Homeಮುಖಪುಟನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಸರ್ಕಾರ

ನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಸರ್ಕಾರ

- Advertisement -
- Advertisement -

ಪ್ರತಿಪಕ್ಷಗಳ ವಿರೋಧದ ನಡುವೆಯೂ ಜಮ್ಮು ಕಾಶ್ಮೀರ ಸರ್ಕಾರ ನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ತನ್ನ ವಶಕ್ಕೆ ಪಡೆದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕಾಶ್ಮೀರ ಕಣಿವೆಯ 10 ಜಿಲ್ಲೆಗಳ ಶಾಲೆಗಳ ಕಾರ್ಯನಿರ್ವಹಣೆಯನ್ನು ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಸರ್ಕಾರಿ ಶಾಲೆಗಳ ಪ್ರಾಂಶುಪಾಲರನ್ನು ಒಳಗೊಂಡ ವಿಶೇಷ ತಂಡ ವಹಿಸಿಕೊಂಡಿವೆ ಎಂದು ವರದಿ ಹೇಳಿದೆ.

ಜಮಾತೆ ಇಸ್ಲಾಮಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಯಾದ ಫಲಾಹ್-ಎ-ಆಮ್ ಟ್ರಸ್ಟ್ ನಡೆಸುತ್ತಿದ್ದ ಶಾಲೆಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಸರ್ಕಾರ ಶುಕ್ರವಾರ ಘೋಷಿಸಿತ್ತು.

ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ ಎಂಬ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಮಾತೆ ಇಸ್ಲಾಮಿ ಜಮ್ಮು ಕಾಶ್ಮೀರವನ್ನು 2019ರಲ್ಲಿ ನಿಷೇಧಿಸಲಾಗಿದೆ. (ಜಮಾತೆ ಇಸ್ಲಾಮಿ ಹಿಂದ್ ಭಾರತದಲ್ಲಿ ನಿಷೇಧಿಸಲ್ಪಟ್ಟಿಲ್ಲ ಎರಡೂ ಸಂಘಟನೆಗಳಿಗೆ ವ್ಯತ್ಯಾಸಗಳಿವೆ)

215 ಶಾಲೆಗಳ ವ್ಯವಸ್ಥಾಪಕ ಸಮಿತಿಯ ಸಿಂಧುತ್ವವು ಮುಕ್ತಾಯಗೊಂಡಿದ್ದು, ಆ ಸಂಸ್ಥೆಗಳ ವಿರುದ್ಧ ಗುಪ್ತಚರ ಸಂಸ್ಥೆಗಳು ಪ್ರತಿಕೂಲ ವರದಿ ನೀಡಿವೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ ಎಂದು ದಿ ಹಿಂದೂ ವರದಿ ವಿವರಿಸಿದೆ.

“ಈ ಶಾಲೆಗಳಲ್ಲಿ ದಾಖಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡುವ ಸಲುವಾಗಿ 215 ಶಾಲೆಗಳ ವ್ಯವಸ್ಥಾಪಕ ಸಮಿತಿಯನ್ನು ಸಂಬಂಧಪಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಉಪ ಆಯುಕ್ತರು ವಹಿಸಿಕೊಳ್ಳಬೇಕೆಂದು ಈ ಮೂಲಕ ಆದೇಶಿಸಲಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶವನ್ನು ದಿ ಹಿಂದೂ ವರದಿ ಉಲ್ಲೇಖಿಸಿದೆ ತಿಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಅಥವಾ ಜಿಲ್ಲಾಧಿಕಾರಿಗಳು ಹೊಸ ವ್ಯವಸ್ಥಾಪಕ ಸಮಿತಿಯನ್ನು ಪ್ರಸ್ತಾಪಿಸುತ್ತಾರೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.

ಆದರೆ, ಜಮ್ಮು ಕಾಶ್ಮೀರದ ಶಿಕ್ಷಣ ಸಚಿವೆ ಸಕೀನಾ ಇಟ್ಟೂ ಅವರು, ಈ ಶಾಲೆಗಳನ್ನು ಜಿಲ್ಲಾಧಿಕಾರಿಗಳಲ್ಲ, ಸರ್ಕಾರಿ ಶಾಲೆಗಳ ಪ್ರಾಂಶುಪಾಲರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ಟೀಕೆಗಳ ನಡುವೆ ಶಾಲೆಗಳ ಸ್ವಾಧೀನ “ತಾತ್ಕಾಲಿಕ” ಎಂದು ಇಟ್ಟೂ ತಿಳಿಸಿದ್ದಾರೆ.

“ಸರ್ಕಾರ ಸ್ವಾಧೀನಪಡಿಸಿಕೊಂಡ ಶಾಲೆಗಳ ಸಿಬ್ಬಂದಿ ಮುಂದುವರಿಯುತ್ತಾರೆ. ಸಿಐಡಿ ಪರಿಶೀಲನೆಯ ನಂತರ ಹೊಸ ನಿರ್ವಹಣಾ ಸಮಿತಿಗಳನ್ನು ರಚಿಸಲಾಗುವುದು. ಮೂರು ತಿಂಗಳ ನಂತರ ಪ್ರಕ್ರಿಯೆಯನ್ನು ಪರಿಶೀಲಿಸಲಾಗುವುದು” ಎಂದು ಸಚಿವೆ ಇಟ್ಟೂ ಹೇಳಿದ್ಧಾರೆ.

ಶಾಲೆಗಳ ಸ್ವಾಧೀನದ ಬಗ್ಗೆ ಪ್ರತಿಕ್ರಿಯಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, “ಕಾಶ್ಮೀರಿಗಳು ತಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಕಳೆದ ವರ್ಷ ನ್ಯಾಷನಲ್ ಕಾನ್ಫರೆನ್ಸ್‌ಗೆ ಮತ ಹಾಕಿದ್ದರು. ಆದರೆ, ನ್ಯಾಷನಲ್ ಕಾನ್ಫರೆನ್ಸ್ ಕೇಂದ್ರಾಡಳಿತ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಶಾಲೆಗಳನ್ನು ಗುರಿಯಾಗಿಸಿಕೊಂಡಿದೆ” ಎಂದು ಅವರು ಆರೋಪಿಸಿದ್ದಾರೆ.

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...