Homeಕರ್ನಾಟಕ'ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ'ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

‘ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಜನರ ಹಣ ವಂಚಿಸುವ ಮೋಸದ ಕಂಪೆನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ‘ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ (ಡಿ.16) ವಿಧಾನಸಭೆಯಲ್ಲಿ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “2003-04 ರಲ್ಲಿ ವಿನಿವಿಂಕ್‌ ಶಾಸ್ತ್ರಿ ಚಿಟ್‌ಫಂಡ್‌ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004 ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು” ಎಂದರು.

“ಚೈನ್‌ಲಿಂಕ್‌, ಚಿಟ್‌ಫಂಡ್‌, ಪಿರಮಿಡ್‌ ಮಾದರಿ ಹಾಗೂ ಹಣ ಡಬ್ಲಿಂಗ್‌ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

“ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ” ಎಂದು ಅವರು ತಿಳಿಸಿದರು.

“ಕೆಲವರು ಕಂಪೆನಿ ತೆರೆದು ಹಗರಣ ಮಾಡಿ, ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪೆನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು, ಅಂತಹ ಕಂಪೆನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧವೂ ಕ್ರಮ

ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ಶಾಸಕರಾದ ಸುನೀಲ್‌ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್‌, ಹೌಸಿಂಗ್‌ ಸ್ಕೀಂ ಹಾಗೂ ಗೋಲ್ಡ್‌ ಲೋನ್‌ ಕಂಪೆನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

“ಹೌಸಿಂಗ್‌ ಸ್ಕೀಂ, ಮೈಕ್ರೋ ಲೆಂಡಿಂಗ್‌, ಗೋಲ್ಡ್‌ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪೆನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್‌ ಹೆಸರಿನ ಕಂಪೆನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ” ಎಂದು ಸದನಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ; ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...