Homeಅಂತರಾಷ್ಟ್ರೀಯಇಸ್ರೇಲ್ ದಾಳಿಗೆ ಗಾಝಾದಲ್ಲಿ 2,450 ಕಟ್ಟಡಗಳು ಧ್ವಂಸ; ಯುದ್ಧದಲ್ಲಿ 22 ಅಮೆರಿಕನ್ನರು ಸಾವು

ಇಸ್ರೇಲ್ ದಾಳಿಗೆ ಗಾಝಾದಲ್ಲಿ 2,450 ಕಟ್ಟಡಗಳು ಧ್ವಂಸ; ಯುದ್ಧದಲ್ಲಿ 22 ಅಮೆರಿಕನ್ನರು ಸಾವು

- Advertisement -
- Advertisement -

ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಯುದ್ಧ ನಡೆಯುತ್ತಿದ್ದು, ಸಾವಿರಾರು ಮಂದಿ ಯುದ್ಧದಲ್ಲಿ ಮೃತಪಟ್ಟಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಗಾಝಾದಲ್ಲಿ ಸಾವಿನ ಸಂಖ್ಯೆ 1,200ಕ್ಕೆ ಏರಿಕೆಯಾಗಿದೆ. ಸುಮಾರು 5,600 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಪ್ಯಾಲೇಸ್ತೀನಿ ಮಾಧ್ಯಮಗಳು ವರದಿ ಮಾಡಿವೆ.

ಹಮಾಸ್ ದಾಳಿಯಲ್ಲಿ ಸುಮಾರು 22 ಅಮೆರಿಕನ್ನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 17 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಶ್ವೇತಭವನ ಬುಧವಾರ ಹೇಳಿದೆ.

ಹಮಾಸ್‌ ಒತ್ತೆಯಾಳಾಗಿ ಇರಿಸಿಕೊಂಡಿರುವವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಮೆರಿಕನ್ನರು ಕೂಡ ಸೇರಿರಬಹುದು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಹೇಳಿದ್ದಾರೆ. ಒತ್ತೆಯಾಳುಗಳನ್ನು ರಕ್ಷಿಸಲು ಯುಎಸ್ ಇಸ್ರೇಲ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇದುವರೆಗೆ 22 ಅಮೆರಿಕನ್ನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 17 ಮಂದಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ನಮಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶ್ವೇತಭವನದಲ್ಲಿ ಜಾನ್ ಕಿರ್ಬಿ ಹೇಳಿದ್ದಾರೆ.

ಇಸ್ರೇಲ್‌, ಗಾಝಾ ಪಟ್ಟಿಯ ಮೇಲೆ ನಡೆಸಿದ ಬಾಂಬ್‌ ದಾಳಿಯಲ್ಲಿ ಕನಿಷ್ಠ 2,450 ವಸತಿ ಕಟ್ಟಡಗಳು ಧ್ವಂಸಗೊಂಡಿದೆ ಮತ್ತು 22,850 ವಸತಿ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಗಾಜಾ ಸಾರ್ವಜನಿಕ ಕಾರ್ಯಗಳು ಮತ್ತು ವಸತಿ ಸಚಿವಾಲಯದ ಅಂಕಿ ಅಂಶಗಳು ತಿಳಿಸಿದೆ.

ಇನ್ನು ಹಮಾಸ್‌ ಸಶಸ್ತ್ರ ಗುಂಪು ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1200 ಮಂದಿ ಮೃತಪಟ್ಟಿದ್ದು, 2800 ಜನರು ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ. ಆದರೆ ಸಧ್ಯ ಎರಡೂ ದೇಶಗಳಲ್ಲಿ ಮೃತರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ, ಹಮಾಸ್‌ ಮತ್ತು ಇಸ್ರೇಲ್‌ ನಡುವೆ ಕದನ ಮುಂದುವರಿದಿದೆ.

ಇದನ್ನು ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...