗಳಿಗೆ ಕೋರಿದ್ದರು. ಆದರೆ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ವರಿದಯಾಗಿದೆ. ಅಷ್ಟೆ ಅಲ್ಲದೆ, ಪಾವಗಡ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಮಧ್ಯ ಪ್ರವೇಶಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಮೂಲಗಳು ತಿಳಿಸಿದ್ದಾರೆ ವರದಿಯಾಗಿದೆ.

ವಾಗ್ವಾದದ ನಂತರ, ಸಹೋದರರಿಬ್ಬರು ತಮ್ಮ ಬೈಕ್‌ನಲ್ಲಿ ಶವವನ್ನು ಸಾಗಿಸಲು ನಿರ್ಧರಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎನ್.ಮಂಜುನಾಥ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ: ‘ತಿರುಪತಿ ಲಡ್ಡು ತಯಾರಿಕೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ’ ಎಂದ ಸಿಎಂ ನಾಯ್ಡು; ಆರೋಪ ನಿರಾಕರಿಸಿದ ವೈಎಸ್ಆರ್ ಕಾಂಗ್ರೆಸ್

ಆಸ್ಪತ್ರೆಯಲ್ಲಿ ಶವ ಸಾಗಿಸಲು ಯಾವುದೇ ವಾಹನದ ಸೌಲಭ್ಯಗಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನಾರೋಗ್ಯದ ವೇಳೆ ಕರೆತಂದಿದ್ದ 108 ಆ್ಯಂಬುಲೆನ್ಸ್‌ನಲ್ಲೇ ಊರಿಗೆ ಶವ ಸಾಗಿಸಲು ಸಿಬ್ಬಂದಿಗಳಲ್ಲಿ ಮಕ್ಕಳು ವಿನಂತಿಸಿದ್ದರು. ಆದರೆ, 108 ಆ್ಯಂಬುಲೆನ್ಸ್‌ನಲ್ಲಿ ಮೃತಪಟ್ಟ ಬಳಿಕ ಶವ ಸಾಗಿಸುವಂತಿಲ್ಲ ಎಂಬ ನಿಯಮ ಇರುವುದರಿಂದ ಶವ ಕೊಂಡೊಯ್ಯಲು ನಿರಾಕರಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಬೈಕಿನಲ್ಲಿ ಶವವನ್ನು ಸಾಗಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲೆ ಇಂತದ್ದೊಂದು ದಾರುಣ ಘಟನೆ ನಡೆದಿರುವುದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರೆ ಆದ ಸಾಮಾಜಿಕ ಹೋರಾಟಗಾರ ಅನಿಲ್ ಚಿಕ್ಕದಾಳವಟ್ಟ ಅವರು ಘಟನೆಗೆ ಪ್ರತಿಕ್ರಿಯಿಸಿ, “ಅತಿ ಹಿಂದುಳಿದ ತಾಲ್ಲೂಕುಗಳ ದುಸ್ಥಿತಿ ಇದು. ಈ ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದಾರೆ. ಈ ಕ್ಷೇತ್ರದ ಶಾಸಕ ಮಾಜಿ ಸಚಿವರ ಮಗ. ಕನಿಷ್ಠ ಆರೋಗ್ಯ, ಶಿಕ್ಷಣದ ವ್ಯವಸ್ಥೆಯನ್ನಾದರೂ ಸರಿಪಡಿಸಿಕೊಳ್ಳಲಾರದ ದುಸ್ಥಿತಿ ನಮ್ಮದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...