Homeಕರ್ನಾಟಕಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...