Homeಅಂತರಾಷ್ಟ್ರೀಯ'ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ' : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

- Advertisement -
- Advertisement -

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, “ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ” ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಮಿಲಿಟರಿ ಕ್ರಮವನ್ನು ಘೋಷಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಮ್ದಾನಿ ಪ್ರತಿಕ್ರಿಯಿಸಿದ್ದಾರೆ.

“ನಗರಗಳ ಮೇಲೆ ಬಾಂಬ್ ದಾಳಿ. ನಾಗರಿಕರನ್ನು ಕೊಲ್ಲುವುದು. ಹೊಸ ಯುದ್ಧ ರಂಗವನ್ನು ತೆರೆಯುವುದನ್ನು ಅಮೆರಿಕನ್ನರು ಬಯಸುವುದಿಲ್ಲ. ಆಡಳಿತ ಬದಲಾವಣೆಯನ್ನು ಮಾಡುವ ಸಲುವಾಗಿ ಮತ್ತೊಂದು ಯುದ್ಧವನ್ನು ಅಮೆರಿಕನ್ನರು ಬಯಸುವುದಿಲ್ಲ” ಎಂದು ಮಮ್ದಾನಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಅಮೆರಿಕನ್ನರು ಬಿಕ್ಕಟ್ಟಿಗೆ ಸುಲಭ ಪರಿಹಾರ ಬಯಸುತ್ತಾರೆ. ಅವರು ಶಾಂತಿ ಬಯಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

“ಆಡಳಿತ ಬದಲಾವಣೆ ಉತ್ತೇಜಿಸುವ ಉದ್ದೇಶದಿಂದ ಅಮೆರಿಕವು ಇರಾನ್‌ನೊಳಗೆ ‘ಪ್ರಮುಖ ಯುದ್ಧ ಕಾರ್ಯಾಚರಣೆಗಳನ್ನು’ ಪ್ರಾರಂಭಿಸಿದೆ” ಎಂದು ಟ್ರಂಪ್ ವಿಡಿಯೋ ಮೂಲಕ ಘೋಷಿಸಿದ್ದರು. ದಾಳಿಗಳು ಕೊನೆಗೊಂಡ ನಂತರ ತಮ್ಮ ಸರ್ಕಾರದ ನಿಯಂತ್ರಣವನ್ನು ಪಡೆದುಕೊಳ್ಳಿ ಎಂದು ಇರಾನಿಯನ್ನರಿಗೆ ಹೇಳಿದ್ದರು.

ನ್ಯೂಯಾರ್ಕ್ ನಗರದಲ್ಲಿ ವಸತಿ ಅಭಿವೃದ್ಧಿ, ಸ್ಥಳೀಯ ಸವಾಲುಗಳ ಕುರಿತು ಸಹಕಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಮಮ್ದಾನಿ ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಭೇಟಿಯಾಗಿದ ಎರಡು ದಿನಗಳ ನಂತರ, ಟ್ರಂಪ್ ಕ್ರಮಕ್ಕೆ ಮಮ್ದಾನಿ ಖಂಡನೆ ವ್ಯಕ್ತಪಡಿಸಿರುವುದು ಗಮನಾರ್ಹ.

ಟ್ರಂಪ್ ಭೇಟಿಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮಮ್ದಾನಿ ಮೇಕಿಂಗ್ ಅಮೆರಿಕ ಗ್ರೇಟ್ (ಎಂಎಜಿಎ) ನಾಯಕರೊಂದಿಗೆ (ಟ್ರಂಪ್ ಜೊತೆ) ಪ್ರೊಡಕ್ಟಿವ್ ಮಾತುಕತೆ ನಡೆಸುತ್ತೇವೆ. ಒಟ್ಟಿಗೆ ಕೆಲಸ ಮಾಡುವುದನ್ನು ಎದುರು ನೋಡುತ್ತೇವೆ ಎಂದಿದ್ದರು.

ಮಮ್ದಾನಿ ಚುನಾವಣೆಗೆ ನಿಂತಾಗ ಟ್ರಂಪ್ ವಿರುದ್ದ ಕಟು ಟೀಕೆ ವ್ಯಕ್ತಪಡಿಸಿದ್ದರು. ಆದರೆ, ಚುನಾವಣೆ ಗೆದ್ದು ನ್ಯೂಯಾರ್ಕ್ ಮೇಯರ್ ಆದ ಬಳಿಕ ಟ್ರಂಪ್ ಅವರನ್ನು ಭೇಟಿಯಾಗಿ ಉತ್ತಮ ಆಡಳಿತಕ್ಕೆ ಸಹಕಾರ ಕೋರಿದ್ದರು. ಈಗಲೂ ಟ್ರಂಪ್ ಅವರ ಮನುಷ್ಯ ವಿರೋಧಿ ಕ್ರಮಗಳನ್ನು ಟೀಕಿಸುವ ಮಮ್ದಾನಿ, ಆಡಳಿತದ ವಿಚಾರದಲ್ಲಿ ಅವರೊಂದಿಗೆ ಪರಸ್ಪರ ಸಹಕಾರದೊಂದಿಗೆ ಮುನ್ನಡೆಯಲು ಬಯಸಿದ್ದಾರೆ.

ಸೈದ್ದಾಂತಿಕ ಮತ್ತು ರಾಜಕೀಯವಾಗಿ ಮಮ್ದಾನಿ ಮತ್ತು ಟ್ರಂಪ್ ಪರಸ್ಪರ ವಿರೋಧಿಗಳು. ಮಮ್ದಾನಿ ಚುನಾವಣೆ ನಿಂತಾಗ ಟ್ರಂಪ್ ತೀವ್ರವಾಗಿ ಟೀಕಿಸಿದ್ದರು. ಮಮ್ದಾನಿ ಗೆದ್ದರೆ ಅಪಾಯ ಎಂಬಂತೆ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....