Homeಮುಖಪುಟಕದನ ವಿರಾಮ | ಗಾಝಾ ಜನತೆಯಿಂದ ಸಂಭ್ರಮಾಚರಣೆ, ದಾಳಿ ಮುಂದುವರೆಸಿದ ಇಸ್ರೇಲ್

ಕದನ ವಿರಾಮ | ಗಾಝಾ ಜನತೆಯಿಂದ ಸಂಭ್ರಮಾಚರಣೆ, ದಾಳಿ ಮುಂದುವರೆಸಿದ ಇಸ್ರೇಲ್

- Advertisement -
- Advertisement -

ಕದನ ವಿರಾಮ ಮತ್ತು ಒತ್ತೆಯಾಳುಗಳ ಬಿಡುಗಡೆ ಒಪ್ಪಂದಕ್ಕೆ ಇಸ್ರೇಲ್ ಮತ್ತು ಹಮಾಸ್ ಒಪ್ಪಿಗೆ ಸೂಚಿಸಿದೆ. ಕದನ ವಿರಾಮ ಜನವರಿ 19ರಿಂದ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಕದನ ವಿರಾಮಕ್ಕೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಧ್ಯಸ್ಥಿಕೆ ವಹಿಸಿದ ಕತಾರ್ ಘೋಷಣೆ ಮಾಡುತ್ತಿದ್ದಂತೆ ಯುದ್ಧ ಪೀಡಿತ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ಈ ನಡುವೆ ಇಸ್ರೇಲ್ ತನ್ನ ಆಕ್ರಮಣ ಮುಂದುವರೆಸಿದೆ.

ಕದನ ವಿರಾಮ ಘೋಷಣೆಯಾದ ಬಳಿಕ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 40 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕದನ ವಿರಾಮ ಒಪ್ಪಿಗೆಯ ಮತದಾನ ಪ್ರಕ್ರಿಯೆಗೆ ಇಸ್ರೇಲ್ ಸಿದ್ದತೆ ನಡೆಸುತ್ತಿರುವ ನಡುವೆ ದಾಳಿ ನಡೆದಿದೆ ಎಂದು ವರದಿ ಹೇಳಿದೆ.

ಕತಾರ್ ರಾಜಧಾನಿ ದೋಹಾದಲ್ಲಿ ಕದನ ವಿರಾಮ ಒಪ್ಪಂದ ನಡೆದಿದೆ. ಇಸ್ರೇಲ್ ಸೇನೆಯನ್ನು ಸಂಪೂರ್ಣ ವಾಪಸ್ ಪಡೆಯಬೇಕು, ಯುದ್ಧಕ್ಕೆ ಶಾಶ್ವತ ವಿರಾಮ ಹಾಕಬೇಕು ಮತ್ತು ಗಾಝಾ ಜನತೆ ತಮ್ಮ ಮೂಲ ಸ್ಥಳಗಳಿಗೆ ಮರಳಲು ಅವಕಾಶ ನೀಡಬೇಕು ಷರತ್ತುಗಳನ್ನು ಕದನ ವಿರಾಮ ಒಪ್ಪಂದ ಪೂರೈಸಲಿದೆ ಎಂದು ಹಮಾಸ್ ಅಧಿಕಾರಿ ಇಜ್ಜತ್ ಅಲ್-ರಿಷೇಕ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ತಿಳಿಸಿದೆ.

ಒತ್ತೆಯಾಳುಗಳ ಬಿಡುಗಡೆಗೆ ಸಹಾಯ ಮಾಡಿದ ಯುಎಸ್‌ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಧನ್ಯವಾದ ಅರ್ಪಿಸಿದ್ದಾರೆ.

ಅಕ್ಟೋಬರ್ 7, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಈವರೆಗೆ 46,707 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,265 ಜನರು ಗಾಯಗೊಂಡಿದ್ದಾರೆ.

ಅಕ್ಟೋಬರ್ 7,2023ರಂದು ಹಮಾಸ್ ಗುಂಪು ಇಸ್ರೇಲ್‌ನ ಟೆಲ್‌ ಅವೀವ್ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...