Homeಅಂತರಾಷ್ಟ್ರೀಯಅಮೆರಿಕದ ಬಹು ನಿರೀಕ್ಷಿತ 'ಎಪ್‌ಸ್ಟೀನ್ ಫೈಲ್ಸ್' ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

- Advertisement -
- Advertisement -

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು ಶುಕ್ರವಾರ (ಡಿ.19) ಬಿಡುಗಡೆ ಮಾಡಿದೆ.

ಡಿಒಜಿ ಲಕ್ಷಾಂತರ ಪುಟಗಳ ಸಾವಿರಾರು ದಾಖಲೆಗಳನ್ನು ಬಿಡುಗಡೆ ಮಾಡಿದೆ. ಅವುಗಳು ಹಲವು ಫೋಟೋಗಳು, ಕೋರ್ಟ್ ದಾಖಲೆಗಳು, ಇಮೇಲ್‌ಗಳು ಮತ್ತು ತನಿಖಾ ವರದಿಗಳನ್ನು ಒಳಗೊಂಡಿವೆ ಎಂದು ವರದಿಗಳು ಹೇಳಿವೆ.

ಬಿಡುಗಡೆಯಾದ ದಾಖಲೆಗಳಲ್ಲಿ ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್, ಘಿಸ್ಲೇನ್ ಮ್ಯಾಕ್ಸ್‌ವೆಲ್, ಕೆವಿನ್ ಸ್ಪೇಸಿ ಮುಂತಾದವರೊಂದಿಗೆ ಎಪ್‌ಸ್ಟೀನ್ ಇರುವ ಫೋಟೋಗಳಿವೆ. ಕೆಲವು ಫೋಟೋಗಳಲ್ಲಿ ಮುಖಗಳನ್ನು ರೆಡ್ಯಾಕ್ಟ್ (ಕಪ್ಪು ಪಟ್ಟಿಯಿಂದ ಮರೆ ಮಾಚುವುದು) ಮಾಡಲಾಗಿದೆ.

ವರದಿಗಳ ಪ್ರಕಾರ, ಕೆಲ ಫೋಟೋಗಳ ಹೆಚ್ಚಿನ ಭಾಗ ಮತ್ತು ಕೆಲವು ದಾಖಲೆ ಪುಟಗಳನ್ನು ಸಂಪೂರ್ಣವಾಗಿ ರೆಡ್ಯಾಕ್ಟ್ ಮಾಡಲಾಗಿದೆ. ಹಾಗಾಗಿ, ಈ ದಾಖಲೆ ಬಿಡುಗಡೆ ಸರಿಯಾಗಿಲ್ಲ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಡಿಒಜಿ ಹೇಳಿದೆ.

ಹೊಸದಾಗಿ ಬಹಿರಂಗವಾದ ದಾಖಲೆಗಳಲ್ಲಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಪರಾಧಗಳ ಬಗ್ಗೆ ಹೊಸ ಆರೋಪಗಳು ಅಥವಾ ಪ್ರಮುಖ ವ್ಯಕ್ತಿಗಳ ವಿರುದ್ಧ ಹೊಸ ಸಾಕ್ಷ್ಯಗಳೇನು ಇಲ್ಲ.ಹಲವು ದಾಖಲೆಗಳು ಈಗಾಗಲೇ ಸಾರ್ವಜನಿಕವಾಗಿದ್ದವು ಎಂದು ವರದಿಗಳು ಹೇಳಿವೆ.

ಡೆಮಾಕ್ರಟ್‌ಗಳು ಮತ್ತು ಕೆಲವು ರಿಪಬ್ಲಿಕನ್‌ಗಳು ದಾಖಲೆ ಬಿಡುಗಡೆ ವೇಳೆ ಸರಿಯಾಗಿ ನಿಯಮ ಪಾಲನೆಯಾಗಿಲ್ಲ. ಮಾಹಿತಿಗಳನ್ನು ಮರೆ ಮಾಚಲಾಗಿದೆ ಎಂದು ಟೀಕಿಸಿದ್ದಾರೆ. ಆದರೆ,ಡಿಒಜಿ ಸಂತ್ರಸ್ತರ ಗೌಪ್ಯತೆ ಕಾಪಾಡಲು ರೆಡ್ಯಾಕ್ಟ್ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ.

ಡಿಒಜಿ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಎಪ್‌ಸ್ಟೀನ್ ಜೊತೆ ಬಿಲ್ ಕ್ಲಿಂಟನ್‌ ಇರುವ ಫೋಟೋ ಚರ್ಚೆಗೆ ಕಾರಣವಾಗಿದೆ. ಆದರೆ ಕ್ಲಿಂಟನ್ ಅವರು ಯಾವುದೇ ತಪ್ಪು ಮಾಡಿದ್ದಾರೆ ಎಂಬುದಕ್ಕೆ ದಾಖಲೆಗಳು ಸಾಕ್ಷ್ಯ ಒದಗಿಸಿಲ್ಲ.

ಡೊನಾಲ್ಡ್ ಟ್ರಂಪ್‌ಗೆ ಸಂಬಂಧಿಸಿದ ಕೆಲವು ಹಳೆಯ ಫೋಟೋಗಳು ಬಿಡುಗೆಯಾದ ದಾಖಲೆಗಳಲ್ಲಿ ಇವೆ. ಟ್ರಂಪ್ ವಿರುದ್ದವೂ ಯಾವುದೇ ಆರೋಪಗಳು ಮಾಡಿಲ್ಲ. ಟ್ರಂಪ್‌ಗೆ ಸಂಬಂಧಿಸಿದ ದಾಖಲೆಗಳು ಕಡಿಮೆಯೇ ಇವೆ ಎಂದು ವರದಿಯಾಗಿದೆ.

ಯಾವುದೇ ‘ಕ್ಲೈಂಟ್ ಲಿಸ್ಟ್’ ಅಥವಾ ದೊಡ್ಡ ಮಟ್ಟದ ಆರೋಪಗಳ ಮತ್ತು ಅಪರಾಧಗಳ ಕುರಿತು ಹೊಸದಾಗಿ ಏನೂ ದಾಖಲೆಗಳಲ್ಲಿ ಇಲ್ಲ ಎಂದಿವೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಡಿಒಜಿ ಹೇಳಿದೆ. ಹಾಗಾಗಿ, ಮುಂದೆ ಯಾವ ವಿಷಯಗಳು ಬಹಿರಂಗಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ನ್ಯಾಯ ಇಲಾಖೆಯು ಎಪ್‌ಸ್ಟೀನ್‌ ಪ್ರಕರಣದ ತನಿಖೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುವುದನ್ನು ಕಡ್ಡಾಯಗೊಳಿಸಿದ’ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್’ಅನ್ನು ಅಮೆರಿಕ ಸಂಸತ್ತು ಈ ಹಿಂದೆ ಅಂಗೀಕರಿಸಿತ್ತು. ಅದಕ್ಕೆ 2025ರ ನವೆಂಬರ್ 19ರಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಮಾಡಿ ಜಾರಿಗೊಳಿಸಿದ್ದರು.

ಕಾನೂನು ಜಾರಿಯಾದ 30 ದಿನಗಳೊಳಗೆ (ನವೆಂಬರ್ 19ರಿಂದ ಡಿಸೆಂಬರ್ 19, 2025ರವರೆಗೆ) ಎಲ್ಲಾ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕಿತ್ತು. ಅದರಂತೆ ನ್ಯಾಯ ಇಲಾಖೆ ನವೆಂಬರ್ 19ರಂದು ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...