Homeಕರ್ನಾಟಕಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ನೈತಿಕ ಹಕ್ಕಿಲ್ಲ :

ಐದು ತಿಂಗಳಾದರೂ ಇಂದಿನವರೆಗೆ ಬರಗಾಲದ ಬಗ್ಗೆ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರ ಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟ ಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ, ಇಂದಿನವರೆಗೆ ಹೆಚ್ಚಿಸಿಲ್ಲ. 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು.

ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು :

ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈಗ ಅವರು ಬಿಜೆಪಿ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು. ದೇವೇಗೌಡರು ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು, ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು.

ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಗೆಲ್ಲಲಿದೆ :

ಚುನಾವಣೆ ರಣಕಹಳೆ ಮೈಸೂರಿನಿಂದಲೇ ಅಮಿತ್ ಶಾ ಮೊಳಗಿಸುತ್ತಿರುವ ಬಗ್ಗೆ ಮಾತನಾಡಿದ ಸಿಎಂ, ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೆಂಗಳೂರು: ಅಕ್ರಮ ಬಂಧನ ಆರೋಪ; ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಮಾನವ ಹಕ್ಕುಗಳ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...