Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...