Homeಅಂತರಾಷ್ಟ್ರೀಯಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

- Advertisement -
- Advertisement -

ಅಮೆರಿಕದ ಟೆಕ್ಸಾಸ್ ಪ್ರಾಂತ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ ಮೂಲದ ಅಮೇರಿಕನ್‌ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿ ಥಳಿಸಿದ್ದಾರೆ. ಭಾರತೀಯರು ಅಮೆರಿಕವನ್ನು ‘ಹಾಳು’ ಮಾಡುತ್ತಿದ್ದ, ‘ಭಾರತಕ್ಕೆ ಹಿಂತಿರುಗಿ’ ಎಂದು ಜನಾಂಗೀಯ ನಿಂದನೆ ಮಾಡಿದ್ದಾರೆ. ಘಟನೆ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ನಡೆದಿದೆ.

ದುಷ್ಕರ್ಮಿ ಮಹಿಳೆಯನ್ನು ಎಸ್ಮೆರಾಲ್ಡಾ ಆಪ್ಟನ್ ಎಂದು ಗುರುತಿಸಲಾಗಿದೆ. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದು ವಿಡಿಯೊದಲ್ಲಿ ಮಹಿಳೆಯು ತಾನು ಮೆಕ್ಸಿಕನ್ ಅಮೆರಿಕನ್ ಎಂದು ಹೇಳಿಕೊಳ್ಳುತ್ತಾರೆ. ವಿಡಿಯೊದಲ್ಲಿ ಅವರು ಭಾರತೀಯ-ಅಮೇರಿಕನ್ ಮಹಿಳೆಯರ ಗುಂಪಿನ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಭಾರತೀಯರನ್ನು ದ್ವೇಷಿಸುತ್ತೇನೆ. ಉತ್ತಮ ಜೀವನ ಬಯಸಿ ಎಲ್ಲಾ ಭಾರತೀಯರು ಅಮೆರಿಕಕ್ಕೆ ಬರುತ್ತಾರೆ. ನೀವು ಭಾರತೀಯರು ಎಲ್ಲೆಡೆ ಇದ್ದೀರಿ” ಎಂದು ಎಸ್ಮೆರಾಲ್ಡಾ ಆಪ್ಟನ್ ವೀಡಿಯೊದಲ್ಲಿ ನಾಲ್ವರು ಭಾರತೀಯ-ಅಮೆರಿಕನ್ ಮಹಿಳೆಯರ ಮೇಲೆ ನಿಂದನೆ ಮಾಡುತ್ತಾ ಹೇಳುತ್ತಾರೆ.

ಇದನ್ನೂ ಓದಿ: ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

“ನೀವು ಭಾರತಕ್ಕೆ ಹಿಂತಿರುಗಿ. ನೀವು *** ಈ ದೇಶವನ್ನು ಹಾಳು ಮಾಡುತ್ತಿದ್ದೀರಿ” ಎಂದು ಮಹಿಳೆಯು ಭಾರತೀಯರ ಗುಂಪಿಗೆ ಅವಾಚ್ಯ ನಿಂದನೆ ಮಾಡುತ್ತಾ ಹೇಳುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಅಮೆರಿಕದಾದ್ಯಂತ ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಆರೋಪಿ ಎಸ್ಮೆರಾಲ್ಡಾ ಆಪ್ಟನ್ ಜನಾಂಗೀಯ ನಿಂದನೆಗಳನ್ನು ಮಾಡುವುದು ವೀಡಿಯೊದಲ್ಲಿ ದಾಖಲಾಗಿದ್ದು, ಒಂದು ಹಂತದಲ್ಲಿ ಅವರು ಇಬ್ಬರು ಭಾರತೀಯ ಮಹಿಳೆಯರ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ವ್ಯಕ್ತಿಯು, “ನನ್ನ ತಾಯಿ ಮತ್ತು ಅವರ ಮೂವರು ಸ್ನೇಹಿತರು ಊಟಕ್ಕೆ ಹೋದ ಸಮಯ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ಘಟನೆ ಸಂಭವಿಸಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಜಾತೀಯತೆ ಮತ್ತು ಜನಾಂಗೀಯವಾದವನ್ನು ಬೆಸೆದು ಶೋಷಣೆಯ ವ್ಯಾಪಕತೆಯನ್ನು ಚರ್ಚಿಸುವ ’ಕ್ಯಾಸ್ಟ್’

ವಿಡಿಯೊದಲ್ಲಿ ಆರೋಪಿ ಮಹಿಳೆಯ ಮಾತುಗಳನ್ನು ಭಾರತೀಯ ಮಹಿಳೆ ವಿರೋಧಿಸುತ್ತಾರೆ, ಜನಾಂಗೀಯ ನಿಂದನೆಗಳನ್ನು ಮಾಡದಂತೆ ವಿನಂತಿಸುತ್ತಾರೆ. ತಾನು ಅಮೆರಿಕದಲ್ಲಿ ಜನಿಸಿದೆ ಎಂದು ಹೇಳುವ ಆರೋಪಿ ಮಹಿಳೆ ಮಹಿಳೆಯರ ಮೇಲೆ ದಾಳಿ ಮಾಡುತ್ತಾರೆ.

“ನಾನು ಎಲ್ಲಿಗೆ ಹೋದರೂ, ನೀವು ಭಾರತೀಯರು ಎಲ್ಲೆಡೆ ಇದ್ದೀರಿ. ಭಾರತದಲ್ಲಿ ಜೀವನವು ತುಂಬಾ ದೊಡ್ಡದಾಗಿದ್ದರೆ, ನೀವು ಯಾಕೆ ಇಲ್ಲಿ ಇದ್ದೀರಿ” ಎಂದು ಆರೋಪಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಪ್ಲಾನೋ ಪೋಲೀಸ್ ಡಿಟೆಕ್ಟಿವ್ಸ್ ಗುರುವಾರ ಮಧ್ಯಾಹ್ನ ಆರೋಪಿ ಎಸ್ಮೆರಾಲ್ಡಾ ಅಪ್ಟನ್ನ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಹಲ್ಲೆ, ದೈಹಿಕ ಗಾಯ ಮತ್ತು ಭಯೋತ್ಪಾದಕ ಬೆದರಿಕೆಗಳ ಆರೋಪ ಹೊರಿಸಲಾಗಿದೆ. ಒಟ್ಟು 10,000 ಅಮೇರಿಕನ್ ಡಾಲರ್‌ ಬಾಂಡ್ ಮೊತ್ತದ ಮೇಲೆ ಅವರನ್ನು ಬಂಧಿಸಲಾಗಿದೆ. ಪ್ಲಾನೋ ಪೋಲೀಸ್ ಇಲಾಖೆ ಘಟನೆಯು ದ್ವೇಷದ ಅಪರಾಧ ಎಂದು ತನಿಖೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...