Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...