Homeಮುಖಪುಟಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

ಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

- Advertisement -
- Advertisement -

ಕೊರೊನ ವೈರಸ್‌ಗೆ ಭಾರತದ ಪ್ರತಿಕ್ರಿಯೆ “ಪೂರ್ವಭಾವಿ, ಸಕ್ರಿಯ ಮತ್ತು ಶ್ರೇಣೀಕೃತ” ಎಂದು ಕೇಂದ್ರ ಸರ್ಕಾರ ಹೇಳಿದೆ. 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ಯಾವುದೇ ಯೋಜನೆ ಇಲ್ಲದೆ ಘೋಷಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.

ಆದರೆ ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಕೊರೊನ ವೈರಸ್‌ ಅನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಮೊದಲೇ ಸರ್ಕಾರವು ಜನವರಿ 30 ರಂದು ದೇಶದ ಗಡಿಗಳಲ್ಲಿ, ಸಮಗ್ರ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತಂದಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕವಾಗಿ ಸ್ಪೋಟಗೊಂಡ ಎರಡು ತಿಂಗಳ ನಂತರ ಆದ ಲಾಕ್‌ಡೌನ್ ಅನ್ನು ಹಠಾತ್ತನೆ ಮತ್ತು ಯೋಜನೆ ಇಲ್ಲದೆ ಘೋಷಿಸಲಾಗಿದೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರೆ ಹಾಗೂ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳನ್ನು ಮಾಡಲಾಗಿದೆ.

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರವು ಅಗತ್ಯವಾದವುಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿದೆ ಮತ್ತು ಸಾಮಾಜಿಕ ದೂರಕ್ಕಾಗಿ ಜನರು ಮನೆಯಲ್ಲಿಯೇ ಇರಬೇಕೆಂದು ಕೇಳಿಕೊಂಡಿದೆ.

ಸರ್ಕಾರವು ಪರಿಹಾರ ಕ್ರಮಗಳನ್ನು ಘೋಷಿಸಿದ್ದರೂ, ಅದು ಇನ್ನೂ ಹೆಚ್ಚು ಹಾನಿಗೊಳಗಾದ ಲಕ್ಷಾಂತರ ಜನರನ್ನು ತಲುಪಿಲ್ಲ.

ಒಳಬರುವ ವಾಯು ಪ್ರಯಾಣಿಕರನ್ನು ತಪಾಸಣೆ ಮಾಡುವುದು, ನಂತರ ವೀಸಾಗಳನ್ನು ಅಮಾನತುಗೊಳಿಸುವುದು ಮತ್ತು ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಇತರ ದೇಶಗಳಿಗಿಂತ ಹೆಚ್ಚು ಭಾರತವೂ ಮುಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

“ಚೀನಾ ಮತ್ತು ಹಾಂಗ್‌ಕಾಂಗ್‌ನಿಂದ ಒಳಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಉಷ್ಣ ತಪಾಸಣೆಯನ್ನು, ಜನವರಿ 30 ರಂದು ಭಾರತದಲ್ಲಿ ಮೊದಲ ಕೊರೊನ ವೈರಸ್ ಪ್ರಕರಣ ಪತ್ತೆಯಾಗುವುದಕ್ಕಿಂತ ಮುಂಚೆಯೇ ಜನವರಿ 18 ರಂದು ಪ್ರಾರಂಭಿಸಲಾಯಿತು’ ಎಂದುಹೇಳಿದೆ.

ಮೊದಲು ವರದಿಯಾದ ಪ್ರಕರಣಗಳ ನಂತರ ಕ್ರಮವಾಗಿ 25 ದಿನಗಳು ಮತ್ತು 39 ದಿನಗಳ ನಂತರ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ ಇಟಲಿ ಮತ್ತು ಸ್ಪೇನ್‌ನ ಉದಾಹರಣೆಗಳನ್ನು ಉಲ್ಲೇಖಿಸಿ, ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅದು ಕೈಗೊಂಡ ಕ್ರಮಗಳ ಕಾಲಾನುಕ್ರಮವನ್ನು ಹಂಚಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

30 ವಿಮಾನ ನಿಲ್ದಾಣಗಳು, 12 ಪ್ರಮುಖ ಮತ್ತು 65 ಸಣ್ಣ ಬಂದರುಗಳಲ್ಲಿ ಮತ್ತು ಭೂ ಗಡಿಗಳಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಲಾಗಿದೆ, 36 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕವರೇಜ್ ಸಂಪೂರ್ಣವಾಗಿದೆ ಮತ್ತು ಯಾವುದೇ ಅಂತರಗಳಿಲ್ಲ ಎಂದು ಕಣ್ಗಾವಲು ವ್ಯವಸ್ಥೆಯನ್ನು ನಿರ್ವಹಿಸಲು ಮತ್ತು ಮತ್ತಷ್ಟು ಸುಧಾರಿಸಲು ರಾಜ್ಯಗಳನ್ನು ನಿಯಮಿತವಾಗಿ ವಿನಂತಿಸಲಾಗಿದೆ ಎಂದು ಅದು ಹೇಳಿದೆ.

“ಒಂದು ನಿಖರವಾದ ವ್ಯವಸ್ಥೆಯು ಕಣ್ಗಾವಲು ತಪ್ಪಿಸಲು ಪ್ರಯತ್ನಿಸಿದ ಅಥವಾ ಸಂಪರ್ಕತಡೆಯನ್ನು ಅನುಸರಿಸದ ವ್ಯಕ್ತಿಗಳನ್ನು ಪತ್ತೆಹಚ್ಚಲು ರಾಜ್ಯಗಳಿಗೆ ಅನುವು ಮಾಡಿಕೊಟ್ಟಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಶನಿವಾರ ಕೊರೊನ ಪ್ರಕರಣಗಳ ಸಂಖ್ಯೆ 873 ಕ್ಕೆ ಏರಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...