Homeಮುಖಪುಟಅಮೆರಿಕದ ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಅಮೆರಿಕದ ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

- Advertisement -
- Advertisement -

ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರಿಗೆ 2023ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಮಹಿಳಾ ಕಾರ್ಮಿಕ ಮಾರುಕಟ್ಟೆ ಫಲಿತಾಂಶಗಳ ಕುರಿತಂತೆ ನಮ್ಮ ಜ್ಞಾನವನ್ನು ಹೆಚ್ಚಿಸಿದ್ದಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸಾಯನ್ಸಸ್ ಹೇಳಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿಗಳ ಪೈಕಿ ಇತರ ಕ್ಷೇತ್ರಗಳ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದ್ದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಈ ಬಾರಿಯ ಕೊನೆಯ ಪ್ರಶಸ್ತಿಯಾಗಿದೆ.

ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದ ಆಲ್ಫ್ರೆಡ್ ನೊಬೆಲ್ ಮೊದಲು ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದರೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸ್ವೀಡನ್ ದೇಶದ ಸೆಂಟ್ರಲ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ 1968ರಲ್ಲಿ ಸೇರಿಸಲಾಗಿತ್ತು.

ಆರ್ಥಿಕ ವಿಜ್ಞಾನಕ್ಕೆ 1969 ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ. 92 ಪುರಸ್ಕೃತರ ಪೈಕಿ 25 ಮಂದಿ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್‌ ಪಾತ್ರರಾಗಿದ್ದಾರೆ.

ನೊಬೆಲ್​​ ಪ್ರಶಸ್ತಿಯನ್ನು ಅಕ್ಟೋಬರ್ 2ರಿಂದ ನೀಡಲಾಗುತ್ತಿದೆ. ಇನ್ನು ಆರ್ಥಿಕ ವಿಜ್ಞಾನ ಕ್ಷೇತ್ರಕ್ಕೆ ಇದು ಈ ವರ್ಷದ ಕೊನೆಯ ಪ್ರಶಸ್ತಿಯಾಗಿದೆ. ಔಷಧ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಮತ್ತು ಶಾಂತಿಗೆ ಸಂಬಂಧಿಸಿದಂತೆ ಈ ವಾರ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿತ್ತು.

ಇದನ್ನೂ ಓದಿ: ನೊಬೆಲ್ ಶಾಂತಿ ಪ್ರಶಸ್ತಿ: ಜೈಲಿನಲ್ಲಿರುವ ಇರಾನ್‌ನ ನರ್ಗೆಸ್ ಮೊಹಮ್ಮದಿಯವರಿಗೆ ಪುರಸ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...