Homeಮುಖಪುಟಟಿಎಂಸಿ INDIA ಮೈತ್ರಿಕೂಟದ ಜೊತೆ ಇರಲಿದೆ: ಸೀಟು ಹಂಚಿಕೆ ವಿವಾದದ ಮಧ್ಯೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

ಟಿಎಂಸಿ INDIA ಮೈತ್ರಿಕೂಟದ ಜೊತೆ ಇರಲಿದೆ: ಸೀಟು ಹಂಚಿಕೆ ವಿವಾದದ ಮಧ್ಯೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಭಿನ್ನಾಭಿಪ್ರಾಯದ ಬೆನ್ನಲ್ಲಿ ಟಿಎಂಸಿ ಮೈತ್ರಿಯಿಂದ ಹೊರ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ಬಗ್ಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದು, ಬಿಜೆಪಿ ವಿರುದ್ಧದ ಹೋರಾಟದಲ್ಲಿ INDIA ಬಣದ ಭಾಗವಾಗಿ ಉಳಿಯುವುದಾಗಿ ಹೇಳಿದ್ದಾರೆ.

ಟಿಎಂಸಿಯ ಪಶ್ಚಿಮ ಮಿಡ್ನಾಪುರ ಜಿಲ್ಲಾ ಘಟಕದ  ಟಿಎಂಸಿ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧದ ಹೋರಾಟದಲ್ಲಿ ಟಿಎಂಸಿ INDIA ಬಣದ ಜೊತೆಗೆ ಇರಲಿದೆ. ಸಿಪಿಐ(ಎಂ)ನ್ನು ಟೀಕಿಸಿದರೂ ಅವರು ಕಾಂಗ್ರೆಸ್ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಲಿಲ್ಲ ಎಂದು ಸಭೆಯಲ್ಲಿದ್ದ ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಟಿಎಂಸಿ ಸೇರಿ INDIA ಮೈತ್ರಿಕೂಟದಲ್ಲಿ 28 ಪಕ್ಷಗಳಿವೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪಕ್ಷವು ಮುಕ್ತವಾಗಿದೆ, ಆದರೆ ಮಾತುಕತೆ ವಿಫಲವಾದರೆ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್‌ ಸಿದ್ಧವಾಗಿದೆ ಎಂದು ಟಿಎಂಸಿ ನಾಯಕ, ಸಂಸದ ಸುದೀಪ್ ಬಂಡೋಪಾಧ್ಯಾಯ ಅವರ ಇತ್ತೀಚಿಗೆ ಹೇಳಿಕೆಯನ್ನು ನೀಡಿದ್ದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಪಕ್ಷವು ಟಿಎಂಸಿಯಿಂದ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ ಎಂದು ಹೇಳಿದ ಎರಡು ದಿನಗಳ ಬಳಿಕ ಈ ಹೇಳಿಕೆ ಹೊರಬಿದ್ದಿತ್ತು. ಈ ವಿಷಯದ ಬಗ್ಗೆ ಮಾತನಾಡಲು ಅಧಿಕಾರವಿಲ್ಲ ಎಂದು ಹೆಸರಿಸಲು ನಿರಾಕರಿಸಿದ ಮತ್ತೊಬ್ಬ ಹಿರಿಯ ಟಿಎಂಸಿ ನಾಯಕ ಹೇಳಿದ್ದರು. ಪಶ್ಚಿಮ ಬಂಗಾಳದಲ್ಲಿ ಪಕ್ಷವು ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಆದರೆ ಅಗತ್ಯವಿದ್ದರೆ ಏಕಾಂಗಿಯಾಗಿ ಹೋಗಲು ಸಿದ್ಧವಾಗಿದೆ ಎಂದು ಹೇಳಿದ್ದರು.

ರಾಜ್ಯದ 42 ಲೋಕಸಭಾ ಸ್ಥಾನಗಳ ಪೈಕಿ 4 ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಟಿಎಂಸಿ ಚಿಂತನೆ ನಡೆಸಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಟಿಎಂಸಿ 22 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 2 ಸ್ಥಾನಗಳನ್ನು ಗೆದ್ದಿತು ಮತ್ತು ಬಿಜೆಪಿ 18 ಸ್ಥಾನಗಳನ್ನು ಗಳಿಸಿತ್ತು. ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರು ಮುರ್ಷಿದಾಬಾದ್ ಜಿಲ್ಲೆಯ ಬಹರಂಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಮಾಜಿ ಕೇಂದ್ರ ಸಚಿವರಾದ ಅಬು ಹಸೇಮ್ ಖಾನ್ ಚೌಧರಿ ಅವರು ಮಾಲ್ಡಾ ಜಿಲ್ಲೆಯ ಮಲ್ದಹಾ ದಕ್ಷಿಣ ಕ್ಷೇತ್ರದಿಂದ ಸತತ ಮೂರನೇ ಗೆಲುವು ಸಾಧಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಟಿಎಂಸಿ ಮುಖ್ಯಸ್ಥ ಬ್ಯಾನರ್ಜಿ ಈ ಹಿಂದೆ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಪ್ರಸ್ತಾವನೆಯನ್ನು ಸಿಪಿಐ(ಎಂ) ತಳ್ಳಿಹಾಕಿತ್ತು. ಈ ಮೊದಲು ಟಿಎಂಸಿ 2001ರ ವಿಧಾನಸಭೆ ಚುನಾವಣೆ, 2009ರ ಲೋಕಸಭೆ ಚುನಾವಣೆ ಮತ್ತು 2011ರ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಇದನ್ನು ಓದಿ: ‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...