Homeಚಳವಳಿರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಈ ನಡುವೆ ಇಂದು ಸಂಜೆ ಮಾತುಕತೆಗೆ ಬರುವಂತೆ ಪ್ರತಿಭಟನಾ ನಿರತ ರೈತರಿಗೆ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ರೈತರು ರಸ್ತೆ ತಡೆದು, ರೈಲು ಸಂಚಾರವನ್ನು ಸ್ಥಗಿತಗೊಳಿಸಿ, ಹೆದ್ದಾರಿಗಳನ್ನು ನಿರ್ಬಂಧಿಸಿ, ಮಾರುಕಟ್ಟೆಗಳನ್ನು ಮುಚ್ಚಿ ಬಂದ್ ಮಾಡುತ್ತಿದ್ದಾರೆ. ಹಲವಾರು ರಾಜ್ಯಗಳಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ.

“ನನಗೆ ಫೋನ್ ಕರೆ ಬಂತು. ಅಮಿತ್ ಶಾ ಅವರು ಸಭೆ ಕರೆದಿದ್ದಾರೆ. ನಮ್ಮನ್ನು 7 ಗಂಟೆಗೆ ಬರಲು ಹೇಳಿದ್ದಾರೆ. ದೆಹಲಿ ಬಳಿಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ” ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ.

ಇದನ್ನೂ ಓದಿ: ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ಇಂದಿನ ಪ್ರತಿಭಟನೆಗೆ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್‌ಎಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಬೆಂಬಲ ನೀಡಿವೆ.

ಈ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಇದುವರೆಗೂ ನಡೆದಿರುವ ಸುಮಾರು 5 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಕಳೆದ ಶುಕ್ರವಾರ ಸತತ ಏಳು ಗಂಟೆಗಳ ಕಾಲ ನಡೆದ ಮಾತುಕತೆಯೂ ಕೂಡ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ವಿಫಲವಾಗಿತ್ತು.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಹೊಸ ಕಾನೂನುಗಳನ್ನು ಹಿಂಪಡೆಯದ ಹೊರತು ಬೇರೇನೂ ಬೇಕಾಗಿಲ್ಲ ಎಂದು ರೈತ ಸಂಘಟನೆಗಳು ಪಟ್ಟುಹಿಡಿದಿವೆ.

ಮಾತುಕತೆಗಳ ನೇತೃತ್ವ ವಹಿಸಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, “ಸರ್ಕಾರಕ್ಕೆ ಯಾವುದೇ ಅಹಂ ಇಲ್ಲ. ಆದರೆ ಸರ್ಕಾರ ಈ ಕಾನೂನುಗಳನ್ನು ರದ್ದು ಮಾಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...