Homeಅಂತರಾಷ್ಟ್ರೀಯಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

- Advertisement -
- Advertisement -

ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನಿರಾಕರಿಸಿ, ಹೆಚ್ಚುವರಿ ಡೇಟಾವನ್ನು ಕೇಳಿದೆ.

ಮಾನ್ಯತೆ ನೀಡಲು ಹೆಚ್ಚುವರಿ ಕ್ಲಿನಿಕಲ್ ಪ್ರಯೋಗಗಳಿಂದ ಡೇಟಾ ಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಕೊವ್ಯಾಕ್ಸಿನ್ ಇನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸದ ಕಾರಣಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದಕ್ಕೆ ಮಾನ್ಯತೆ ನೀಡಿಲ್ಲ.

ಜನವರಿ 16ರಿಂದ ಭಾರತದಲ್ಲಿ ಶುರುವಾದ ಲಸಿಕಾ ಅಭಿಯಾನದಲ್ಲಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಯ ಲಸಿಕೆ ಎಂದು ಭಾರತೀಯರಿಗೆ ನೀಡಲಾಗುತ್ತಿದೆ. ಬೇರೆಲ್ಲ ಕಡೆ ಮಾನ್ಯತೆ ಇಲ್ಲದಿರುವ ಲಸಿಕೆಯನ್ನು ನಮ್ಮ ದೇಹಕ್ಕೆ ಏಕೆ ಸೇರಿಸಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತದ ಲಸಿಕಾ ಅಭಿಯಾನಕ್ಕೆ ಅನುಮೋದಿಸಿದ ವಿದೇಶಿ ಲಸಿಕೆಗಳ ಬ್ರಿಡ್ಜಿಂಗ್‍ ಟ್ರಯಲ್ಸ್ ಅಗತ್ಯವಿಲ್ಲ ಎಂದು ಭಾರತದ ಔಷಧ ಮಂಡಳಿ ಹೇಳಿದೆ. ಅಂದರೆ ಪ್ರಾದೇಶಿಕವಾಗಿ ಯಾವುದೇ ಟ್ರಯಲ್ಸ್ ಇಲ್ಲದೇ ಈ ಲಸಿಕೆಗಳೂ ನಮ್ಮ ದೇಹ ಹೊಕ್ಕಲಿವೆ.

ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಸ್ಥಳೀಯ ಜನಸಂಖ್ಯೆಯಲ್ಲಿ ಸುರಕ್ಷತೆ ಮತ್ತು ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ಭಾರತೀಯರನ್ನು ಒಳಗೊಂಡಿರುವ ಸ್ಥಳೀಯ ಕ್ಲಿನಿಕಲ್ ಪ್ರಯೋಗಗಳು ಅಥವಾ ಬ್ರಿಡ್ಜ್ ಅಧ್ಯಯನಗಳನ್ನು ಸರ್ಕಾರ ಈ ಮೊದಲು ಬಯಸಿತ್ತು. ಆದರೆ ಈಗ ಅದಕ್ಕೆ ಬೈ ಬೈ ಹೇಳಿದೆ.

ಜುಲೈ ಮತ್ತು ಅಕ್ಟೋಬರ್ ನಡುವೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧವಾಗಿರುವ ಫಿಜರ್, ಯಾವುದೇ ತೀವ್ರ ಅಡ್ಡಪರಿಣಾಮಗಳಿಗೆ ಪರಿಹಾರ ನೀಡಲಾಗದು ಎಂಬ ಷರತ್ತು ಹಾಕಿದೆ. ಇಲ್ಲಿ ಕೊವ್ಯಾಕ್ಸಿನ್ ಅನ್ನು ದೇಸಿ ಲಸಿಕೆ ಕರೆದ ಸರ್ಕಾರ ಅದನ್ನು ನಮ್ಮ ದೇಹಕ್ಕೆ ಸೇರಿಸುತ್ತಿದೆ. ಅಭಿಯಾನ ಶುರುವಾಗಿ 5 ತಿಂಗಳಾದರೂ ಅದಿನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸಿಲ್ಲ ಎನ್ನಲಾಗಿದೆ.

ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನೂ ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಈ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ. ವಿದೇಶಕ್ಕೆ ತೆರಳುವ ಸಾವಿರಾರು ಜನರು ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು  ಕೊವ್ಯಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

ಕೊವಾಕ್ಸಿನ್‍ ಉತ್ಪಾದಿಸುತ್ತಿರುವ ಭಾರತ್‍ ಬಯೋಟೆಕ್‍ ಕಂಪನಿ ಮೂರನೇ ಕ್ಲಿನಿಕಲ್‍ ಟ್ರಯಲ್ಸ್ ವಿವರಗಳನ್ನು ಹಾಗೂ ಅದರ ಲಸಿಕೆಯ ಸಾಮರ್ಥ್ಯದ ಬಗೆಗಿನ ಪುರಾವೆಗಳನ್ನು 2021ರ ಜುಲೈ ತನಕ ಕೊಡಲು ಸಾಧ್ಯವಾಗುವುದಿಲ್ಲವೆಂದು ಹೇಳಿದೆ. ಅದಕ್ಕಾಗಿಯೇ ಈ ಕೊವ್ಯಾಕ್ಸಿನ್‍ಗೆ  ಈವರೆಗೆ WHO ಪರವಾನಗಿಯೂ ಸಿಕ್ಕಿಲ್ಲ.

ಆರಂಭದಲ್ಲೇ ಭಾರತ್‍ ಬಯೋಟೆಕ್‍ಗೆ ಮೆಲಿಂದಾ ಗೇಟ್ಸ್ ಫೌಂಡೇಷನ್‍ ಅಪಾರ ಧನಸಹಾಯ ಮಾಡಿದೆ. ನಮ್ಮದೇ ದೇಶದ, ಪುಣೆಯ ಸರ್ಕಾರಿ ಸಂಸ್ಥೆ ವೈರಾಲಿಜಿಕಲ್‍ ಇನ್‍ಸ್ಟಿಟ್ಯೂಟ್‍ ಮತ್ತು ಐಸಿಎಂಆರ್ ತಾಂತ್ರಿಕ ಮತ್ತು ವೈದ್ಯಕೀಯ ನೆರವು ನೀಡಿವೆ. ಭಾರತ ಸರ್ಕಾರ ಭಾರತ್‍ ಬಯೋಟೆಕ್‍ಗೆ  1,500 ಕೋಟಿ ರೂ ನೀಡಿದೆ. ಇಷ್ಟಾದ ಮೇಲೂ ವಿಶ್ವದಲ್ಲೇ ಅತಿ ದುಬಾರಿ ಲಸಿಕೆ ಅಂದರೆ ಅದು ಕೊವ್ಯಾಕ್ಸಿನ್!

ಪಿ.ಕೆ. ಮಲ್ಲನಗೌಡರ್

ನವಂಬರ್ 9, 2020ರಂದು ಕೊವಾಕ್ಸಿನ್ ಮೂರನೇ ಹಂತವು ‘ಕ್ಲಿನಿಕಲ್  ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿತು!


ಇದನ್ನೂ ಓದಿ; ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...