Homeಕರ್ನಾಟಕಕೇಂದ್ರ ಬಿಜೆಪಿ ಸರ್ಕಾರದ ರೈತ ವಿರೋಧಿ 'ಭೂ ಸುಧಾರಣಾ ಕಾಯ್ದೆ 2020'ಕ್ಕೆ ತಿದ್ದುಪಡಿ: ಸಿಎಂ ಭರವಸೆ

ಕೇಂದ್ರ ಬಿಜೆಪಿ ಸರ್ಕಾರದ ರೈತ ವಿರೋಧಿ ‘ಭೂ ಸುಧಾರಣಾ ಕಾಯ್ದೆ 2020’ಕ್ಕೆ ತಿದ್ದುಪಡಿ: ಸಿಎಂ ಭರವಸೆ

- Advertisement -
- Advertisement -

ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್‌ನಲ್ಲಿ ರೈತ ನಾಯಕ ಪ್ರೊ.ಎಂ.ಡಿ ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿ, ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

Image

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು ಎಂದು ಸಿಎಂ ಹೇಳಿದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಅವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟಗಳು ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ.
ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆಯಾಗಿದೆ ಎಂದರು.

Image

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

0
ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಹೂಡಿರುವ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಫೆಬ್ರವರಿ 29ಕ್ಕೆ ನಿಗದಿಪಡಿಸಿದೆ. ಶಾಹಿ ಈದ್ಗಾ ಇಂತೇಜಾಮಿಯಾ ಸಮಿತಿಯು ಕತ್ರ...