Homeಕರ್ನಾಟಕಗುಜರಾತಿ ಮಾತೃಭಾಷೆಯ ಅಮಿತ್‌ ಶಾ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಗುಜರಾತಿ ಮಾತೃಭಾಷೆಯ ಅಮಿತ್‌ ಶಾ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ ಎಂದ ಗೃಹ ಸಚಿವನ ವಿರುದ್ದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

“ಹಿಂದಿ, ಇಂಗ್ಲೀಷ್, ತಮಿಳು,‌ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

“ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ. ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ” ಎಂದು ಹೇಳಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ” ಎಂದು ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

“ತಮಿಳುನಾಡು, ಕೇರಳ,‌ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಒಕ್ಕೂಟ ಸರ್ಕಾರದ ಗೃಹಸಚಿವರ ಈ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ‘ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...